ಕೋಲಾರ(ಡಿ.16) : ಎಂ.ಟಿ. ಬಿ. ನಾಗರಾಜ್‌ಗೆ ಬಿಜೆಪಿಯಲ್ಲಿ ಯಾವುದೇ ಸ್ಥಾನ ಮಾನ ಸಿಗಲು ಸಾಧ್ಯವೇ ಇಲ್ಲ ಎಂದು ಬಂಗಾರಪೇಟೆ ಕಾಂಗ್ರೆಸ್ ಶಾಸಕ ಎಸ್‌. ಎನ್‌. ನಾರಾಯಣಸ್ವಾಮಿ ಹೇಳಿದ್ದಾರೆ.

ಕೋಲಾರದಲ್ಲಿ ಮಾತನಾಡಿದ ಬಂಗಾರಪೇಟೆ ಕೈ ಶಾಸಕ ಎಸ್.ಎನ್ ನಾರಾಯಣಸ್ವಾಮಿ, ಕಾಂಗ್ರೆಸ್‌ನಲ್ಲಿ ಅಧಿಕಾರ ಪಡೆದುಕೊಂಡವರೆ ಬಿಜೆಪಿಗೆ ಹೋಗಿದ್ದಾರೆ. ಹೊಸ ನೀರು ಹೋದ ಮೇಲೆ ಹಳೆ ನೀರಿಗೆ ಅಲ್ಲಿ ಬೆಲೆ ಇಲ್ಲ. ಬಿಜೆಪಿಯಲ್ಲಿ ಸಚಿವ ಸಂಪುಟ ವಿಚಾರವಾಗಿ ಗೊಂದಲ ಮುಂದುವರೆಯುತ್ತೆ ಎಂದು ಹೇಳಿದ್ದಾರೆ.

ವಿದ್ಯಾರ್ಥಿನಿಯರ ಗುಪ್ತಾಂಗಕ್ಕೆ ಕೈ ಹಾಕಿ ಲೈಂಗಿಕ ಕಿರುಕುಳ..!

ಎಂಟಿಬಿಗೆ ಬಿಜೆಪಿಯಲ್ಲಿ ಸ್ಥಾನಮಾನ ಕೊಡಲು ಸಾಧ್ಯವೇ ಇಲ್ಲ. ಗೆದ್ದಿರೋರಿಗೆ ಸ್ಥಾನಮಾನ ಕೊಡೋದೆ ಕಷ್ಟವಾಗಿದೆ. ಹಳಬರು-ಹೊಸಬರನ್ನು ಒಟ್ಟಾಗಿ ಕರೆದುಕೊಂಡು ಹೋಗೋದೆ ಸಿಎಂಗೆ ಸರ್ಕಸ್ ಆಗುತ್ತೆ ಎಂದಿದ್ದಾರೆ.

ರಾಜಕೀಯದಲ್ಲಿ ಏನು ಬೇಕಾದರೂ ಆಗಬಹುದು. ನೂತನ ಶಾಸಕ ಶರತ್ ಬಚ್ಛೇಗೌಡ ಕಾಂಗ್ರೆಸ್‌ಗೆ ಬಂದರೆ ಸ್ವಾಗತಿಸುತ್ತೇವೆ. ಸ್ವತಂತ್ರ್ಯವಾಗಿ ಸ್ಪರ್ಧಿಸಿ ಗೆದ್ದಿರೋ ಶರತ್ ಏಕೆ ಕಾಂಗ್ರೆಸ್‌ಗೆ ಬರಬಾರದು ? ಡಿ.ಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಲಿ ಎಂದು ಹೈಕಮಾಂಡ್ ಗೆ ಒತ್ತಾಯ ಮಾಡುತ್ತೇನೆ ಎಂದು ಹೇಳಿದ್ದಾರೆ.

ಸರ್ಕಾರಿ ಕಾರ್ಯಕ್ರಮ ಉದ್ಘಾಟನೆಗೆ ಬಿಜೆಪಿ ಕಾರ್ಯಕರ್ತರು, ಕೈ ಶಾಸಕ ಗರಂ