ಮಂಗಳೂರು(ಅ.30): ವಿಧಾನಸಭೆಯ ಮಧ್ಯಂತರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಯಾವುದೇ ಗೊಂದಲ, ಬಿನ್ನಾಭಿಪ್ರಾಯಗಳಿಲ್ಲ. ರಾಜ್ಯದ 15 ಕ್ಷೇತ್ರಗಳಿಗೂ ಪಕ್ಷದಿಂದ ಸ್ಪರ್ಧೆ ನಡೆಯಲಿದ್ದು, ಈ ಪೈಕಿ 12ಕ್ಕೂ ಅಧಿಕ ಕ್ಷೇತ್ರದಲ್ಲಿ ಬಿಜೆಪಿ ಗೆಲವು ಸಾಧಿಸಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ವಿ.ಜೋಷಿ ಹೇಳಿದ್ದಾರೆ.

ಸೋಮವಾರ ಪುತ್ತೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನ ಸಭಾ ಉಪ ಚುನಾವಣೆಗೆ ಸಂಬಂಧಿಸಿ ಪಕ್ಷವು ಉತ್ತಮ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಕಣಕ್ಕಿಳಿಸಲಿದೆ. ಈ ಬಗ್ಗೆ ಎಲ್ಲೆಡೆ ಪ್ರಚಾರಕ್ಕಾಗಿ ಸಾಕಷ್ಟುಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದಿದ್ದಾರೆ.

ಬೊಕೆ ಕೊಟ್ರೆ ನೋ ಪ್ಲಾಸ್ಟಿಕ್ ಎಂದ್ರು ಕೇಂದ್ರ ಸಚಿವ..!

ಅಭ್ಯರ್ಥಿಗಳ ಆಯ್ಕೆ ಬಗ್ಗೆ ಕೇಂದ್ರದ ನಾಯಕರು ಸ್ಪಷ್ಟಸೂಚನೆ ನೀಡಲಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪ ಈ ಬಗ್ಗೆ ಈಗಾಗಲೇ ಕೇಂದ್ರದ ನಾಯಕರೊಂದಿಗೆ ಚರ್ಚೆ ನಡೆಸಿದ್ದಾರೆ ಎಂದು ತಿಳಿಸಿದರು.

ಬಿಎಸ್‌ವೈ ಹೇಳಿಕೆಗೆ ವಿಶೇಷ ಅರ್ಥ ಬೇಡ:

ತನ್ನದು ತಂತಿಯ ಮೇಲಿನ ನಡಿಗೆ ಎಂಬ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ನಮ್ಮ ಸರ್ಕಾರದಲ್ಲಿ ಈಗ ಬಹುಮತಕ್ಕಿಂತ ಕೇವಲ ಮೂರ್ನಾಲ್ಕು ಸ್ಥಾನ ಮಾತ್ರ ಹೆಚ್ಚಿದೆ. ಇದನ್ನು ಗಮನದಲ್ಲಿ ಇಟ್ಟುಕೊಂಡು ಮುಖ್ಯಮಂತ್ರಿ ಈ ಹೇಳಿಕೆ ನೀಡಿರಬಹುದು. ಅದು ಬಿಟ್ಟರೆ ಅದರಲ್ಲಿ ಬೇರೇನೂ ವಿಶೇಷ ಅರ್ಥ ಕಾಣುತ್ತಿಲ್ಲ. ಮುಂದಿನ ಮೂರೂ ಮುಕ್ಕಾಲು ವರ್ಷದ ತನಕ ಯಡಿಯೂರಪ್ಪ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಪತಿ ಸಾವಿನಿಂದ ಮನನೊಂದು ಇಬ್ಬರು ಮಕ್ಕಳೊಂದಿಗೆ ನದಿಗೆ ಹಾರಿದ ಮಹಿಳೆ