ಸವದತ್ತಿ ಎಲ್ಲಮ್ಮ ದೇವಿಯ ದರ್ಶನ ಸದ್ಯಕ್ಕೆ ಇಲ್ಲ.  ಭಕ್ತರಿಗೆ ದೇವಾಲಯಕ್ಕೆ ಪ್ರವೇಶವಿಲ್ಲ

ಬೆಳಗಾವಿ (ನ.01): ಮಹಾಮಾರಿ ಕೊರೋನಾ ವೈರಸ್‌ ಹಿನ್ನೆಲೆಯಲ್ಲಿ ಸಾರ್ವಜನಿಕರು ಹಾಗೂ ಭಕ್ತರ ಆರೋಗ್ಯದ ಹಿತದೃಷ್ಟಿಯಿಂದ ಸವದತ್ತಿಯ ಶ್ರೀರೇಣುಕಾ ಯಲ್ಲಮ್ಮ ದೇವಿ ದೇವಸ್ಥಾನ ಮತ್ತು ಜೋಗಳಭಾವಿ ಸತ್ತೆಮ್ಮ ದೇವಿಯ ದೇವಸ್ಥಾನ ದರ್ಶನಕ್ಕೆ ನಿರ್ಬಂಧವನ್ನು ಮತ್ತೆ ಒಂದು ತಿಂಗಳ ಕಾಲ ವಿಸ್ತರಿಸಲಾಗಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಡಿಸೆಂಬರ್‌ 31ರವರೆಗೆ ಈ ಎರಡೂ ದೇವಸ್ಥಾನಗಳ ದರ್ಶನಕ್ಕೆ ಸಾರ್ವಜನಿಕರಿಗೆ ನಿಷೇಧಿಸಿ ಜಿಲ್ಲಾ ದಂಡಾಧಿಕಾರಿ ಎಂ.ಜಿ.ಹಿರೇಮಠ ಅವರು ಆದೇಶ ಹೊರಡಿಸಿದ್ದಾರೆ.

ಬೆಳಗಾವಿಯಲ್ಲಿ ಭಾರೀ ಮಳೆ; ಸವದತ್ತಿ ಕೋಟೆಯ ಒಂದು ಭಾಗ ಕುಸಿತ .

 ಕೋವಿಡ್‌ ವೈರಸ್‌ ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಈ ಕ್ರಮ ಕೈಗೊಳ್ಳಲಾಗಿದ್ದು, ದೇವಸ್ಥಾನದ ಆಡಳಿತ ಮಂಡಳಿಯವರು ದಿನನಿತ್ಯದ ಧಾರ್ಮಿಕ ವಿಧಿ ವಿಧಾನಗಳನ್ನು ಹಾಗೂ ಎಲ್ಲ ಮುಂಜಾಗ್ರತಾ ಕ್ರಮ ಕೈಗೊಂಡು ನಡೆಸುವಂತೆ ಷರತ್ತು ವಿಧಿಸಲಾಗಿದೆ.