ಜು.31ರವರೆಗೆ ಕರಾವಳಿ ಮೀನುಗಾರಿಕೆ ನಿಷೇಧ
ಪ್ರತಿವರ್ಷದಂತೆ ಜೂ.1ರಿಂದ ಜು.31ರವರೆಗೆ ಒಟ್ಟು 61 ದಿನಗಳವರೆಗೆ ಕರ್ನಾಟಕವೂ ಸೇರಿದಂತೆ ನಮ್ಮ ದೇಶದ ಪಶ್ಚಿಮ ಕರಾವಳಿಯಲ್ಲಿ ಸಮುದ್ರದಲ್ಲಿ ಮಳೆಗಾಲದ ಮೀನುಗಾರಿಕೆ ನಿಷೇಧವನ್ನು ಘೋಷಿಸಲಾಗಿದೆ.
ಉಡುಪಿ(ಮೇ 21): ಪ್ರತಿವರ್ಷದಂತೆ ಜೂ.1ರಿಂದ ಜು.31ರವರೆಗೆ ಒಟ್ಟು 61 ದಿನಗಳವರೆಗೆ ಕರ್ನಾಟಕವೂ ಸೇರಿದಂತೆ ನಮ್ಮ ದೇಶದ ಪಶ್ಚಿಮ ಕರಾವಳಿಯಲ್ಲಿ ಸಮುದ್ರದಲ್ಲಿ ಮಳೆಗಾಲದ ಮೀನುಗಾರಿಕೆ ನಿಷೇಧವನ್ನು ಘೋಷಿಸಲಾಗಿದೆ.
ಮಳೆಗಾಲದಲ್ಲಿ ಮೀನುಗಳ ಸಂತಾನೋತ್ಪತ್ತಿ ಕಾಲವಾದ್ದರಿಂದ ಮತ್ತು ಈ ಅವಧಿಯಲ್ಲಿ ಸಮುದ್ರದಲ್ಲಿ ಮೀನುಗಾರಿಕೆ ಬಹಳ ಅಪಾಯಕಾರಿಯಾದ್ದರಿಂದ 2 ತಿಂಗಳ ಕಾಲ ಮೀನುಗಾರಿಕೆಯನ್ನು ನಿಷೇಧಿಸಲಾಗುತ್ತದೆ.
16 ರೈಲುಗಳಲ್ಲಿ 21,888 ವಲಸೆ ಕಾರ್ಮಿಕರ ಪ್ರಯಾಣ
ಈ ಅವಧಿಯಲ್ಲಿ ಕರ್ನಾಟಕ ಕರಾವಳಿ ಮೀನುಗಾರಿಕೆ ನಿಯಂತ್ರಣ ಕಾಯ್ದೆಯನ್ವಯ ಕರಾವಳಿಯಲ್ಲಿ ಎಲ್ಲಾ ರೀತಿಯ ಯಾಂತ್ರೀಕೃತ ದೋಣಿಗಳ, 10 ಅಶ್ವಶಕ್ತಿ ಸಾಮರ್ಥ್ಯಕ್ಕಿಂತ ಮೇಲ್ಪಟ್ಟಇನ್‌ಬೋರ್ಡ್ ಅಥವಾ ಔಟ್‌ಬೋರ್ಡ್ ಯಂತ್ರಗಳನ್ನು ಅಳವಡಿಸಿರುವ ಸಾಂಪ್ರದಾಯಿಕ ದೋಣಿಗಳ ಮೀನುಗಾರಿಕೆ ಚಟುವಟಿಕೆಯನ್ನು ನಿಷೇಧಿಸಲಾಗಿದೆ.
ಇದುವರೆಗೆ ಮಳೆಗಾಲದ ಮೀನುಗಾರಿಕೆ ನಿಷೇಧ ದೇಶದ ಒಂದೊಂದು ರಾಜ್ಯದಲ್ಲಿ ಒಂದು ರೀತಿ ಇತ್ತು. ಆದರೆ, ಈ ಬಾರಿ ಕೇಂದ್ರ ಕೃಷಿ, ಪಶುಸಂಗೋಪನೆ ಮತ್ತು ಮೀನುಗಾರಿಕೆ ಸಚಿವಾಲಯವು ಪಶ್ಚಿಮ ಕರಾವಳಿಯ ಎಲ್ಲಾ ರಾಜ್ಯಗಳ ವಿಶೇಷ ಆರ್ಥಿಕ ವಲಯದ (12 ರಿಂದ 200 ನಾಟಿಕಲ್ ಮೈಲಿ) ಜಲಪ್ರದೇಶದಲ್ಲಿ ಜೂ.1ರಿಂದ ಜು.31ರವರೆಗೆ ಏಕರೂಪದ ಮೀನುಗಾರಿಕೆ ನಿಷೇಧವನ್ನು ಜಾರಿಗೊಳಿಸಿದೆ.
ಮಧ್ಯವರ್ತಿಯಿಂದ ವಂಚನೆ: ಬಸ್‌ನಲ್ಲೇ 2 ದಿನ ಕಳೆದ ಗರ್ಭಿಣಿ
ಈ ನಿಷೇಧ ಆದೇಶವನ್ನು ಉಲ್ಲಂಘಿಸುವ ಮೀನುಗಾರರ ಮೇಲೆ ಕರ್ನಾಟಕ ಕಡಲ ಮೀನುಗಾರಿಕೆ ಕಾಯ್ದೆ -1986ರ ಅನ್ವಯ ಶಿಕ್ಷೆಯನ್ನು ವಿಧಿಸಲಾಗುತ್ತದೆ ಮತ್ತು 1 ವರ್ಷದ ಅವಧಿಗೆ ಡೀಸೆಲ್ ಮೇಲಿನ ಸಹಾಯಧನವನ್ನು ರದ್ದುಗೊಳಿಸಲಾಗುತ್ತದೆ ಎಂದು ಉಡುಪಿ ಜಿಲ್ಲಾ ಮೀನುಗಾರಿಕಾ ಉಪನಿರ್ದೇಶಕರು ತಿಳಿಸಿದ್ದಾರೆ.