ಕೋಲಾರ (ಸೆ.03): ಆನ್‌ಲೈನ್‌ ಮದ್ಯ ಮಾರಾಟದ ಕುರಿತು ತರಾತುರಿಯಲ್ಲಿ ತೀರ್ಮಾನ ಕೈಗೊಳ್ಳುವುದಿಲ್ಲ, ಸಾಧಕ ಬಾಧಕಗಳ ಕುರಿತು ಚರ್ಚಿಸಿಯೇ ಕ್ರಮ ಕೈಗೊಳ್ಳುವುದಾಗಿ ಅಬಕಾರಿ ಸಚಿವ ಎಚ್‌.ನಾಗೇಶ್‌ ತಿಳಿಸಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ಆನ್‌ಲೈನ್‌ ಮದ್ಯ ಮಾರಾಟಕ್ಕೆ ಬಾರ್‌ಗಳ ಅಸೋಸಿಯೇಷಯನ್‌ ವಿರೋಧ ವ್ಯಕ್ತಪಡಿಸಿದೆ. ಇತರೆ ರಾಜ್ಯಗಳಲ್ಲಿ ಆನ್‌ಲೈನ್‌ ಮದ್ಯ ಮಾರಾಟಕ್ಕೆ ಅವಕಾಶ ನೀಡಲಾಗಿದೆ. ಅದನ್ನು ಖುದ್ದು ಹೋಗಿ ಪರಿಶೀಲಿಸಿ ವರದಿ ನೀಡಲು ಅಧಿಕಾರಿಗಳ ತಂಡ ರಚಿಸಲಾಗಿದೆ. ಆನ್‌ಲೈನ್‌ ಮದ್ಯ ಮಾರಾಟದಿಂದ 18 ವರ್ಷದೊಳಗಿನ ಮಕ್ಕಳಿಗೆ ಸಮಸ್ಯೆಯಾಗಲಿದೆಯೇ, ಮಹಿಳೆಯರಿಗೆ ತೊಂದರೆಯಾಗಲಿದೆಯೇ ಎಂಬೆಲ್ಲಾ ಮಾಹಿತಿ ಪರಿಶೀಲಿಸಿಯೇ ಅಂತಿಮ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದರು.

ಕೊರೋನಾತಂಕ ನಡುವೆ ಆನ್‌ಲೈನ್‌ಮೂಲಕ ಮನೆ ಬಾಗಿಲಿಗೆ ಮದ್ಯ! ...

ಇನ್ನು ಇಲಾಖೆಯಲ್ಲಿ ಇರುವ ಖಾಲಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುವುದು. ಈಗಾಗಲೇ ಪಿಎಸ್‌ಐ ಹುದ್ದೆಗಳಿಂದ ಸಿಐ ಹುದ್ದೆಗಳಿಗೆ ಬಡ್ತಿ ನೀಡಲಾಗಿದೆ. ಇದರಿಂದ ಖಾಲಿಯಾಗಿರುವ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದರು

ಈ ಹಿಂದೆಯೂ ಅನೇಕ ಬಾರೀ ಆನ್‌ಲೈನ್ ಮದ್ಯ ಮಾರಾಟದ ಪ್ರಸ್ತಾಪ ಆಗಿದ್ದು, ಇದೀಗ ಮತ್ತೊಮ್ಮೆ ಈ ಬಗ್ಗೆ ರಾಜ್ಯದಲ್ಲಿ ಚರ್ಚೆ ಹೆಚ್ಚಾಗಿದೆ.