ಮಂಡ್ಯ(ನ.28): ಕಾಂಗ್ರೆಸ್‌ ನಾಯಕರಲ್ಲಿ ಯಾವುದೇ ಒಡಕಿಲ್ಲ. ಪಕ್ಷದ ವರಿಷ್ಠರ ಸೂಚನೆಯಂತೆ ಎಲ್ಲರೂ ಉಪ ಚುನಾವಣೆಯಲ್ಲಿ ಪ್ರಚಾರ ನಡೆಸುತ್ತಿದ್ದೇವೆ ಎಂದು ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ.

ಕಾಂಗ್ರೆಸ್‌ ಹಿರಿಯ ಮತ್ತು ಕಿರಿಯ ನಾಯಕರ ನಡುವೆ ಹೊಂದಾಣಿಕೆ ಇಲ್ಲ ಎನ್ನುವುದೆಲ್ಲ ಸುಳ್ಳು. ಉಪ ಚುನಾವಣೆ ನಡೆಯುವ 15 ಕ್ಷೇತ್ರಗಳಲ್ಲಿ ನಾಯಕರು ಕ್ಷೇತ್ರವಾರು ಚುನಾವಣಾ ಪ್ರಚಾರ ನಡೆಸುತ್ತಿದ್ದೇವೆ. ಇದನ್ನೇ ಮುಂದಿಟ್ಟುಕೊಂಡು ಕಾಂಗ್ರೆಸ್‌ ನಾಯಕರಲ್ಲಿ ಹೊಂದಾಣಿಕೆ ಇಲ್ಲ ಅಂದರೆ ಹೇಗೆ? ಕಾಂಗ್ರೆಸ್‌ ಟಿಕೆಚ್‌ ಹಂಚಿಕೆಯಲ್ಲಿ ಯಾವುದೇ ಗೊಂದಲ ಇಲ್ಲ. ಗೆಲುವು ಸಾಧಿಸುವ ಅಭ್ಯರ್ಥಿಗಳನ್ನು ಗುರುತಿಸಿ ಉಪ ಚುನಾವಣೆಯಲ್ಲಿ ಪಕ್ಷದ ವರಿಷ್ಠರ ಆದೇಶದಂತೆ ಟಿಕೆಚ್‌ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಮಂಡ್ಯ: ವಾಹನ ತಪಾಸಣೆ ಮಾಡದ ಪೇದೆಗಳ ಅಮಾನತು

ಉಪ ಚುನಾವಣೆ ಪಕ್ಷಕ್ಕೆ ಪ್ರತಿಷ್ಠೆಯ ಪ್ರಶ್ನೆ. ಹೀಗಾಗಿ ಹಿರಿಯ ಮತ್ತು ಕಿರಿಯ ನಾಯಕರೆಲ್ಲರೂ ಒಗ್ಗಟ್ಟಿನಿಂದ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡು ಕೆಲಸ ಮಾಡುತ್ತಿದ್ದೇವೆ. ಪ್ರಚಾರದಲ್ಲಿ ನಮ್ಮ ಕಾರ್ಯಕರ್ತರು ಶಕ್ತಿ ತುಂಬುವ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ನಮ್ಮಲ್ಲಿ ಭಿನ್ನಾಭಿಪ್ರಾಯ ಇಲ್ಲ. ಚುನಾವಣೆಯಲ್ಲಿ ಗೆಲುವು ಸಾಧಿಸುವುದಷ್ಟೇ ನಮ್ಮ ಗುರಿ ಎಂದಿದ್ದಾರೆ.

BSY ಪ್ಯಾಂಟ್, ಶರ್ಟನ್ನು ವಿಶ್ವನಾಥ್‌ ಹರಿದು ಹಾಕ್ತಾರೆ: ಡಿಕೆಶಿ