Asianet Suvarna News Asianet Suvarna News

ಮಂಡ್ಯ: 'ಖಾತೆ ಹಂಚಿಕೆಯಲ್ಲಿ ಯಾವುದೇ ಕಗ್ಗಂಟಿಲ್ಲ'

ಸಂಪುಟ ವಿಸ್ತರಣೆಯಾದ ನಂತರ ಬಿಜೆಪಿಯಲ್ಲಿ ಖಾತೆ ಹಂಚಿಕೆ ವಿಚಾರದಲ್ಲಿ ಯಾವುದೇ ಗೊಂದಲ ಇಲ್ಲ. ಮುಂದಿನ ಎರಡು ಮೂರು ದಿನಗಳಲ್ಲಿ ಖಾತೆ ಹಂಚಿಕೆ ಪೂರ್ಣಗೊಳ್ಳಲಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಹೇಳಿದರು. ಸಂಪುಟ ವಿಸ್ತರಣೆ ನಂತರ ಖಾತೆ ಹಂಚಿಕೆ ವಿಚಾರದಲ್ಲಿ ಪಕ್ಷದಲ್ಲಿ ಯಾವುದೇ ಕಂಗ್ಗಂಟಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

No issues in allotment of portfolios says minister v somanna
Author
Bangalore, First Published Aug 25, 2019, 8:05 AM IST
  • Facebook
  • Twitter
  • Whatsapp

ಮಂಡ್ಯ(ಆ.25): ಸಂಪುಟ ವಿಸ್ತರಣೆ ನಂತರ ಖಾತೆ ಹಂಚಿಕೆ ವಿಚಾರದಲ್ಲಿ ಪಕ್ಷದಲ್ಲಿ ಯಾವುದೇ ಕಂಗ್ಗಂಟಿಲ್ಲ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಶನಿವಾರ ಹೇಳಿದರು.

ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾಗಿ ನೇಮಕಗೊಂಡ ನಂತರ ಪ್ರಥಮ ಬಾರಿಗೆ ಮದ್ದೂರಿಗೆ ಆಗಮಿಸಿದ ಸೋಮಣ್ಣ, ವೀರಶೈವ ಅಭಿವೃದ್ಧಿ ಸಂಸ್ಥೆ ವತಿಯಿಂದ ಅಭಿನಂದನೆ ಸ್ವೀಕರಿಸಿ ಮಾತನಾಡಿ, ಸಂಪುಟ ವಿಸ್ತರಣೆಯಾದ ನಂತರ ಬಿಎಪಿಯಲ್ಲಿ ಖಾತೆ ಹಂಚಿಕೆ ವಿಚಾರದಲ್ಲಿ ಯಾವುದೇ ಗೊಂದಲ ಇಲ್ಲ. ಮುಂದಿನ ಎರಡು ಮೂರು ದಿನಗಳಲ್ಲಿ ಖಾತೆ ಹಂಚಿಕೆ ಪೂರ್ಣಗೊಳ್ಳಲಿದೆ ಎಂದರು.

2ನೇ ಹಂತದಲ್ಲಿ 16 ಸಚಿವ ಸ್ಥಾನ ಭರ್ತಿ:

ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ನೇತೃತ್ವದ ಸರ್ಕಾರದಲ್ಲಿ ಎಲ್ಲರಿಗೂ ಸಚಿವ ಸ್ಥಾನ ಸಿಗಲಿದೆ. ಈಗ ಮೊದಲನೇ ಹಂತದಲ್ಲಿ ಸಂಪುಟ ರಚನೆಯಾಗಿದೆ. ಇನ್ನೂ 16 ಸಚಿವ ಸ್ಥಾನ ಖಾಲಿ ಇದೆ. 2ನೇ ಹಂತದಲ್ಲಿ ಪಕ್ಷದ ಹೈಕಮಾಂಡ್‌ ಹಾಗೂ ಮುಖ್ಯಮಂತ್ರಿಗಳ ತೀರ್ಮಾನದಂತೆ ಸಂಪುಟ ವಿಸ್ತರಣೆಯಾಗುತ್ತದೆ. ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ತಾಳ್ಮೆ ಮುಖ್ಯ ಎಂದು ಹೇಳಿದರು.

ಮಂಡ್ಯ: ಸೆರೆಯಾದ ಚಿರತೆ, ದೂರಾದ ಆತಂಕ

ಸಚಿವ ಸ್ಥಾನದ ಆಕಾಂಕ್ಷಿಗಳಿಂದಲೇ ಬಿಜೆಪಿ ಸರ್ಕಾರ ಪತನವಾಗುತ್ತದೆ ಎಂಬ ಜೆಡಿಎಸ್‌ ಶಾಸಕರ ಹೇಳಿಕೆಗೆ ತಿರುಗೇಟು ನೀಡಿದ ಸೋಮಣ್ಣ, ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ಉಳಿದ ಅವಧಿಯನ್ನು ಪೂರ್ಣಗೊಳಿಸಲಿದೆ. ಅಧಿಕಾರ ಕಳೆದುಕೊಂಡ ವಿರೋಧಿ ಶಾಸಕರು ಇಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇದಕ್ಕೆ ರಾಜ್ಯದ ಜನರು ಬೆಲೆ ನೀಡಬಾರದು ಎಂದರು.

ಹೆಚ್ಚಿನ ಮಂಡ್ಯ ಜಿಲ್ಲಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ

ವೀರಶೈವ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಬಿ.ವಿ. ಮಂಜುನಾಥ್‌, ಶಿವಪುರ ಬಸವೇಶ್ವರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ನಾಗರಾಜರೆಡ್ಡಿ, ಬಿಜೆಪಿ ಮುಖಂಡ ಮಹೇಂದ್ರ, ಮುಖಂಡರಾದ ಕಲ್ಲೇಶ್‌, ಗುರುಮಲ್ಲೇಶ್‌, ರಕ್ಷಿತಾ, ಕೆ.ಎನ್‌.ಕರ್ಣ ಇದ್ದರು.

ಸಂಪ್ರದಾಯದಂತೆಯೇ ದಸರಾ ಆಚರಣೆ

ಪ್ರಕೃತಿ ವಿಕೋಪದ ಹಿನ್ನಲೆಯಲ್ಲಿ ಮೈಸೂರು ದಸರಾ ಮಹೋತ್ಸವದ ಆಚರಣೆಯ ಸಂಪ್ರದಾಯವನ್ನು ಮೊಟಕುಗೊಳಿಸುವುದಿಲ್ಲ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಸ್ಪಷ್ಟಪಡಿಸಿದರು.

ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರು ದಸರಾಕ್ಕೆ ತನ್ನದೇ ಆದ ಪರಂಪರೆ ಇದೆ. ಹೀಗಾಗಿ ಮೈಸೂರು ಅರಸರು ಹಾಕಿಕೊಟ್ಟಸಂಪ್ರದಾಯವನ್ನು ನಮ್ಮ ಸರ್ಕಾರ ಯಾವುದೇ ಕಾರಣಕ್ಕೂ ಮೊಟಕು ಮಾಡುವುದಿಲ್ಲ. ಎಂದಿನಂತೆ ದಸರಾ ಮಹೋತ್ಸವ ನಡೆಯಲಿದೆ. ಶನಿವಾರ ಮೈಸೂರಿನಲ್ಲಿ ನಡೆಯುವ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಸಭೆಯಲ್ಲಿ ಚರ್ಚೆ ನಡೆಸಿ ದಸರಾ ಮಹೋತ್ಸವವನ್ನು ಸಂಪ್ರದಾಯಬದ್ಧವಾಗಿ ಆಚರಿಸಲು ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಚಿವ ಸೋಮಣ್ಣ ತಿಳಿಸಿದರು.

Follow Us:
Download App:
  • android
  • ios