ಬೆಂಗಳೂರು(ಫೆ.20): ಮಹಾಶಿವರಾತ್ರಿಯ ಹಿನ್ನೆಲೆಯಲ್ಲಿ ಫೆ.21ರ ಶುಕ್ರವಾರ ಬಿಬಿಎಂಪಿ ವ್ಯಾಪ್ತಿಯ ಎಲ್ಲ ಕಸಾಯಿಖಾನೆಗಳಲ್ಲೂ ಮಾಂಸ ಮಾರಾಟ ಹಾಗೂ ಪ್ರಾಣಿಗಳ ವಧೆಯನ್ನು ನಿಷೇಧಿಸಲಾಗಿದೆ.

ಒಂದು ವೇಳೆ ಮಾಂಸ ಮಾರಾಟ ಹಾಗೂ ಪ್ರಾಣಿ ವಧೆ ಕಂಡು ಬಂದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಬಿಬಿಎಂಪಿ ಅಧಿಕಾರಿಗಳು ಪ್ರಕಟಣೆ ಮೂಲಕ ಎಚ್ಚರಿಕೆ ನೀಡಿದ್ದಾರೆ.

ಮಹಾಲಕ್ಷ್ಮೀಪುರದ ತ್ಯಾಜ್ಯ ವಿಂಗಡಣೆ ಘಟಕ ಮುಚ್ಚಿ: BBMPಗೆ ಹೈಕೋರ್ಟ್‌ ಸೂಚನೆ

ಶಿವರಾತ್ರಿ ಹಿನ್ನೆಲೆಯಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಎಲ್ಲಿಯೂ ಮಾಂಸ ಮಾರಾಟ ಲಭ್ಯವಿರುವುದಿಲ್ಲ. ಶಿವರಾತ್ರಿಯಂದು ಜನರು ಮಾಂಸ ಖಾದ್ಯಗಳನ್ನು ಸೇವಿಸುವುದಿಲ್ಲ. ಹಾಗೆಯೇ ಪ್ರಾಣಿ ವಧೆಯನ್ನು ನಿಷೇಧಿಸಲಾಗಿದೆ.