'ಬ್ರ್ಯಾಂಡ್ ಬೆಂಗಳೂರು' ಬೇಡ ಸುರಕ್ಷಿತ ನಗರ ಸಾಕು: ಆರ್‌. ಅಶೋಕ್‌

ಕಾಂಗ್ರೆಸ್ ಸರ್ಕಾರ ಇಂತಹ ಯಾವುದೇ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ. ಕೆಲ ತಿಂಗಳ ಹಿಂದೆ ವಿದ್ಯುತ್ ತಂತಿ ತಗುಲಿ ತಾಯಿ ಮತ್ತು ಮಗು ಮೃತಪಟ್ಟಾಗ ಅದಕ್ಕೆ ಇಲಿ ಕಾರಣ ಎಂದು ಹೇಳಿದ್ದರು. ಮಳೆ ನೀರಿನಲ್ಲಿ ಮಗು ಕೊಚ್ಚಿಕೊಂಡು ಹೋಗಿರುವುದು, ಮರ ಬೀಳುವುದರಿಂದ ಅನಾಹುತ ಮೊದಲಾದವು ಬ್ರ್ಯಾಂಡ್ ಬೆಂಗಳೂರಿನ ಮಹಿಮೆಯಿಂದ ಆಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ವಿಪಕ್ಷ ನಾಯಕ ಆರ್. ಅಶೋಕ್ 
 

No need for Brand Bengaluru, safe city is enough Says R Ashok grg

ಬೆಂಗಳೂರು(ಅ.25):  ಸರ್ಕಾರ ನಮಗೆ ಬ್ರ್ಯಾಂಡ್ ಬೆಂಗಳೂರು ನೀಡುವುದು ಬೇಡ. ಸುರಕ್ಷಿತ ಬೆಂಗಳೂರು ನೀಡಿದರೆ ಸಾಕು ಎಂದು ವಿಪಕ್ಷ ನಾಯಕ ಆರ್. ಅಶೋಕ್ ವ್ಯಂಗ್ಯವಾಗಿ ಹೇಳಿದ್ದಾರೆ. 

ಬಾಬುಸಾಪಾಳ್ಯದಲ್ಲಿ ನಿರ್ಮಾಣ ಹಂತದ ಬಹುಮಹಡಿ ಕಟ್ಟಡ ಕುಸಿದ ಸ್ಥಳಕ್ಕೆ ಗುರುವಾರ ವಿಧಾನಪರಿಷತ್ತಿನ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಶಾಸಕರಾದ ಡಾ। ಸಿ.ಎನ್.ಅಶ್ವತ್ಥನಾರಾಯಣ, ಬೈರತಿ ಬಸವರಾಜು ಅವ ರೊಂದಿಗೆ ಭೇಟಿ ನೀಡಿದ ಅವರು ಸಂತ್ರಸ್ತರು ಹಾಗೂ ಅಧಿ ಕಾರಿಗಳೊಂದಿಗೆ ಮಾತುಕತೆ ನಡೆಸಿದರು. 

ನಿರಂತರ ಮಳೆಗೆ ವಿಶ್ವದಲ್ಲೇ 2ನೇ ಏಕಶಿಲಾ ಗಿರಿಯ ಕಲ್ಲುಕೋಟೆ ಗೋಡೆ ಕುಸಿತ: ದುರಸ್ತಿ ಮಾಡುವಂತೆ ಪ್ರವಾಸಿಗರ ಆಗ್ರಹ

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಕಾಂಗ್ರೆಸ್ ಸರ್ಕಾರ ಬಂದ ನಂತರ ಬ್ರ್ಯಾಂಡ್ ಬೆಂಗಳೂರು ಎಂಬ ಹೆಸರು ಹುಟ್ಟುಹಾಕಿದ್ದಾರೆ. ಆದರೆ ನಗರದಲ್ಲಿ ದಿನಕ್ಕೊಂದು ಅವಘಡ ಸಂಭವಿಸುತ್ತಿದೆ. ಬಾಬುಸಾಪಾಳ್ಯದಲ್ಲಿ ಕಟ್ಟಡ ಕುಸಿತವಾಗಿದ್ದು, ಎಂಟು ಅಮಾಯಕರು ಮೃತರಾಗಿದ್ದಾರೆ. ಇಲ್ಲಿನ 20 ಅಡಿ ರಸ್ತೆಗೆ ಹೆಚ್ಚೆಂದರೆ 3 ಮಹಡಿ ನಿರ್ಮಿಸಬಹುದು. ಆದರೆ 7 ಮಹಡಿ ನಿರ್ಮಿಸಲು ಹೊರಟಿದ್ದರಿಂದ ಅವಘಡ ನಡೆದಿದೆ. ಬಿಬಿಎಂಪಿ ಅಧಿಕಾರಿಗಳು ಇದನ್ನು ಸರಿಯಾಗಿ ನಿರ್ವಹಣೆ ಮಾಡಿದ್ದರೆ ಎಲ್ಲವೂ ಸರಿ ಇರುತ್ತಿತ್ತು ಎಂದರು. 

ಬ್ರ್ಯಾಂಡ್ ಬೆಂಗಳೂರಿನ ಮಹಿಮೆ: 

ಕಾಂಗ್ರೆಸ್ ಸರ್ಕಾರ ಇಂತಹ ಯಾವುದೇ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ. ಕೆಲ ತಿಂಗಳ ಹಿಂದೆ ವಿದ್ಯುತ್ ತಂತಿ ತಗುಲಿ ತಾಯಿ ಮತ್ತು ಮಗು ಮೃತಪಟ್ಟಾಗ ಅದಕ್ಕೆ ಇಲಿ ಕಾರಣ ಎಂದು ಹೇಳಿದ್ದರು. ಮಳೆ ನೀರಿನಲ್ಲಿ ಮಗು ಕೊಚ್ಚಿಕೊಂಡು ಹೋಗಿರುವುದು, ಮರ ಬೀಳುವುದರಿಂದ ಅನಾಹುತ ಮೊದಲಾದವು ಬ್ರ್ಯಾಂಡ್ ಬೆಂಗಳೂರಿನ ಮಹಿಮೆಯಿಂದ ಆಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. 

ಸಿಎಂ ಸಿದ್ದರಾಮಯ್ಯ ಅವರು ಬರುವ ರಸ್ತೆಯ 2 ಬದಿ ಕಸ ರಾಶಿಯಾಗಿ ಬಿದ್ದಿದೆ. ಅಂದರೆ ಉಪಮುಖ್ಯಮಂತ್ರಿ ಯಾಗಲೀ, ಮುಖ್ಯಮಂತ್ರಿಯಾಗಲಿ ಇಲ್ಲಿ ಯಾರಿಗೂ ಬೆಲೆ ಇಲ್ಲ. ಒಂದು ವಾರದಿಂದ ಸರಿಯಾಗಿ ಕಸ ವಿಲೇವಾರಿ ಮಾಡಿಲ್ಲ. ವಿದ್ಯುತ್ ಕಂಬಗಳಿಂದ ಇನ್ನೆಷ್ಟು ಜನ ಸಾಯುತ್ತಾರೆಂದು ಗೊತ್ತಿಲ್ಲ. ಸರ್ಕಾರ ಇನ್ನಾದರೂ ಎಚ್ಚೆತ್ತುಕೊಳ್ಳಲಿ ಎಂದು ಹೇಳಿದರು.

Latest Videos
Follow Us:
Download App:
  • android
  • ios