Asianet Suvarna News Asianet Suvarna News

ಮತದಾರರ ಹೆಸರು ಡಿಲೀಟ್‌ಗೆ ಆಕ್ಷೇಪಣೆ ಬಂದಿಲ್ಲ: ಡಿಸಿ ರವಿ ಕುಮಾರ್‌

ಮತದಾರರ ಹೆಸರು ಡಿಲೀಟ್‌ ಆಗಿರುವ ಕುರಿತಂತೆ ಬೆಂಗಳೂರಿನಲ್ಲಿ ಕೇಳಿ ಬಂದಿರುವ ದೂರಿನಂತೆ ನಮ್ಮ ಜಿಲ್ಲೆಯಲ್ಲಿ ನಡೆದಿರುವ ಕುರಿತಂತೆ ಯಾವುದೇ ರಾಜಕೀಯ ಪಕ್ಷಗಳಿಂದ ಆಕ್ಷೇಪಣೆ, ದೂರು ಬಂದಿಲ್ಲ.ಎಂದು ದ.ಕ. ಜಿಲ್ಲಾಧಿಕಾರಿ ರವಿ ಕುಮಾರ್‌ ಎಂ.ಆರ್‌. ಸ್ಪಷ್ಟಪಡಿಸಿದ್ದಾರೆ.

No objection received for deletion of voters name says dc ravikumar at mangaluru rav
Author
First Published Dec 3, 2022, 7:24 AM IST

ಮಂಗಳೂರು (ಡಿ.3): ಮತದಾರರ ಹೆಸರು ಡಿಲೀಟ್‌ ಆಗಿರುವ ಕುರಿತಂತೆ ಬೆಂಗಳೂರಿನಲ್ಲಿ ಕೇಳಿ ಬಂದಿರುವ ದೂರಿನಂತೆ ನಮ್ಮ ಜಿಲ್ಲೆಯಲ್ಲಿ ನಡೆದಿರುವ ಕುರಿತಂತೆ ಯಾವುದೇ ರಾಜಕೀಯ ಪಕ್ಷಗಳಿಂದ ಆಕ್ಷೇಪಣೆ, ದೂರು ಬಂದಿಲ್ಲ. ಬಿಎಲ್‌ಒ(ಬೂತ್‌ ಮಟ್ಟದ ಅಧಿಕಾರಿ)ಗಳು ಪರಿಷ್ಕರಣೆಗೆ ತೆರಳಿಸುವ ಸಂದರ್ಭ ಸೂಕ್ತ ವಿಧಾನದ ಮೂಲಕ ಮರಣ ಆಗಿರುವ, ಹೊರ ದೇಶಗಳಲ್ಲಿರುವ ಮತದಾರರ ಹೆಸರನ್ನು ಪರಿಷ್ಕರಣೆ ಮಾಡಿದ್ದಾರೆ ಎಂದು ದ.ಕ. ಜಿಲ್ಲಾಧಿಕಾರಿ ರವಿ ಕುಮಾರ್‌ ಎಂ.ಆರ್‌. ಸ್ಪಷ್ಟಪಡಿಸಿದ್ದಾರೆ. ಮತದಾರರ ಪಟ್ಟಿಪರಿಷ್ಕರಣೆ ಕುರಿತಂತೆ ಪ್ರೆಸ್‌ಕ್ಲಬ್‌ನಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಅವರು ಪ್ರಶ್ನೆಯೊಂದಕ್ಕೆ ಈ ಉತ್ತರ ನೀಡಿದರು.

ಈಗಾಗಲೇ ಮತದಾರರ ಪಟ್ಟಿಪರಿಷ್ಕರಣೆ ನಡೆಯುತ್ತಿದೆ. ವಿಶೇಷ ಅಭಿಯಾನದ ಮೂಲಕ ಮತದಾರರ ಹೆಸರು ಸೇರ್ಪಡೆ ಕಾರ್ಯವೂ ನಡೆಯುತ್ತಿದ್ದು, ಡಿಸೆಂಬರ್‌ 8ರ ವರೆಗೆ ಸೇರ್ಪಡೆ ಹಾಗೂ ಪರಿಷ್ಕರಣೆಗೆ ಅವಕಾಶವಿದೆ. ಮತದಾರರು ಇದರ ಪ್ರಯೋಜನ ಪಡೆದುಕೊಳ್ಳಬೇಕು. ರಾಜಕೀಯ ಪಕ್ಷಗಳ ಪ್ರತಿನಿಧಿಗಳು, ಸಂಘ ಸಂಸ್ಥೆಗಳವರು, ಕಾಲೇಜು ಆಡಳಿತ ಮಂಡಳಿಗಳು ಕೂಡಾ ಮತದಾರರಿಗೆ ಈ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು ಎಂದು ಅವರು ಈ ಸಂದರ್ಭ ಕರೆ ನೀಡಿದರು.

ಮಂಗಳೂರು ಬಾಂಬ್‌ ಸ್ಫೋಟ: ಮೈಸೂರಿಗೂ ಮುನ್ನ ಕೇರಳದಲ್ಲಿದ್ದ ಶಾರೀಕ್‌

ಈ ಮೊದಲು ಜನವರಿ 1ರೊಳಗೆ 18 ವರ್ಷ ಪೂರ್ಣಗೊಳಿಸಿದವರನ್ನು ಮಾತ್ರವೇ ನೋಂದಾಯಿಸಲು ಅವಕಾಶವಿತ್ತು. ಇದೀಗ 17 ವರ್ಷ ತುಂಬಿದ ಯುವಕರು ಒಂದು ವರ್ಷ ಮುಂಚಿತವಾಗಿ ಅರ್ಜಿ ಸಲ್ಲಿಸಲು ಅವಕಾಶವಿದೆ.ಅದರಂತೆ ವರ್ಷದಲ್ಲಿ ನಾಲ್ಕು ಅರ್ಹತಾ ದಿನಾಂಕಗಳನ್ನು ನಿಗದಿಪಡಿಸಲಾಗಿದೆ. ಮುಂಚಿತವಾಗಿ ಅರ್ಜಿ ಸಲ್ಲಿಸಿದವರನ್ನು ಜನವರಿ 1, ಎಪ್ರಿಲ್‌ 1, ಜುಲೈ 1 ಹಾಗೂ ಅಕ್ಟೋಬರ್‌ 1ರ ಅರ್ಹತಾ ದಿನಾಂಕಕ್ಕೆ 18 ವರ್ಷ ಪೂರ್ಣಗೊಳಿಸುವ ಮತದಾರರನ್ನು ಪಟ್ಟಿಗೆ ಸೇರ್ಪಡೆ ಮಾಡಲಾಗುವುದು. ಆ ಪ್ರಕಾರ 17 ವರ್ಷ ದಾಟಿದ ಅರ್ಜಿದಾರರು ನಮೂನೆ 6ರಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಅವರು ಹೇಳಿದರು.

ಡಿ.3-4ರಂದು ವಿಶೇಷ ನೋಂದಣಿ ಅಭಿಯಾನ

ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಸಂಬಂಧಿಸಿ ಡಿ.3 ಮತ್ತು 4ರಂದು ವಿಶೇಷ ನೋಂದಣಿ ಅಭಿಯಾನದ ಕೊನೆಯ ದಿನಗಳಾಗಿವೆ ಡಿ. 26ರೊಳಗೆ ಹಕ್ಕು ಮತ್ತು ಆಕ್ಷೇಪಣೆಗಳನ್ನು ವಿಲೇವಾರಿ ಮಾಡಲಾಗುವುದು. 2023ರ ಜನವರಿ 5ರಂದು ಅಂತಿಮ ಮತದಾರರ ಪಟ್ಟಿಪ್ರಕಟಗೊಳ್ಳಲಿದೆ ಎಂದು ದ.ಕ. ಜಿಲ್ಲಾಧಿಕಾರಿ ರವಿಕುಮಾರ್‌ ತಿಳಿಸಿದರು.

POCSO: ನೈಜ ಆರೋಪಿಯನ್ನ ಬಂಧಿಸದ ಪೊಲೀಸರು: 5 ಲಕ್ಷ ರು. ಪರಿಹಾರ ಆದೇಶಿಸಿದ ಕೋರ್ಟ್

ಮತದಾರರ ಪಟ್ಟಿಪರಿಶೀಲಿಸಿಕೊಳ್ಳಿ

ಮತದಾನದ ಸಂದರ್ಭದಲ್ಲಿ ಯಾವುದೇ ರೀತಿಯ ಆಕ್ಷೇಪಣೆ, ದೂರುಗಳಿಗೆ ಅವಕಾಶವಿರುವುದಿಲ್ಲ. ಹಾಗಾಗಿ ಡಿ. 8ರೊಳಗೆ ಎಲ್ಲಾ ಮತದಾರರು ಕರಡು ಪಟ್ಟಿಯಲ್ಲಿ ತಮ್ಮ ಹೆಸರು ಇರುವುದನ್ನು ಖಾತರಿಪಡಿಸಬೇಕು. ಇಲ್ಲವಾದಲ್ಲಿ ಅಥವಾ ತಿದ್ದುಪಡಿ ಅಥವಾ ಆಕ್ಷೇಪಣೆ ಇದ್ದಲ್ಲಿ ತಮ್ಮ ವ್ಯಾಪ್ತಿಯ ಬಿಎಲ್‌ಒಗಳ ಮೂಲಕ ಸಲ್ಲಿಸಬಹುದು. ವೆಬ್‌ಪೋರ್ಟಲ್‌- ್ಚಛಿಟka್ಟ್ಞaಠಿaka.ka್ಟ.್ಞಜ್ಚಿ.ಜ್ಞಿ, ್ಞvsp.ಜ್ಞಿ, dk.್ಞಜ್ಚಿ.ಜ್ಞಿ ನಲ್ಲಿಯೂ ಮತದಾರರು ಪರಿಶೀಲನೆ ನಡೆಸಬಹುದು. ಮತದಾರರ ಜಿಲ್ಲಾ ಸಹಾಯವಾಣಿ 1950ಗೆ ಕರೆ ಮಾಡಿ ಮಾಹಿತಿ ಪಡೆಯಬಹುದು ಎಂದು ಜಿಲ್ಲಾಧಿಕಾರಿ ರವಿ ಕುಮಾರ್‌ ಹೇಳಿದರು.

 ಉಡುಪಿ ಜಿಲ್ಲೆಯ 1 ಲಕ್ಷ ಮತದಾರರ ಹೆಸರು ಡಿಲೀಟ್‌: ಕಾಂಗ್ರೆಸ್‌ ಆರೋಪ

ಜಿಲ್ಲೆಯ 12 ಲಕ್ಷ ಮತದಾರರಲ್ಲಿ 1 ಲಕ್ಷ ಮತದಾರರ ಹೆಸರುಗಳನ್ನು ಕೈಬಿಡಲಾಗಿದೆ. ಇದು ಬಿಜೆಪಿಯ ಷಡ್ಯಂತ್ರ ಎಂದು ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಅಶೋಕ್‌ ಕುಮಾರ್‌ ಗಂಭೀರ ಆರೋಪ ಮಾಡಿದ್ದಾರೆ.

ಅಲ್ಲದೆ ಮತದಾರರ ಪಟ್ಟಿಪರಿಷ್ಕರಣೆ ಸಂದರ್ಭದಲ್ಲಿ ಒಂದೇ ಕುಟುಂಬದ ಮತದಾರರನ್ನು ವಿಂಗಡಿಸಿ, ಬೇರೆ ಬೇರೆ ಮತದಾನದ ಕೇಂದ್ರಗಳ ವ್ಯಾಪ್ತಿಯಲ್ಲಿ ಸೇರಿಸಲಾಗಿದೆ, ಈ ರೀತಿ ಬಿಜೆಪಿ ವಾಮಮಾರ್ಗದಲ್ಲಿ ಚುನಾವಣೆ ಗೆಲ್ಲುವ ಪಿತೂರಿ ನಡೆಸಿದೆ ಎಂದವರು ಆರೋಪಿಸಿದ್ದಾರೆ. ಅವರು ಜಿಲ್ಲಾ ಕಾಂಗ್ರೆಸ್‌ ಭವನದಲ್ಲಿ ನಡೆದ ಚುನಾವಣೆಯಲ್ಲಿ ಸ್ವರ್ಧಿಸಲು ಇಚ್ಛಿಸಿರುವ ಆಕಾಂಕ್ಷಿಗಳ, ಬ್ಲಾಕ್‌ ಅಧ್ಯಕ್ಷರುಗಳ ಮತ್ತು ಮುಂಚೂಣಿ ಘಟಕಗಳ ಅಧ್ಯಕ್ಷರ ಸಭೆಯಲ್ಲಿ ಮಾತನಾಡುತ್ತಿದ್ದರು.

ಕೆಪಿಸಿಸಿ ಪ್ಯಾನೆಲಿಸ್ವ್‌ ವೆರೋನಿಕಾ ಕರ್ನೇಲಿಯೋ ಅವರು ಮತದಾರ ಪಟ್ಟಿಯ ಪರಿಷ್ಕರಣೆ ಸಮಯ ಸರ್ಕಾರದಿಂದ ನಡೆದ ಷಡ್ಯಂತ್ರವನ್ನು ವಿವರಿಸಿ, ಕಾಂಗ್ರೆಸ್‌ ಕಾರ್ಯಕರ್ತರು ಜಿಲ್ಲೆಯಲ್ಲಿ ಮತದಾರರ ಹೆಸರು ನೋಂದಣಿ ಮತ್ತು ಪರಿಷ್ಕರಣೆ ಅಭಿಯಾನವನ್ನು ಹಮ್ಮಿಕೊಳ್ಳುವಂತೆ ಸಲಹೆ ಮಾಡಿದರು.

ಮಾಜಿ ಸಚಿವ, ಪಕ್ಷದ ಜಿಲ್ಲಾ ಉಸ್ತುವಾರಿ ಅಭಯಚಂದ್ರ ಜೈನ್‌, ಕೆಪಿಸಿಸಿ ಕಾರ್ಯದರ್ಶಿ ಎಂ.ಎ. ಗಫäರ್‌, ಜಿಲ್ಲಾ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಬಿ. ನರಸಿಂಹಮೂರ್ತಿ ವೇದಿಕೆಯಲ್ಲಿದ್ದರು. ಜಿಲ್ಲಾ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಬಿ. ಕುಶಲ್‌ ಶೆಟ್ಟಿಸ್ವಾಗತಿಸಿದರು. ಅಣ್ಣಯ್ಯ ಸೇರಿಗಾರ್‌ ವಂದಿಸಿದರು. ಜಿಲ್ಲಾ ವಕ್ತಾರ ಭಾಸ್ಕರ ರಾವ್‌ ಕಿದಿಯೂರು ಕಾರ್ಯಕ್ರಮ ನಿರ್ವಹಿಸಿದರು.

ಪ್ರಜಾಪ್ರಭುತ್ವದ ಕಗ್ಗೊಲೆ: ಭಂಡಾರಿ

ಮತದಾರರ ಪಟ್ಟಿಯಿುಂದ ಮತದಾರರ ಹೆಸರು ಕೈಬಿಡುವ ಮೂಲಕ ಬಿಜೆಪಿ ಸರ್ಕಾರ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿದೆ ಎಂದು ವಿಧಾನ ಪರಿಷತ್‌ ಸದಸ್ಯ ಮಂಜುನಾಥ ಭಂಡಾರಿ ಹೇಳಿದ್ದಾರೆ. ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿ ವಿಧಾನಸಭಾ ಕ್ಷೇತ್ರಗಳಲ್ಲಿ 10- 15 ಮತದಾರರ ಹೆಸರನ್ನು ರದ್ದುಗೊಳಿಸಲಾಗಿದೆ. ನ್ಯಾ. ಸಂತೋಷ್‌ ಹೆಗ್ಡೆ ಅವರು ಇದೊಂದು ಗಂಭೀರ ಆರೋಪ ಎಂದು ಹೇಳಿದ್ದಾರೆ ಎಂದ ಅವರು, ಪ್ರತಿಯೊಬ್ಬರು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇದೆಯೇ ಎಂಬುದನ್ನು ಖಾತರಿಪಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.

Follow Us:
Download App:
  • android
  • ios