ಯಾರೂ ಯಾವ ಜಾತಿಗೂ ಅರ್ಜಿ ಹಾಕೊಂಡು ಹುಟ್ಟಲ್ಲ: ಗೃಹ ಸಚಿವ ಪರಮೇಶ್ವರ್

ನಾವು ಹುಟ್ಟುವಾಗ ಯಾವ ಜಾತಿಯಲ್ಲಿ ಹುಟ್ಟಬೇಕೆಂದು ಅರ್ಜಿ ಹಾಕಿಕೊಂಡು ಹುಟ್ಟುವುದಿಲ್ಲ, ಹಾಗಿದ್ದರೆ ನಾವು ಈ ಜಾತಿಯಲ್ಲಿ ಹುಟ್ಟಬೇಕು ಅಂದುಕೊಳ್ಳುತ್ತಿರಲಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದರು. 

No one is born applying for any caste Says Home Minister Dr G Parameshwar gvd

ಮಾಗಡಿ (ಜ.06): ನಾವು ಹುಟ್ಟುವಾಗ ಯಾವ ಜಾತಿಯಲ್ಲಿ ಹುಟ್ಟಬೇಕೆಂದು ಅರ್ಜಿ ಹಾಕಿಕೊಂಡು ಹುಟ್ಟುವುದಿಲ್ಲ, ಹಾಗಿದ್ದರೆ ನಾವು ಈ ಜಾತಿಯಲ್ಲಿ ಹುಟ್ಟಬೇಕು ಅಂದುಕೊಳ್ಳುತ್ತಿರಲಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದರು. ಪಟ್ಟಣದ ಪುರಸಭೆ ಮುಂಭಾಗದಲ್ಲಿ ಡಾ. ಬಿ.ಆರ್.ಅಂಬೇಡ್ಕರ್ ಪ್ರತಿಮೆ ಅನಾವರಣ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಮಾಗಡಿ ಅಂಬೇಡ್ಕರ್ ಹಬ್ಬಕ್ಕೆ ಚಾಲನೆ ನೀಡಿ ಮಾತನಾಡಿದರು.

ಸಂವಿಧಾನವನ್ನು ಬದಲಾವಣೆ ಮಾಡುತ್ತೇವೆ ಎಂದು ಕೆಲವರು ಹೊರಟಿದ್ದಾರೆ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಹಾಕಿಕೊಟ್ಟ ಸಂವಿಧಾನದ ಮೂಲಕ ನಮಗೆ ಅನೇಕ ಸೌಲಭ್ಯಗಳು ಸಿಗುವಂತಾಗಿದೆ. ಯಾರು ಕೂಡ ಈ ಜಾತಿಯಲ್ಲಿ ಹುಟ್ಟಬೇಕೆಂದು ಅಂದುಕೊಂಡು ಹುಟ್ಟುವುದಿಲ್ಲ. ಮನುಷ್ಯತ್ವವನ್ನು ಪ್ರತಿಯೊಬ್ಬರೂ ಬೆಳೆಸಿಕೊಂಡಾಗ ಮಾತ್ರ ಜಾತಿ ವ್ಯವಸ್ಥೆ ದೂರವಾಗುತ್ತದೆ. ನಾನು ಜಾತಿ ವ್ಯವಸ್ಥೆಯನ್ನು ತೀವ್ರವಾಗಿ ವಿರೋಧಿಸುತ್ತೇನೆ ಎಂದು ತಿಳಿಸಿದರು.

ದೇವಸ್ಥಾನ ಕಟ್ಟಿಸುವ ನಾವು ಹಿಂದುತ್ವ ವಿರೋಧಿಗಳ?: ಸಂಸದ ಡಿ.ಕೆ.ಸುರೇಶ್

ಜನಾಂಗದ ಹಣ ದುರ್ಬಳಕೆ ಆದರೆ ಶಿಕ್ಷೆ: ನಮ್ಮ ಸರ್ಕಾರ ಶೋಷಿತ ಸಮುದಾಯಗಳ ಸಾಮಾಜಿಕ ನ್ಯಾಯ ಕೊಡುವ ನಿಟ್ಟಿನಲ್ಲಿ ನಮ್ಮ ಆಯವ್ಯಯದಲ್ಲಿ ಹಣವನ್ನು ಮೀಸಲಿಟ್ಟಿದ್ದು ಎಸಿಪಿ ಮತ್ತು ಎಸ್ಟಿಪಿ ಅನುದಾನವನ್ನು ನೂರಕ್ಕೆ ನೂರರಷ್ಟು ಬಳಕೆ ಮಾಡಬೇಕು. ಜೊತೆಗೆ ಈ ಅನುದಾನವನ್ನು ಬೇರೆ ಯೋಜನೆಗಳಿಗೆ ಬಳಕೆ ಮಾಡಿಕೊಂಡರೆ ಅಂತಹ ಅಧಿಕಾರಿಗಳ ವಿರುದ್ಧ ಶಿಸ್ತಿನ ಕ್ರಮ ಕೈಗೊಳ್ಳಬೇಕಾಗುತ್ತದೆ. ಈ ಮೂಲಕ ನಮ್ಮ ಸರ್ಕಾರ ಎಸ್ಸಿ/ಎಸ್ಟಿ ಸಮುದಾಯಗಳ ಆರ್ಥಿಕ, ಸಾಮಾಜಿಕ, ಶೈಕ್ಷಣಿಕವಾಗಿ ಮುಂದೆ ಬರಲು ಅನೇಕ ಯೋಜನೆಗಳನ್ನು ತರುತ್ತಿದ್ದು ಈ ಮೂಲಕ ನಮ್ಮ ಜನಾಂಗ ಸಮಾಜದಲ್ಲಿ ಮುಂದೆ ಬರಬೇಕು ಎಂದು ತಿಳಿಸಿದರು.

ಅಂಬೇಡ್ಕರ್ ಪ್ರತಿಮೆ ನಿರ್ಮಾತೃ ಮಾಜಿ ಶಾಸಕ ಎ.ಮಂಜುನಾಥ್ ಮಾತನಾಡಿ, ಬಡವನ ಮಗನು ಕೂಡ ಶಾಸಕರಾಗಬಹುದು ಎಂದು ತೋರಿಸಿಕೊಟ್ಟಿದ್ದೆ ಅಂಬೇಡ್ಕರ್. ಅವರು ಬರೆದ ಸಂವಿಧಾನದ ಮೂಲಕ ನಾನು ಶಾಸಕನಾಗಿ ಆಯ್ಕೆಯಾಗಿ ಅವರ ಋಣ ತೀರಿಸುವ ನಿಟ್ಟಿನಲ್ಲಿ ನನಗೆ ಒಂದು ಸೌಭಾಗ್ಯ ಸಿಕ್ಕಿತು. 75 ವರ್ಷ ಕಳೆದರು ಕೂಡ ಮಾಗಡಿಯಲ್ಲಿ ಅಂಬೇಡ್ಕರ್ ಪ್ರತಿಮೆ ನಿರ್ಮಾಣವಾಗಿರಲಿಲ್ಲ. ಎಸ್ಸಿ ಎಸ್ಟಿ ಸಭೆಯಲ್ಲಿ ತೀರ್ಮಾನವಾದಂತೆ ನನ್ನ ಸ್ವಂತ ಹಣದಲ್ಲಿ ಪ್ರತಿಮೆ ನಿರ್ಮಾಣ ಮಾಡಿದ್ದು ಪ್ರತಿಮೆ ಕೂರಿಸುವ ಸ್ಥಳದ ಬಗ್ಗೆ ಸಾಕಷ್ಟು ಗೊಂದಲಗಳಾಗಿ ಪೊಲೀಸರ ಸಮ್ಮುಖದಲ್ಲಿ ಪುರಸಭೆ ಮುಂಭಾಗದಲ್ಲಿ ಪ್ರತಿಮೆ ನಿರ್ಮಾಣ ಮಾಡುವ ಪರಿಸ್ಥಿತಿ ಬಂದಿತ್ತು. 

ಆದರೂ ಕೂಡ ಸಮಾಜದ ಎಲ್ಲಾ ಮುಖಂಡರು ಒಗ್ಗಟ್ಟಾಗಿ ಅದ್ಧೂರಿ ಕಾರ್ಯಕ್ರಮ ಮಾಡಿದ್ದು ನಮ್ಮ ತಾಲೂಕಿನವರೇ ಆದ ಗೃಹ ಸಚಿವ ಜಿ.ಪರಮೇಶ್ವರ್ ಅವರ ಕೈಯಲ್ಲಿ ಪ್ರತಿಮೆ ಅನಾವರಣ ಆಗಿರುವುದು ಸಂತೋಷ ತಂದಿದೆ. ಅಧಿಕಾರ ಇದ್ದಾಗ ಏನೋ ಮಾಡಿದ್ದೆವು ಎಂಬುದು ಜನತೆಗೆ ತಿಳಿಯುತ್ತದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಮಾಜಿ ಸಚಿವ ಹೆಚ್.ಎಂ.ರೇವಣ್ಣ ಮಾತನಾಡಿದರು. ಪಟ್ಟಣದಲ್ಲಿ ವಿವಿಧ ಕಲಾತಂಡಗಳೊಂದಿಗೆ ಅಂಬೇಡ್ಕರ್ ಪ್ರತಿಮೆಯುಳ್ಳ ಹತ್ತಕ್ಕೂ ಹೆಚ್ಚು ಟ್ರ್ಯಾಕ್ಟರ್ ಗಳ ಮೂಲಕ ಅದ್ಧೂರಿ ಮೆರವಣಿಗೆ ಮಾಡಲಾಯಿತು. ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಜನಾಂಗದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಬಂದಿದ್ದ ಎಲ್ಲಾ ಗಣ್ಯರಿಗೂ ಊಟದ ವ್ಯವಸ್ಥೆ ಮಾಡಲಾಗಿತ್ತು.

ದೇಶಕ್ಕೆ ಕಾಂಗ್ರೆಸ್ ಭದ್ರ ಬುನಾದಿ ಹಾಕಿಕೊಟ್ಟಿದೆ: ಸಚಿವ ರಾಮಲಿಂಗಾರೆಡ್ಡಿ

ಕಾರ್ಯಕ್ರಮದಲ್ಲಿ ಮೈಸೂರು ಉರಿಲಿಂಗಪೆದ್ದಿ ಮಠದ ಶ್ರೀ ಜ್ಞಾನಪ್ರಕಾಶ ಸ್ವಾಮೀಜಿ, ಚಿತ್ರದುರ್ಗದ ಛಲವಾದಿ ಗುರುಪೀಠದ ಶ್ರೀ ಬಸವಗಿರಿದೇವ ಶರಣರು, ಪಾಲಿನಲ್ಲಿ ಸಂಸ್ಥಾನ ಮಠದ ಡಾ.ಸಿದ್ದರಾಜ ಸ್ವಾಮೀಜಿ ದಿವ್ಯ ಸಾನ್ನಿಧ್ಯ ವಹಿಸಿದ್ದರು. ಮುಖಂಡರಾದ ಬಿ.ವಿ.ಜಯರಾಂ, ರಂಗಾನಮಯ್ಯ, ಸಿ.ಜಯರಾಂ, ಮಂಜೇಶ್, ನಾಗರಾಜು, ನರಸಿಂಹಮೂರ್ತಿ, ಶಿವಶಂಕರ್, ಚಿಕ್ಕರಾಜು, ಚಿಕ್ಕಣ್ಣ ಸೇರಿದಂತೆ ತಾಲೂಕಿನ ಅನೇಕ ದಲಿತ ಮುಖಂಡರು, ಪುರಸಭಾ ಸದಸ್ಯರು ಭಾಗವಹಿಸಿದ್ದರು.

Latest Videos
Follow Us:
Download App:
  • android
  • ios