Asianet Suvarna News Asianet Suvarna News

ಕೆನಾಲ್ ಯೋಜನೆ ಹೋರಾಟಕ್ಕೆ ಬೆಂಬಲ ಸೂಚಿಸಲ್ಲ: ಶಾಸಕ ಎಸ್.ಆರ್.ಶ್ರೀನಿವಾಸ್

ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಯೋಜನೆಗೆ ಮೊದಲಿನಿಂದಲೂ ನನ್ನ ವಿರೋಧವಿದೆ. ಹಾಗಂತ ಇವರು ಯಾರೋ ಮಾಡುವ ಹೋರಾಟಕ್ಕೆ ಬೆಂಬಲ ಸೂಚಿಸುವುದಿಲ್ಲ. ಬದಲಾಗಿ ಅಗತ್ಯ ಬಿದ್ದರೆ ಪ್ರತ್ಯೇಕವಾಗಿ ಹೋರಾಟ ಮಾಡುತ್ತೇನೆ ಎಂದು ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್ ತಿಳಿಸಿದರು.

No support for canal project struggle Says MLA SR Srinivas gvd
Author
First Published May 19, 2024, 4:32 PM IST

ತುಮಕೂರು (ಮೇ.19): ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಯೋಜನೆಗೆ ಮೊದಲಿನಿಂದಲೂ ನನ್ನ ವಿರೋಧವಿದೆ. ಹಾಗಂತ ಇವರು ಯಾರೋ ಮಾಡುವ ಹೋರಾಟಕ್ಕೆ ಬೆಂಬಲ ಸೂಚಿಸುವುದಿಲ್ಲ. ಬದಲಾಗಿ ಅಗತ್ಯ ಬಿದ್ದರೆ ಪ್ರತ್ಯೇಕವಾಗಿ ಹೋರಾಟ ಮಾಡುತ್ತೇನೆ ಎಂದು ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್ ತಿಳಿಸಿದರು. ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಜಿಲ್ಲೆಯ ಜನರು, ರೈತರ ಹಿತ ಕಾಯುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ಕರೆದು ಚರ್ಚಿಸುವುದಾಗಿ ಹೇಳಿದ್ದಾರೆ. ಒಂದು ವೇಳೆ ಆ ಕೆಲಸ ಆಗದಿದ್ದರೆ ಹೋರಾಟ ಮಾಡಬೇಕಾಗುತ್ತದೆ ಎಂದರು.

ನಾವು ಸರ್ಕಾರದ ಭಾಗವಾಗಿರುವುದರಿಂದ ಈ ರೀತಿಯ ಕ್ರಮಗಳು ಕೈಗೊಂಡರೆ ಮುಜುಗರವಾಗುತ್ತದೆ. ಹಾಗಾಗಿ ಮೊದಲು ಸಭೆ ಕರೆದು ಕುಣಿಗಲ್‌ಗೆ 3 ಟಿಎಂಸಿ ನೀರು ಅಲೋಕೇಷನ್ ಆಗಿರುವ ಬಗ್ಗೆ ಜಿಲ್ಲೆಯ ರೈತರಿಗೆ ಮನವರಿಕೆ ಮಾಡಬೇಕು ಎಂದು ಹೇಳಿದ್ದೇವೆ. ಇದಕ್ಕೆ ಮುಖ್ಯಮಂತ್ರಿ ಸಹ ಸಕಾರಾತ್ಮಕವಾಗಿ ಸ್ಪಂದಿಸಿ ಸಭೆ ಕರೆದು ಚರ್ಚಿಸುವುದಾಗಿ ಹೇಳಿದ್ದಾರೆ. ಅಲ್ಲಿಯವರೆಗೂ ತಾತ್ಕಾಲಿಕವಾಗಿ ಕಾಮಗಾರಿ ನಿಲ್ಲಿಸುವಂತೆಯೂ ತಿಳಿಸಲಾಗಿದೆ ಎಂದರು. ನಾನು ಯಾರಿಗೋ ಹೆದರಿಕೊಂಡು, ಯಾರನ್ನೋ ಮೆಚ್ಚಿಸುವ ಸಲುವಾಗಿ ಕೆಲಸ ಮಾಡುವವನಲ್ಲ. 

ನಾನು ಏನು ಎನ್ನುವುದು ತುರುವೇಕೆರೆ ಶಾಸಕ ಎಂ.ಟಿ. ಕೃಷ್ಣಪ್ಪಗೂ ಗೊತ್ತಿದೆ. ವಿನಾ ಕಾರಣ ನನ್ನ ಬಗ್ಗೆ ಎಲ್ಲೆಂದರಲ್ಲಿ ಮಾತನಾಡಿದರೆ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ನಾನು ಹೇಮಾವತಿ ಚಾನಲ್ ಮೇಲೆ ಓಡಾಡಿಕೊಂಡು ಗುಬ್ಬಿ ತಾಲೂಕಿಗೆ ಹೇಮಾವತಿ ನೀರು ಬಿಡಿಸಿದ ವ್ಯಕ್ತಿ. ನಮ್ಮ ತಾಲೂಕಿನ ರೈತರ ಹಿತವನ್ನು ಯಾವ ರೀತಿ ಕಾಯಬೇಕು ಎಂಬುದು ನನಗೆ ಗೊತ್ತಿದೆ ಎಂದು ಶಾಶಕ ಎಂ.ಟಿ. ಕೃಷ್ಣಪ್ಪ ಹೇಳಿಕೆಗೆ ತಿರುಗೇಟು ನೀಡಿದರು. ಕುಣಿಗಲ್‌ಗೆ 3 ಟಿಎಂಸಿ ನೀರು ಅಲೋಕೇಷನ್ ಆಗಿದೆ ಎಂದು ಅವರು ಹೇಳುತ್ತಿದ್ದಾರೆ. 

ಎಕ್ಸ್‌ಪ್ರೆಸ್ ಕೆನಾಲ್ ಯೋಜನೆ ಸರ್ಕಾರದ ತೀರ್ಮಾನ: ಸಚಿವ ಪರಮೇಶ್ವರ್

ಹಾಗಾಗಿ ಈ ಬಗ್ಗೆ ನಮ್ಮ ಜಿಲ್ಲೆಯ ರೈತರು, ಜನಸಾಮಾನ್ಯರ ಸಭೆ ಕರೆದು ಮನವರಿಕೆ ಮಾಡಿಕೊಡಬೇಕು. ಮೊದಲ ಈ ಕೆಲಸ ಆಗಬೇಕಾಗಿದೆ. ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಕಾಮಗಾರಿಯಲ್ಲಿ ಲೋಪವಾಗಿರುವ ಬಗ್ಗೆ ಪತ್ರಿಕೆಗಳಲ್ಲಿ ಓದಿದ್ದೇನೆ. ಅದರ ಆಧಾರದ ಮೇಲೆ ಕೂಲಂಕುಷವಾಗಿ ಕಾಮಗಾರಿ ಪರಿಶೀಲಿಸಿ ವರದಿ ನೀಡುವಂತೆ ಕೆಎಸ್‌ಆರ್‌ಟಿಸಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚಿಸಿದ್ದೇನೆ ಎಂದರು.

Latest Videos
Follow Us:
Download App:
  • android
  • ios