ಬಿಜೆಪಿ ಜೆಡಿಎಸ್ ಮೈತ್ರಿ ಮಾಡಿಕೊಂಡರೂ ಆಶ್ಚರ್ಯವಿಲ್ಲ: ಸಿದ್ದರಾಮಯ್ಯ
ಕಳೆದ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮ್ಯಾಚ್ ಫಿಕ್ಸ್ ಮಾಡಿಕೊಂಡಿತ್ತು. ಮುಂದಿನ ಚುನಾವಣೆಯಲ್ಲಿ ಮತ್ತೆ ಮೈತ್ರಿ ಮಾಡಿಕೊಂಡರೂ ಆಶ್ಚರ್ಯ ಇಲ್ಲ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಮೈಸೂರು : ಕಳೆದ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮ್ಯಾಚ್ ಫಿಕ್ಸ್ ಮಾಡಿಕೊಂಡಿತ್ತು. ಮುಂದಿನ ಚುನಾವಣೆಯಲ್ಲಿ ಮತ್ತೆ ಮೈತ್ರಿ ಮಾಡಿಕೊಂಡರೂ ಆಶ್ಚರ್ಯ ಇಲ್ಲ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಎಚ್.ಡಿ.ಕೋಟೆಯಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈಕಮಾಂಡ್‌ಗಳ ಜೊತೆ ಮಾತನಾಡಿದ್ದೇನೆ ಎಂದು ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಆದರೆ, ನಮ್ಮ ಹೈಕಮಾಂಡ್ ಜೊತೆ ಯಾರೂ ಮಾತನಾಡಿಲ್ಲ. ಈ ಬಾರಿ ನಾವು ಯಾರ ಜೊತೆಯೂ ಮಾತುಕತೆ ಮಾಡಲ್ಲ. ಕಾಂಗ್ರೆಸ್ ಏಕಾಂಗಿಯಾಗಿ ಅಧಿಕಾರಕ್ಕೆ ಬರುತ್ತದೆ ಎಂದರು.
ಶಿಕಾರಿಪುರದಲ್ಲಿ ಯಡಿಯೂರಪ್ಪನವರ ಮನೆ ಮೇಲೆ ಕಲ್ಲು ತೂರಿರುವುದು ಕಾಂಗ್ರೆಸ್‌ನವರು ಅಲ್ಲ ಎಂದು ಸ್ವತಃ ಯಡಿಯೂರಪ್ಪನವರೇ ಹೇಳಿದ್ದಾರೆ. ಯಡಿಯೂರಪ್ಪಗಿಂತ ಬೊಮ್ಮಾಯಿಗೆ ಹೆಚ್ಚು ಗೊತ್ತಾ?, ಬೊಮ್ಮಾಯಿ ಅವರಿಗಿಂತ ಹೆಚ್ಚಿನ ಮಾಹಿತಿ ಯಡಿಯೂರಪ್ಪನವರಿಗೆ ಹೋಗಿರುತ್ತದೆ. ಯಾರೋ ಬರುತ್ತಾರೆ, ಫೋಟೋ ತೆಗೆದುಕೊಳ್ಳುತ್ತಾರೆ. ಅವರು ಒಳ್ಳೆಯವರೋ, ಕೆಟ್ಟವರೋ ಯಾರಿಗೆ ಗೊತ್ತಿರುತ್ತದೆ. ರಾಜಕೀಯಕ್ಕಾಗಿ ಏನೇನೋ ಹೇಳಬಾರದು ಎಂದು ಸಿಎಂ ವಿರುದ್ಧ ಕಿಡಿಕಾರಿದರು.
ಮೀಸಲಾತಿಗೆ ಕಾಂಗ್ರೆಸ್ ವಿರೋಧ ಇರಲಿಲ್ಲ. ಆದರೆ, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದಯಕೊಂಡು ಹೋಗಬೇಕಿತ್ತು. ಮೂರುವರೆ ವರ್ಷ ಬಿಜೆಪಿ ಏನು ಮಾಡುತ್ತಿತ್ತು? ಒಳ ಮೀಸಲಾತಿಗೆ ಕಾಂಗ್ರೆಸ್ ಒಲವು ತೋರಿಸಿತ್ತು ಎಂದರು.
ಕೊನೆ ಚುನಾವಣೆ ಹುಟ್ಟೂರಲ್ಲೇ ಆಗಲಿ:
ವರುಣ ಕ್ಷೇತ್ರದಿಂದ ನಾನು ಗೆದ್ದಾಗಲೇ ಮುಖ್ಯಮಂತ್ರಿ ಆಗಿದ್ದು. ಯಾವ ಕ್ಷೇತ್ರವೂ ಲಕ್ಕಿ ಅಂತ ಇಲ್ಲ. ವರುಣ ನನ್ನ ಹುಟ್ಟೂರು ಭಾಗದ ಕ್ಷೇತ್ರ. ನನ್ನ ಕೊನೆ ಚುನಾವಣೆ ಹುಟ್ಟೂರಿನಲ್ಲಿಯೇ ಆಗಬೇಕು ಎಂಬ ಆಸೆ ಇದೆ. ವರುಣ ಕ್ಷೇತ್ರದ ಜತೆ ಕೋಲಾರದಿಂದಲೂ ಸ್ಪರ್ಧಿಸುತ್ತೇನೆ. ಕೋಲಾರ ಕ್ಷೇತ್ರದ ಜನರಿಂದ ಹೆಚ್ಚು ಒತ್ತಡ ಬರುತ್ತಿದೆ. ಈ ಬಾರಿ ಎರಡು ಕ್ಷೇತ್ರದಿಂದ ನಾನು ಸ್ಪರ್ಧಿಸುತ್ತೇನೆ ಎಂದು ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಿದರು.
ವರುಣ ಕ್ಷೇತ್ರದಿಂದ ನಾನು ಸ್ಪರ್ಧಿಸುವುದಿಲ್ಲ ಎಂದು ಯತೀಂದ್ರ ಹೇಳಿದ್ದಾರೆ. ಅದರ ಬಗ್ಗೆ ಹೆಚ್ಚಿನ ಚರ್ಚೆ ಬೇಡ. ನಾನು ಎರಡು ಕ್ಷೇತ್ರದಿಂದ ಸ್ಪರ್ಧೆ ಮಾಡಲು ತೀರ್ಮಾನ ಮಾಡಿದ್ದೇನೆ. ಕೋಲಾರ ಕ್ಷೇತ್ರದಿಂದ ಸಾಕಷ್ಟುಒತ್ತಡ ಇದೆ. ಹೈ ಕಮಾಂಡ್ ಏನು ಹೇಳ್ತಾರೆ ನೋಡುತ್ತೇನೆ ಎಂದರು.
ಎರಡು ಕಡೆ ಸ್ಪರ್ಧೆ ಇಂಗಿತ
ಚಿತ್ರದುರ್ಗ (ಮಾ.24): ಮಾಜಿ ಸಿಎಂ ಸಿದ್ದರಾಮಯ್ಯ ವರುಣಾ ವಿಧಾನಸಭಾ ಕ್ಷೇತ್ರದಿಂದ ಈ ಬಾರಿ ವಿಧಾನ ಸಭಾ ಚುನಾವಣೆಗೆ ಸ್ಫರ್ಧಿಸುವುದು ಪಕ್ಕಾ ಆಗಿದೆ. ಚಿತ್ರದುರ್ಗದಲ್ಲಿ ಸಿದ್ಧರಾಮಯ್ಯ ಅವರು ವರುಣಾದಿಂದ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ. ನಮ್ಮ ಮನೆಯಲ್ಲಿ ವರುಣಾದಿಂದ ಸ್ಪರ್ಧಿಸುವಂತೆ ಹೇಳಿದ್ದಾರೆ. ವರುಣಾ ಕ್ಷೇತ್ರದಲ್ಲೇ ಟಿಕೆಟ್ ನೀಡುವಂತೆ ಹೇಳಿದ್ದೇನೆ. ಇನ್ನೊಂದು ಕ್ಷೇತ್ರದಲ್ಲಿ ಸ್ಪರ್ಧಿಸುವಂತೆಯೂ ನಮ್ಮ ಮನೆಯಲ್ಲಿ ಹೇಳ್ತಿದ್ದಾರೆ. 25 ಕ್ಷೇತ್ರಗಳಲ್ಲಿ ನನಗೆ ಸ್ಪರ್ಧಿಸುವಂತೆ ಆಹ್ವಾನವಿದೆ ಎಂದು ಹೇಳಿದ್ದಾರೆ. ಎಲ್ಲಾ ನಿರ್ಧಾರ ಹೈಕಮಾಂಡ್ ಗೆ ಬಿಟ್ಟಿದ್ದೇನೆಂದು ಸಿದ್ಧರಾಮಯ್ಯ ಹೇಳಿಕೆ ನೀಡಿದ್ದಾರೆ.
ಈ ಮೂಲಕ ಹಲವು ದಿನಗಳಿಂದ ಇದ್ದ ಸಿದ್ದರಾಮಯ್ಯ ಅವರ ಕ್ಷೇತ್ರ ಹುಡುಕಾಟದ ಕುತೂಹಲಕ್ಕೆ ಕೊನೆಗೂ ತೆರೆ ಬಿದ್ದಂತಾಗಿದೆ. ಆದರೆ ಸಿದ್ದರಾಮಯ್ಯ ಎರಡು ಕ್ಷೇತ್ರಗಳಿಂದ ಸ್ಫರ್ಧಿಸುವ ಬಗ್ಗೆ ಸುಳಿವು ಬಿಟ್ಟುಕೊಟ್ಟಿದ್ದು ಸಿದ್ದು ಕಣ್ಣಿಟ್ಟಿರುವ ಎರಡನೇ ಕ್ಷೇತ್ರ ಯಾವುದು ಎಂಬುದು ಈಗ ಇರುವ ಕುತೂಹಲದ ಪ್ರಶ್ನೆಯಾಗಿದೆ.
ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರ ರಾಜಕೀಯ ಭವಿಷ್ಯದ ಹಿತದೃಷ್ಟಿಯಿಂದ ವರುಣಾದಲ್ಲಿ ಸ್ಫರ್ಧಿಸುವ ಬಗ್ಗೆ ಈ ಮೊದಲು ಸಿದ್ದರಾಮಯ್ಯ ಚಿಂತಿತರಾಗಿದ್ದರು. ಆದರೆ ಇದೀಗ ಪಕ್ಷದ ಮುಖಂಡರ ಸಲಹೆ ಮೇರೆಗೆ ವರುಣಾ ಕ್ಷೇತ್ರವನ್ನು ಒಪ್ಪಿಕೊಂಡಿದ್ದಾರೆ.
ಜಿಎಸ್ ಪಾಟೀಲ ಶಾಸಕರಾಗಬೇಕು, ಸಿದ್ರಾಮಯ್ಯ ಸಿಎಂ ಆಗಬೇಕು: ಅಂಬೇಗಾಲಲ್ಲಿ ಕಾಲಕಾಲೇಶ್ವರ ಬೆಟ್ಟವೇರಿದ ಯುವಕ!
ಇತ್ತ ಸಿದ್ದರಾಮಯ್ಯ ಅವರ ವಿರುದ್ಧ ಸಮರ್ಥ ನಾಯಕನನ್ನು ನಿಲ್ಲಿಸುವ ಬಗ್ಗೆ ವಿರೋಧ ಪಕ್ಷಗಳು ಕೂಡ ರಣತಂತ್ರ ರೂಪಿಸುತ್ತಿದೆ. ಸಮರ್ಥ ಅಭ್ಯರ್ಥಿಗಾಗಿ ಹುಡುಕಾಟ ನಡೆಸುತ್ತಿದೆ. ಸಿದ್ದರಾಮಯ್ಯರನ್ನು ಎದುರಿಸಲು ಪ್ರಭಾವಿ ಲಿಂಗಾಯತ ಮುಖಂಡರೇ ಬೇಕು ಎನ್ನುವುದು ಬಿಜೆಪಿ ಹೈಕಮಾಂಡ್ ವಾದ. ಹೀಗಾಗಿ ಯಡಿಯೂರಪ್ಪ ಪುತ್ರ ವಿಜಯೇಂದ್ರ ಮತ್ತು ಸಚಿವ ಸೋಮಣ್ಣ ಅವರು ಮುಂಚೂಣಿಯಲ್ಲಿದ್ದಾರೆ. ಇಂದು ಕೇಂದ್ರ ಸಚಿವ ಅಮಿತ್ ಶಾ ಬೆಂಗಳೂರು ಭೇಟಿ ವೇಳೆ ಯಡಿಯೂರಪ್ಪ ಅವರ ಮನೆಗೆ ಭೇಟಿ ನೀಡಿದ್ದರು. ಈ ವೇಳೆ ಸಿದ್ದರಾಮಯ್ಯ ಅವರ ವಿರುದ್ಧ ಯಾವ ನಾಯಕ ನಿಂತರೆ ಒಳ್ಳೆಯದು ಎಂಬ ಬಗ್ಗೆ ಗುಪ್ತ ಚರ್ಚೆಗಳು ನಡೆದಿದೆ ಎಂದು ಹೇಳಲಾಗುತ್ತಿದೆ.