ಚನ್ನಪಟ್ಟಣ [ಸೆ.11] : ನನಗೆ ಚನ್ನಪಟ್ಟಣದ ಕಾರ್ಯಕ್ರಮ ಮೊದಲೇ ನಿಗದಿಯಾಗಿತ್ತು. ಡಿ.ಕೆ.ಶಿವಕುಮಾರ್ ಬಂಧನ ಖಂಡಿಸಿ ನಡೆಯುತ್ತಿರುವ ಪ್ರತಿಭಟನೆಗೆ ನನಗೆ ಯಾವುದೇ ಆಹ್ವಾನವಿರಲಿಲ್ಲ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದರು.

ರಾಮನಗರ ಜಿಲ್ಲೆ ಚನ್ನಪಟ್ಟಣದಲ್ಲಿ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ, ನನ್ನನ್ನು ಆಹ್ವಾನಿಸಿದ್ದರೆ ನಾನು ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತಿದ್ದೆ ಎಂದು ಹೇಳಿದರು.

ಮುಂದೆ ಕುಮಾರಸ್ವಾಮಿಯವರನ್ನು ಬಂಧಿಸುತ್ತಾರೆಎಂದು ಹೇಳಲಾಗುತ್ತಿದೆ. ಆದರೆ ನನ್ನನ್ನು ಯಾರೂ ಏನೂ ಮಾಡಲು ಆಗಲ್ಲ.ನಾನು ಯಾವ ತಪ್ಪನ್ನೂ ಮಾಡಿಲ್ಲ ಎಂದು ಹೇಳಿದರು.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಬೆಂಗಳೂರಿನಲ್ಲಿ ಒಕ್ಕಲಿಗ ಸಂಘನೆಯಿಂದ ಡಿಕೆಶಿ ಬಂಧನ ಖಂಡಿಸಿ ಬೃಹತ್ ಪ್ರತಿಭಟನೆ ನಡೆಸುತ್ತಿದ್ದು, ಸಾವಿರಾರು ಮಂದಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.