ಮಂಗಳೂರು (ಏ.08): ದಕ್ಷಿಣ ಕನ್ನಡ, ಉಡುಪಿ ಮತ್ತು ಕೊಡಗು ಜಿಲ್ಲೆಯಲ್ಲಿ ಕೆಲಕಾಲ ಗುಡುಗು-ಸಿಡಿಲಬ್ಬರದೊಂದಿಗೆ ಬುಧವಾರ ಸಾಧಾರಣ ಮಳೆಯಾಗಿದೆ.

 ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಹೊಸಂಗಡಿ ಮತ್ತು ಕಾಶಿಪಟ್ಣದಲ್ಲಿ ಸುಮಾರು ಒಂದು ಗಂಟೆ ಕಾಲ ಉತ್ತಮ ಮಳೆಯಾಗಿದೆ. ಭಾರೀ ಗಾಳಿಯಿಂದಾಗಿ 22ಕ್ಕೂ ಅಧಿಕ ಮನೆಗಳಿಗೆ ಹಾನಿಯಾಗಿದೆ, ಟ್ರಾನ್ಸ್‌ಫಾರ್ಮರ್‌ ಸೇರಿ 20ಕ್ಕೂ ಹೆಚ್ಚು ವಿದ್ಯುತ್‌ ಕಂಬಗಳು ನೆಲಕ್ಕುರುಳಿವೆ.

ಎಂಟಾಣೆ ಮಳೆ, ಮಹಾನ್ ವ್ಯಕ್ತಿಯ ತಲೆದಂಡ; ಚಿಕ್ಕಯ್ಯಪ್ಪ ಕಾಲಜ್ಞಾನ ಸುಳ್ಳಾಗಿದ್ದೇ ಇಲ್ಲ!

ತಪ್ಪಿದ ದುರಂತ: ಕಾಶಿಪಟ್ಣದಲ್ಲಿ ಚಲಿಸುತ್ತಿದ್ದ ಖಾಸಗಿ ಬಸ್‌ ಮೇಲೆ ವಿದ್ಯುತ್‌ ಕಂಬ ಉರುಳಿ ಬೀಳುತ್ತಿದ್ದಂತೆ ಚಾಲಕ ಸಮಯ ಪ್ರಜ್ಞೆ ಮೆರೆದು ಬಸ್ಸನ್ನು ಚರಂಡಿ ಕಡೆ ತಿರುಗಿಸಿದ ಪರಿಣಾಮ ಭಾರೀ ಅನಾಹುತ ತಪ್ಪಿದೆ.

ಉಡುಪಿಯಲ್ಲೂ ಸಂಜೆ ಬಳಿಕ ಸಿಡಿಲಬ್ಬರರೊಂದಿಗೆ ಮಳೆಯಾಗಿದ್ದು, ಹಲವು ಮನೆಗಳಿಗೆ ಹಾನಿಯಾಗಿದೆ. ಕೊಡಗಿನಲ್ಲಿ ನಾಪೋಕ್ಲು ಸುತ್ತಮುತ್ತ ಸಂಜೆ ಸಾಧಾರಣ ಮಳೆಸುರಿದಿದೆ.