ಬೆಂಗಳೂರು (ಮಾ.18): ಭೂಮಿ ಮೇಲ್ಮೈನಲ್ಲಿ ಗಾಳಿಯ ತೀವ್ರತೆ ಹೆಚ್ಚಾಗಿರುವುದರಿಂದ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನ ಗುಡುಗು ಸಹಿತ ಹಗುರ ಮಳೆಯಾಗಲಿದೆ. 

ಸಾಧಾರಣ ಪ್ರಮಾಣದಲ್ಲಿ ಹಲವು ಜಿಲ್ಲೆಗಳಲ್ಲಿ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮೂಲಗಳು ಮಾಹಿತಿ ನೀಡಿವೆ.

ಮಳೆ ನೀರು ಹಿಡಿಯಲು ಮೋದಿ ಆಂದೋಲನ ..

ಮಾರ್ಚ್ 18 ರಿಂದ 21ರವರೆಗೆ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ, ಉತ್ತರ ಒಳನಾಡಿನ ಬೀದರ್ ಮತ್ತು ಕಲಬುರಗಿ ಹಾಗೂ ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಮೈಸೂರು ಜಿಲ್ಲೆಗಳ ಅಲ್ಲಲ್ಲಿ  ಮಳೆ ಬೀಳಲಿದೆ. 

ಗುಡುಗು ಸಹಿತ  ಹಗುರ ಮಳೆ ಸುರಿಯಲಿದೆ. ಸ್ಪ್ರಫ್ ಪ್ರಭಾವ ಕರಾವಳಿ ಹಾಗೂ ಮಲೆನಾಡಿನ ಭಾಗದಲ್ಲಿ ಹೆಚ್ಚಿರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.