ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಸಮಸ್ಯೆಗಳಿಗೆ ಆದ್ಯತೆ: ಸ್ಪೀಕರ್‌ ಹೊರಟ್ಟಿ

ವಿಧಾನಸಭೆಯ ಅಧ್ಯಕ್ಷ ಯು.ಟಿ. ಖಾದರ್ ಮತ್ತು ತಾವು ಬೆಳಗಾವಿಯಲ್ಲಿ ಸಭೆ ನಡೆಸಿ, ಅಧಿವೇಶನದ ಕಲಾಪದ ಬಗ್ಗೆ ಚರ್ಚಿಸಲಿದ್ದೇವೆ. ಸಭೆಯಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಚರ್ಚೆಗೆ ಹೆಚ್ಚಿನ ಅವಕಾಶ ಕೊಡುವ ಬಗ್ಗೆ ಸೂಕ್ತ ನಿರ್ಧಾರ ಮಾಡಲಾಗುವುದು. ಶಾಸಕರು ಕೂಡ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಚರ್ಚೆಗೆ ಹೆಚ್ಚಿನ ಒಲವು ವ್ಯಕ್ತಪಡಿಸಿದ್ದಾರೆ ಎಂದು ಹೇಳಿದ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ 

North Karnataka issues will be given priority in the Belagavi Session Says Basavaraj Horatti grg

ಮುಧೋಳ​(ನ.04):  ಬೆಳಗಾವಿಯಲ್ಲಿ ಡಿಸೆಂಬರ್‌ನಲ್ಲಿ ನಡೆಯಲಿರುವ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಚರ್ಚೆಗೆ ಹೆಚ್ಚಿನ ಆದ್ಯತೆ ಕೊಡಲಾಗುವುದು. ಎರಡು ದಿನ ಸತತ ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳನ್ನು ಪರಿಷತ್ತಿನಲ್ಲಿ ಚರ್ಚಿಸಲಾಗುವುದು ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.

ಮಾಜಿ ಸಚಿವ ಮುರಗೇಶ ನಿರಾಣಿ ಅವರ ನಿವಾಸಕ್ಕೆ ಶುಕ್ರವಾರ ಭೇಟಿ ನೀಡಿದ ಸಂದರ್ಭದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ವಿಧಾನಸಭೆಯ ಅಧ್ಯಕ್ಷ ಯು.ಟಿ. ಖಾದರ್ ಮತ್ತು ತಾವು ಬೆಳಗಾವಿಯಲ್ಲಿ ಸಭೆ ನಡೆಸಿ, ಅಧಿವೇಶನದ ಕಲಾಪದ ಬಗ್ಗೆ ಚರ್ಚಿಸಲಿದ್ದೇವೆ. ಸಭೆಯಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಚರ್ಚೆಗೆ ಹೆಚ್ಚಿನ ಅವಕಾಶ ಕೊಡುವ ಬಗ್ಗೆ ಸೂಕ್ತ ನಿರ್ಧಾರ ಮಾಡಲಾಗುವುದು. ಶಾಸಕರು ಕೂಡ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಚರ್ಚೆಗೆ ಹೆಚ್ಚಿನ ಒಲವು ವ್ಯಕ್ತಪಡಿಸಿದ್ದಾರೆ ಎಂದು ಹೇಳಿದರು.

ಕತ್ತಲೆಯಲ್ಲಿ ಮುಳುಗಿದ ಬಾಗಲಕೋಟೆಯ ನವನಗರ: ಕರೆಂಟ್​ ಬಂದ್​, ನಳ ಬಂದ್​, ಎಲ್ಲವೂ ಬಂದ್‌..!

ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ಚಳವಳಿ, ಪ್ರತಿಭಟನೆ, ಧರಣಿ, ರಸ್ತೆತಡೆ ಬಹಳ ನಡೆಯುತ್ತಿವೆ. ಇದರಿಂದ ಕಲಾಪಕ್ಕೆ ಅಡ್ಡಿಯಾಗುತ್ತಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟನೆಗಳು ನಡೆಯಬೇಕು. ಆದರೆ, ಸದನದ ಕಲಾಪಕ್ಕೆ ಅಡ್ಡಿಯಾಗದಂತೆ ನಡೆಯಬೇಕು ಎಂದು ಸಲಹೆ ನೀಡಿದರು.

ಉತ್ತರ ಕರ್ನಾಟಕದ ಭಾಗಕ್ಕೆ ನ್ಯಾಯ ಸಿಗಬೇಕು ಎನ್ನುವ ಮಹತ್ವದ ಉದ್ದೇಶದಿಂದ ಬೆಳಗಾವಿಯಲ್ಲಿ ಅಧಿವೇಶನ ನಡೆಸಲಾಗುತ್ತಿದೆ. ಈ ಸದುದ್ದೇಶ ಸಫಲವಾಗಲು ಎಲ್ಲರೂ ಸಹಕರಿಸಬೇಕು. ವಿಧಾನ ಪರಿಷತ್ ಸದಸ್ಯ ಹನುಮಂತ ನಿರಾಣಿ ಸದನದಲ್ಲಿ ಸಾಕಷ್ಟು ಜನಪರ ಪ್ರಶ್ನೆಗಳನ್ನು ಕೇಳುತ್ತಾರೆ. ಅವರೊಬ್ಬ ಕ್ರಿಯಾಶೀಲ ಸಂಸದೀಯಪುಟುವಾಗಿ ರೂಪುಗೊಳ್ಳುತ್ತಿರುವುದು ಸಂತೋಷದ ಸಂಗತಿ ಎಂದು ಬಸವರಾಜ ಹೊರಟ್ಟಿ ಬಣ್ಣಿಸಿದರು.

ಇದೇ ಸಂದರ್ಭದಲ್ಲಿ ನಿರಾಣಿ ಪರಿವಾರದ ಪರವಾಗಿ ಬಸವರಾಜ ಹೊರಟ್ಟಿ ಅವರನ್ನು ಹನುಮಂತ ನಿರಾಣಿ ಮತ್ತು ಪತ್ರಕರ್ತ ಮಲ್ಲಿಕಾರ್ಜುನ ಹೆಗ್ಗಳಗಿ ಸನ್ಮಾನಿಸಿದರು. ರಾಮನಗೌಡ ನಾಡಗೌಡ, ಎಂ.ಎಚ್.ಪತ್ಯನ್ನವರ ಹಾಗೂ ನಿರಾಣಿ ಕುಟುಂಬ ವರ್ಗದವರು ಇದ್ದರು.

Latest Videos
Follow Us:
Download App:
  • android
  • ios