ಪ್ರಯಾಣಿಕರಿಗೆ ಗುಡ್ ನ್ಯೂಸ್ : ದೀಪಾವಳಿ ಹೆಚ್ಚುವರಿ ಬಸ್‌ ಸಂಚಾರ

  • ನವೆಂಬರ್‌ 1ರಂದು ಕನ್ನಡ ರಾಜ್ಯೋತ್ಸವ, 3 ಮತ್ತು 5ರಂದು ದೀಪಾವಳಿ ಹಬ್ಬ, 7 ಭಾನುವಾರದ ರಜೆ 
  • ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ವಿಶೇಷ ಹೆಚ್ಚುವರಿ ಸಾರಿಗೆ ಬಸ್‌
North Western Karnataka Road Transport Corporation To Run extra Buses  run For Deepavali  snr

 ಹುಬ್ಬಳ್ಳಿ (ಅ.26):  ನವೆಂಬರ್‌ 1ರಂದು ಕನ್ನಡ ರಾಜ್ಯೋತ್ಸವ (Kannada rajyotsava), 3 ಮತ್ತು 5ರಂದು ದೀಪಾವಳಿ (Deepavali) ಹಬ್ಬ, 7 ಭಾನುವಾರದ ರಜೆ ಇರುವ ಪ್ರಯುಕ್ತ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ (NWKRTC) ವಿಶೇಷ ಹೆಚ್ಚುವರಿ ಸಾರಿಗೆ ಬಸ್‌ (Bus) ಕಾರ್ಯಾಚರಣೆ ಮಾಡಲಿವೆ.

ದೀಪಾವಳಿ ಹಬ್ಬಕ್ಕೆ ಬಂದು ಹೋಗುವ ಪ್ರಯಾಣಿಕರ (Passengers) ಅನುಕೂಲಕ್ಕಾಗಿ ಅ. 30 ಮತ್ತು 31ರಂದು ಬೆಂಗಳೂರು (Bengaluru), ಮಂಗಳೂರು (Mangaluru), ಹೈದರಾಬಾದ್‌, ಪಣಜಿ, ಪುಣೆ, ಮುಂಬೈ ಮತ್ತು ಇನ್ನಿತರ ಪ್ರಮುಖ ನಗರಗಳಿಂದ ರಾಜ್ಯದ ವಿವಿಧ ಪ್ರದೇಶಗಳಿಗೆ ಹಾಗೂ ಸ್ವಂತ ಊರುಗಳಿಗೆ ತೆರಳುವ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಸಂಸ್ಥೆಯ ವ್ಯಾಪ್ತಿಯ ಹುಬ್ಬಳ್ಳಿ (Hubli), ಧಾರವಾಡ, ಗದಗ, ಬೆಳಗಾವಿ (Belagavi), ಚಿಕ್ಕೋಡಿ, ಉತ್ತರ ಕನ್ನಡ, ಹಾವೇರಿ ಮತ್ತು ಬಾಗಲಕೋಟೆ (Bagalakote) ವಿಭಾಗಗಳಿಂದ ಒಟ್ಟು 600ಕ್ಕಿಂತ ಹೆಚ್ಚು ವಿಶೇಷ ಹೆಚ್ಚುವರಿ ಸಾರಿಗೆಗಳನ್ನು ಕಾರ್ಯಾಚರಣೆಗೊಳಿಸಲಾಗುತ್ತಿದೆ.

ಕಾಗದ ರಹಿತ ವ್ಯವಸ್ಥೆಗೆ ಸಾರಿಗೆ ಇಲಾಖೆ ಸಿದ್ಧತೆ: ಸಚಿವ ರಾಮುಲು

ಹಬ್ಬ ಮುಗಿದ ನಂತರ ಬೆಂಗಳೂರು ಮತ್ತು ಇತರ ನಗರಗಳಿಗೆ ತೆರಳುವ ಪ್ರಯಾಣಿಕರಿಗಾಗಿ ನ.5 ಮತ್ತು 7 ರಂದು ಸಹ ಬೇಡಿಕೆಗನುಗುಣವಾಗಿ ಹೆಚ್ಚುವರಿ ವಿಶೇಷ ಸಾರಿಗೆ ವಾಹನಗಳ ಕಾರ್ಯಾಚರಣೆ ಮಾಡಲಾಗುವುದು. ಪ್ರಯಾಣಿಕರು ಮುಂಗಡ ಟಿಕೆಟ್‌ಗಳನ್ನು ಕೆ.ಎಸ್‌.ಆರ್‌.ಟಿ.ಸಿ (KSRTC) ಮೊಬೈಲ್‌ ಆ್ಯಪ್‌ ಹಾಗೂ  ವೆಬ್‌ಸೈಟ್‌ನಲ್ಲಿ ಬುಕ್ಕಿಂಗ್‌ ಮಾಡಬಹುದಾಗಿದೆ. ಕೋವಿಡ್‌ (Covid) ಮಾರ್ಗಸೂಚಿ ಗಮನದಲ್ಲಿಟ್ಟುಕೊಂಡು ಸಾರ್ವಜನಿಕರು ಸಾರಿಗೆ ಸೌಲಭ್ಯದ ಸದುಪಯೋಗ ಪಡೆದುಕೊಳ್ಳಬೇಕು ಎಂದು ವಾ.ಕ.ರ.ಸಾ. ಸಂಸ್ಥೆಯ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜ್ಯಾದ್ಯಂತ 1000 ಬಸ್

ದೀಪಾವಳಿ ಹಿನ್ನೆಲೆಯಲ್ಲಿ ಅ.29ರಿಂದ ನ.11ರ ವರೆಗೆ ಒಂದು ಸಾವಿರ ಹೆಚ್ಚುವರಿ ಬಸ್‌ಗಳನ್ನು (Bus) ಕಾರ್ಯಾಚರಣೆ ಮಾಡಲಾಗುವುದು. ರಾಜ್ಯದ ಧರ್ಮಸ್ಥಳ  (Dharmastala), ಕುಕ್ಕೆ ಸುಬ್ರಹ್ಮಣ್ಯ, ಶಿವಮೊಗ್ಗ (Shivamogga), ಹಾಸನ (Hassan), ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ಮೈಸೂರು, ಮಡಿಕೇರಿ, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್‌ ಮೊದಲಾದ ಸ್ಥಳಗಳಿಗೆ ಹೆಚ್ಚುವರಿ ಬಸ್‌ ಸಂಚರಿಸಲಿವೆ.

ಸಾರಿಗೆ ನೌಕರರಿಗೆ ಗುಡ್‌ನ್ಯೂಸ್: ಎಲ್ಲಾ ಕೇಸ್‌ಗಳನ್ನು ವಾಪಸ್ ಪಡೆಯಲು ಸರ್ಕಾರ ನಿರ್ಧಾರ

ಹೊರರಾಜ್ಯದ ತಿರುಪತಿ (Tirupathi), ವಿಜಯವಾಡ, ಹೈದರಾಬಾದ್‌, ತಿರುವನಂತಪುರಂ, ಕೊಟ್ಟಾಯಂ, ಚೆನ್ನೈ (Chennai), ಕೊಯಮತ್ತೂರು, ಪೂನಾ, ಪಣಜಿ ಮೊದಲಾದ ಸ್ಥಳಗಳಿಗೆ ಹೆಚ್ಚುವರಿ ಬಸ್‌ ಕಾರ್ಯಾಚರಣೆ ಮಾಡಲಾಗುವುದು. ಹೆಚ್ಚುವರಿ ಬಸ್‌ಗಳ ಪ್ರಯಾಣ ದರದಲ್ಲಿ ಯಾವುದೇ ಹೆಚ್ಚಳ ಇರುವುದಿಲ್ಲ. ನಿಗಮದ ಅಧಿಕೃತ ಜಾಲತಾಣ ಮತ್ತು ರಾಜ್ಯ ಹಾಗೂ ಹೊರರಾಜ್ಯಗಳಲ್ಲಿರುವ ಬುಕಿಂಗ್‌ ಕೌಂಟರ್‌ಗಳಲ್ಲಿ ಮುಂಗಡ ಟಿಕೆಟ್‌ ಕಾಯ್ದಿರಿಸಬಹುದು. ಪ್ರಯಾಣಿಕರು ಈ ಹೆಚ್ಚುವರಿ ಬಸ್‌ಗಳ ಉಪಯೋಗ ಪಡೆದುಕೊಳ್ಳುವಂತೆ ಕೆಎಸ್‌ಆರ್‌ಟಿಸಿ ಕೋರಿದೆ.

Latest Videos
Follow Us:
Download App:
  • android
  • ios