ಪದವಿ, ಸ್ನಾತಕೋತ್ತರ ಪದವಿ ಹಾಗೂ ಇಂಜಿನಿಯರಿಂಗ್‌ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಹಿಂದಿನ ವರ್ಷದ ಅಂಕ ಮತ್ತು ಪ್ರತಿಭೆಯನ್ನಾಧರಿಸಿ ಉತ್ತೀರ್ಣಗೊಳಿಸಬೇಕು. ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)ಯನ್ನು ಮುಂದೂಡಬೇಕೆಂದು ಒತ್ತಾಯಿಸಿ ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ(ಎನ್‌ಎಸ್‌ಯುಐ)ದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಬೆಂಗಳೂರು(ಜು.25): ಪದವಿ, ಸ್ನಾತಕೋತ್ತರ ಪದವಿ ಹಾಗೂ ಇಂಜಿನಿಯರಿಂಗ್‌ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಹಿಂದಿನ ವರ್ಷದ ಅಂಕ ಮತ್ತು ಪ್ರತಿಭೆಯನ್ನಾಧರಿಸಿ ಉತ್ತೀರ್ಣಗೊಳಿಸಬೇಕು. ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)ಯನ್ನು ಮುಂದೂಡಬೇಕೆಂದು ಒತ್ತಾಯಿಸಿ ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ(ಎನ್‌ಎಸ್‌ಯುಐ)ದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

"

ಶನಿವಾರ ರಾಜಭವನದ ಮುಂಭಾಗ ಪಿಪಿಇ ಕಿಟ್‌ ಮತ್ತು ಮಾಸ್ಕ್‌ ಧರಿಸಿದ್ದ ಹಲವು ಮಂದಿ ಎನ್‌ಎಸ್‌ಯುಐ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಪಿಪಿಇ ಕಿಟ್‌ ಮತ್ತು ಕೊರೋನಾ ಹೆಲ್ಮೆಟ್‌ ಧರಿಸಿದ್ದ ಕಾರ್ಯಕರ್ತರು ಅಣಕು ಪ್ರದರ್ಶನ ನಡೆಸಿ ವಿನೂತನವಾಗಿ ಪ್ರತಿಭಟಿಸಿದರು.

ಕೊರೋನಾ ವಿರುದ್ಧ ಹೋರಾಟ, ಮನೆ-ಮನೆ ಸಮೀಕ್ಷೆ ಚುರುಕುಗೊಳಿಸಿ, ಸಚಿವ ಸುಧಾಕರ್‌

ಜತೆಗೆ ಉನ್ನತ ಶಿಕ್ಷಣ ಸಚಿವ ಅಶ್ವತ್‌ ನಾರಾಯಣ ವಿರುದ್ಧ ಘೋಷಣೆಗಳನ್ನು ಕೂಗಿದರು. ಈ ವೇಳೆ ಸ್ಥಳದಿಂದ ತೆರಳುವಂತೆ ಪೊಲೀಸರು ಪ್ರತಿಭಟನಾಕರಾರರನ್ನು ಒತ್ತಾಯಿಸಿದ್ದರಿಂದ ಕೆಲ ಹೊತ್ತು ಪೊಲೀಸರು ಮತ್ತು ಪ್ರತಿಭಟನಾಕಾರರ ಮಧ್ಯೆ ವಾಗ್ವಾದ ನಡೆಯಿತು.

ನಂತರ, ಕೊರೋನಾ ಸೋಂಕು ದಿನೇ ದಿನೆ ಹೆಚ್ಚುತ್ತಿದೆ. ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ಆತಂಕ ಮನೆ ಮಾಡಿದೆ. ಈ ಹಿನ್ನೆಲೆಯಲ್ಲಿ ಅಂತಿಮ ವರ್ಷದ ಪದವಿ, ಸ್ನಾತಕೋತ್ತರ ಪದವಿ ಮತ್ತು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ (ವಿಟಿಯು) ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಹಿಂದಿನ ವರ್ಷದ ಅಂಕಗಳು ಹಾಗೂ ಪ್ರತಿಭೆಯನ್ನಾಧರಿಸಿ ಉತ್ತೀರ್ಣಗೊಳಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ರಾತ್ರೋರಾತ್ರಿ ಕೆ.ಸಿ.ಜನರಲ್‌ ಆಸ್ಪತ್ರೆ ಅವ್ಯವಸ್ಥೆ ಬಯಲು ಮಾಡಿದ ಸಚಿವ ಸುಧಾಕರ್‌!

ಕೋವಿಡ್‌ ಹಿನ್ನಲೆಯಲ್ಲಿ ಈಗಾಗಲೇ ಕೇಂದ್ರ ಸರ್ಕಾರ ಜೆಇಇ ಮತ್ತು ಎನ್‌ಇಇಟಿ ಪ್ರವೇಶ ಪರೀಕ್ಷೆಗಳನ್ನು ಮುಂದೂಡಿದೆ. ಇದರ ಆಧಾರದಲ್ಲಿ ಸಿಇಟಿಯನ್ನು ಕೊರೋನಾ ಸೋಂಕು ಕಡಿಮೆಯಾಗುವವರೆಗೂ ಮುಂದೂಡುವ ಮೂಲಕ ಆತಂಕದಲ್ಲಿರುವ ಪೋಷಕರು ಮತ್ತು ವಿದ್ಯಾರ್ಥಿಗಳಲ್ಲಿ ಧೈರ್ಯ ತುಂಬುವಂತ ಕಾರ್ಯವನ್ನು ಕೈಗೊಳ್ಳಬೇಕು. ಕೊರೋನಾ ಸೋಂಕು ಹೆಚ್ಚಳವಾಗುತ್ತಿರುವ ಈ ಸಂದರ್ಭದಲ್ಲಿ ಸಿಇಟಿ ಸೇರಿದಂತೆ ಯಾವುದೇ ರೀತಿಯ ಪರೀಕ್ಷೆಗಳನ್ನು ನಡೆಸುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.