ಹಿಂದೆ ಅತೃಪ್ತಿಕರವಾಗಿದ್ದ ಗುರಿಯನ್ನು ನಾವು ಮುಟ್ಟಲು ಯಶಸ್ವಿಯಾಗುತ್ತಿದ್ದೇವೆ ಎಂದು ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹೇಳಿದ್ದಾರೆ
ಮೈಸೂರು (ಆ.08): ಜಿಲ್ಲೆಯಲ್ಲಿ ಕೋವಿಡ್-19 ಪರೀಕ್ಷೆ ಪ್ರಮಾಣ ಹೆಚ್ಚಾಗಿದೆ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ತಿಳಿಸಿದ್ದಾರೆ.
ಸೆಪ್ಟೆಂಬರ್‌ನಲ್ಲಿ ಕೋವಿಡ್ ಪರೀಕ್ಷೆ ಅತೃಪ್ತಿಕರವಾಗಿತ್ತು. ನಿಗದಿತ ಗುರಿಯಲ್ಲಿ ಶೇ.45 ರಷ್ಟುಮಾತ್ರ ಪರೀಕ್ಷೆ ನಡೆಸುವ ಮೂಲಕ ಗುರಿ ತಲುಪಲು ವಿಫಲವಾಗಿತ್ತು. ಕೋವಿಡ್ ರೋಗಿಗಳನ್ನು ಮೊದಲೇ ಗುರುತಿಸಲು ಮತ್ತು ಅವರಿಗೆ ವೈದ್ಯಕೀಯ ಚಿಕಿತ್ಸೆ ನೀಡಲು ಪರೀಕ್ಷೆಯು ನಿರ್ಣಾಯಕವಾಗಿದೆ. ಇದರಿಂದ ಕೋವಿಡ್ ಹರಡುವಿಕೆ ತಡೆಗಟ್ಟಬಹುದು ಎಂದು ಅವರು ಹೇಳಿದ್ದಾರೆ.
ಈಗ ಮೈಸೂರಿನಲ್ಲಿ ಕೋವಿಡ್ ಪರೀಕ್ಷೆ ನಡೆಸುವ ನಿಟ್ಟಿನಲ್ಲಿ ಪ್ರತಿದಿನ ಶೇ.100 ಹೆಚ್ಚು ಗುರಿಯನ್ನು ಮುಟ್ಟುತ್ತಿದ್ದೇವೆ. ಅ.7 ರಂದು ಶೇ.124 ಗುರಿ ಸಾಧಿಸಲಾಗಿದೆ. ವಿಶೇಷ ಪರೀಕ್ಷಾ ತಂಡಗಳು ಮತ್ತು ಅಧಿಕಾರಿಗಳನ್ನು ಮೈಸೂರು ನಗರ ಮತ್ತು ಜಿಲ್ಲೆಯ ಉಳಿದ ಭಾಗಗಳಿಗೆ ಕೋವಿಡ್ ಕಾರ್ಯಕ್ಕಾಗಿ ನಿಯೋಜಿಸಲಾಗಿದೆ. ಮೈಸೂರು ನಗರವನ್ನು ಕೋವಿಡ್ ನಿರ್ವಹಣೆಗಾಗಿ 4 ವಲಯಗಳಾಗಿ ವಿಂಗಡಿಸಲಾಗಿದೆ. ಇದರಿಂದ ಪರೀಕ್ಷೆ ಸಂಖ್ಯೆ ಹೆಚ್ಚಿಸಲು ಸಾಧ್ಯವಾಗಿದೆ. ಅದೇ ರೀತಿ ಮುಂದಿನ ದಿನಗಳಲ್ಲೂ ಕೋವಿಡ್-19 ನಿಯಂತ್ರಣಕ್ಕಾಗಿ ಎಲ್ಲಾ ಪ್ರಯತ್ನಗಳನ್ನು ಮುಂದುವರಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಕೊರೋನಾ ರಣಕೇಕೆ ಮದ್ಯೆ ಶಾಲಾರಂಭಕ್ಕೆ ಮಕ್ಕಳ ಹಕ್ಕು ಆಯೋಗ ಶಿಫಾರಸು..!
ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು, ಕೈ ಸ್ವಚ್ಛತೆ ಕಾಪಾಡಿ ಮತ್ತು ಜನಸಂದಣಿಯಿಂದ ದೂರ ಇರುವಂತೆ ನಾಗರಿಕರಿಗೆ ಅವರು ಮನವಿ ಮಾಡಿದ್ದಾರೆ.
ಖಾಸಗಿ ಆಸ್ಪತ್ರೆಗಳಲ್ಲಿ ಶೇ.50 ಹಾಸಿಗೆಗಳನ್ನು ಮೀಸಲಿಡಲು ಸೂಚನೆ: ಮೈಸೂರು ಜಿಲ್ಲಾ ವ್ಯಾಪ್ತಿಯಲ್ಲಿರುವ ಖಾಸಗಿ ಆಸ್ಪತ್ರೆಗಳಲ್ಲಿ ಲಭ್ಯವಿರುವ ಎಲ್ಲಾ ಸ್ವರೂಪದ ಹಾಸಿಗೆಗಳಲ್ಲಿ ಶೇ.50 ರಷ್ಟುಹಾಸಿಗೆಗಳನ್ನು ಕೋವಿಡ್-19 ಸೋಂಕಿತ ವ್ಯಕ್ತಿಗಳಿಗೆ ಚಿಕಿತ್ಸೆ ನೀಡುವ ಸಲುವಾಗಿ ಸರ್ಕಾರದ ಪರವಾಗಿ ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡಲು ಕಾಯ್ದಿರಿಸಿ ಹಾಗೂ ಎಬಿಆರ್‌ಕೆ ಅಡಿಯಲ್ಲಿ ಸರ್ಕಾರದ ವತಿಯಿಂದ ಉಚಿತವಾಗಿ ಚಿಕಿತ್ಸೆ ನೀಡಲು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆದೇಶಿಸಿದ್ದಾರೆ.
ಸರ್ಕಾರದ ಉದ್ದೇಶಕ್ಕೆ ಶೇ.50 ಹಾಸಿಗೆಗಳನ್ನು ಕಾಯ್ದಿರಿಸಿದ್ದರೂ ಖಾಸಗಿ ಆಸ್ಪತ್ರೆಯವರು ಮಾನವ ಸಂಪನ್ಮೂಲ ಇತ್ಯಾದಿಗಳನ್ನು ಒದಗಿಸಬೇಕು. ಈ ಆದೇಶವನ್ನು ಪಾಲಿಸುವಲ್ಲಿ ನಿರ್ಲಕ್ಷ್ಯ ವಹಿಸುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ.
