ಮಂಡ್ಯ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್‌ ಟಿಕೆಟ್‌ ಆಕಾಂಕ್ಷಿತರ ಸಂಖ್ಯೆ ಹೆಚ್ಚಿದ್ದರೂ ನಮ್ಮ ನಡುವೆ ಯಾರಲ್ಲೂ ಗೊಂದಲವಿಲ್ಲ. ಮೂರು ಜನ ಟಿಕೆಟ್‌ ಆಕಾಂಕ್ಷಿಗಳಲ್ಲಿ ವರಿಷ್ಠರು ಯಾರಿಗೇ ಟಿಕೆಟ್‌ ನೀಡಿದರೂ ಅವರ ಗೆಲುವಿಗೆ ಶ್ರಮಿಸುತ್ತೇನೆ ಎಂದು ಜೆಡಿಎಸ್‌ ಪ್ರಬಲ ಟಿಕೆಟ್‌ ಆಕಾಂಕ್ಷಿತರಲ್ಲೊಬ್ಬರಾದ ಮನ್‌ಮುಲ್‌ ಅಧ್ಯಕ್ಷ ಬಿ.ಆರ್‌.ರಾಮಚಂದ್ರು ಹೇಳಿದರು.

 ಮಂಡ್ಯ (ನ.01): ಮಂಡ್ಯ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್‌ ಟಿಕೆಟ್‌ ಆಕಾಂಕ್ಷಿತರ ಸಂಖ್ಯೆ ಹೆಚ್ಚಿದ್ದರೂ ನಮ್ಮ ನಡುವೆ ಯಾರಲ್ಲೂ ಗೊಂದಲವಿಲ್ಲ. ಮೂರು ಜನ ಟಿಕೆಟ್‌ ಆಕಾಂಕ್ಷಿಗಳಲ್ಲಿ ವರಿಷ್ಠರು ಯಾರಿಗೇ ಟಿಕೆಟ್‌ ನೀಡಿದರೂ ಅವರ ಗೆಲುವಿಗೆ ಶ್ರಮಿಸುತ್ತೇನೆ ಎಂದು ಜೆಡಿಎಸ್‌ ಪ್ರಬಲ ಟಿಕೆಟ್‌ ಆಕಾಂಕ್ಷಿತರಲ್ಲೊಬ್ಬರಾದ ಮನ್‌ಮುಲ್‌ ಅಧ್ಯಕ್ಷ ಬಿ.ಆರ್‌.ರಾಮಚಂದ್ರು ಹೇಳಿದರು.

ತಾಲೂಕಿನ ಜಿ.ಹೊಸಹಳ್ಳಿ ಗ್ರಾಮದ ಶ್ರೀಶಂಭುಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಾಗೂ ಮಂಡ್ಯ (Mandya) ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್‌ (JDS) ಪಕ್ಷ ಸಂಘಟನೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. 2023ರ ವಿಧಾನಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದ ಜೆಡಿಎಸ್‌ ಟಿಕೆಟ್‌ ಆಕಾಂಕ್ಷಿಗಳಲ್ಲಿ ನಾನೂ ಒಬ್ಬ. ಟಿಕೆಟ್‌ ನೀಡುವುದು ಪಕ್ಷದ ವರಿಷ್ಠರಿಗೆ ಬಿಟ್ಟವಿಚಾರ. ಅದರ ಬಗ್ಗೆ ನಾನು ತಲೆಕೆಡಿಸಿಕೊಂಡಿಲ್ಲ. ಕ್ಷೇತ್ರದೊಳಗೆ ಪಕ್ಷ ಸಂಘಟನೆಗೆ ಮೊದಲ ಆದ್ಯತೆ ನೀಡುತ್ತಿದ್ದೇನೆ ಎಂದರು.

ನಾನು ಕ್ಷೇತ್ರಕ್ಕೆ ಹೊಸಬನೇನಲ್ಲ. ನಾನು ಹೋದೆಡೆಯಲ್ಲೆಲ್ಲಾ ಜನರು ನನ್ನನ್ನು ಪ್ರೀತಿಯಿಂದ ಸ್ವಾಗತಿಸುತ್ತಿದ್ದಾರೆ. ನನ್ನ ಪರವಾಗಿ ಜನರ ಅಭಿಪ್ರಾಯ ಚೆನ್ನಾಗಿದೆ. ಪ್ರತಿ ಗ್ರಾಮದಲ್ಲಿ ಯುವಕರು ಜನರು ನನ್ನನ್ನು ಕೈಹಿಡಿದು ಮುನ್ನಡೆಸುತ್ತಿದ್ದು, ಮುಂದಿನ ಚುನಾವಣೆಯಲ್ಲಿ ನೀವೇ ಅಭ್ಯರ್ಥಿಯಾಗುವಂತೆ ಒತ್ತಡ ಹಾಕುತ್ತಿದ್ದಾರೆ. ವರಿಷ್ಠರು ಟಿಕೆಟ್‌ ನೀಡಿ ಕ್ಷೇತ್ರದ ಜನರು ನನ್ನನ್ನು ಆಯ್ಕೆ ಮಾಡಿದರೆ ಜನಸೇವಕನಾಗಿ ಕೆಲಸ ಮಾಡಲು ಸಿದ್ಧನಿದ್ದೇನೆ ಎಂದರು.

ಮಂಡ್ಯ ತಾಲೂಕಿನಲ್ಲಿ ಕಳೆದ 30 ವರ್ಷಗಳಿಂದ ನಾನು ವ್ಯಾಪಾರ ಮಾಡಿಕೊಂಡು, ಸಾಮಾಜಿಕ ಸೇವೆ ಮಾಡಿಕೊಂಡು ಜನರ ಜೊತೆ ಇದ್ದೇನೆ. ನಾನು ಮಂಡ್ಯದ ಕಲ್ಲಹಳ್ಳಿಯಲ್ಲಿ ವಾಸವಿದ್ದೇನೆ. ಆದರೂ ನನ್ನ ಬಗ್ಗೆ ಮತ್ತೋರ್ವ ಟಿಕೆಟ್‌ ಆಕಾಂಕ್ಷಿ ಎಚ್‌.ಎನ್‌.ಯೋಗೇಶ್‌ ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ. ಆದರೂ ನನಗೆ ಅವರ ಬಗ್ಗೆ ಬೇಜಾರಿಲ್ಲ. ಅವರು ನನ್ನ ಬ್ರದರ್‌ ಇದ್ದಂತೆ ಎಂದು ನಯವಾಗಿಯೇ ಚುಚ್ಚಿದರು.

ರಾಜ್ಯದ ಜ್ವಲಂತ ಸಮಸ್ಯೆಗಳಿಗೆ ಪ್ರಾದೇಶಿಕ ಪಕ್ಷವೇ ಪರಿಹಾರವಾಗಿರುವುದರಿಂದ ಜೆಡಿಎಸ್‌ ಪಕ್ಷವನ್ನು ಸದೃಢಗೊಳಿಸುವುದೇ ನಮ್ಮ ಮುಖ್ಯ ಗುರಿ. ಮಂಡ್ಯ ವಿಧಾನಸಭಾ ಕ್ಷೇತ್ರದ ಗ್ರಾಮಗಳ ಮನೆ ಮನೆಗೆ ಭೇಟಿ ನೀಡಿ ಜೆಡಿಎಸ್‌ ಪಕ್ಷದ ಗುರಿ, ಉದ್ದೇಶ ಹಾಗೂ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ರಾಜ್ಯದ ಜನರಿಗೆ ನೀಡಿದ ಕೊಡುಗೆಗಳನ್ನು ಜನರಿಗೆ ತಿಳಿಸುವ ಮೂಲಕ ಪಕ್ಷವನ್ನು ಸಂಘಟಿಸಿ ಕಾರ್ಯಕರ್ತರಲ್ಲಿ ಹೊಸ ಚೈತನ್ಯ ಮೂಡಿಸಲಾಗುವುದು ಎಂದರು.

ನವೆಂಬರ್‌ 1 ರಂದು ಕನ್ನಡ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಮನೆ ಮನೆಗೆ ಕನ್ನಡ ಬಾವುಟ ಅಭಿಯಾನಕ್ಕೆ ಚಾಲನೆ ನೀಡಿದ ಅವರು, ಬಸರಾಳು ಹೋಬಳಿ, ಕೆರಗೋಡು ಹೋಬಳಿ,ಮಂಡ್ಯ ಸಿಟಿ ಹಾಗೂ ಕಸಬಾ ಹೋಬಳಿಗೂ ಭೇಟಿ ನೀಡಿ ಕನ್ನಡ ಬಾವುಟವನ್ನು ವಿತರಣೆ ಮಾಡಲಾಗಿದ್ದು,ಪ್ರತಿಯೊಬ್ಬರು ಮನೆ ಮನೆಯಲ್ಲಿ ಕನ್ನಡ ಬಾವುಟವನ್ನು ಹಾರಿಸುವಂತೆ ತಿಳಿಸಿದರು.

ಶ್ರೀ ಶಂಭು ಸೇವಾ ಟ್ರಸ್ವ್‌ ವತಿಯಿಂದ ಹಮ್ಮಿಕೊಂಡಿರುವ ಸರ್ಕಾರಿ ಶಾಲಾ ಮಕ್ಕಳಿಗೆ ಬ್ಯಾಗ್‌ ವಿತರಣೆ ಕಾರ್ಯಕ್ರಮ ಯಶಸ್ವಿಯಾಗಿ ನಡೆದಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಶ್ರೀಈ ಶಂಭು ಧರ್ಮಯಾತ್ರೆ ಮುಂದೆಯೂ ಮುಂದುವರೆಯಲಿದೆ ಎಂದರು.

ಈ ಸಂದರ್ಭದಲ್ಲಿ ಮನ್‌ ಮುಲ್‌ ಉಪಾಧ್ಯಕ್ಷ ಎಂ.ಎಸ್‌.ರಘುನಂದನ್‌, ಬಾಲರಾಜು, ಕಲ್ಪನಾ ರಾಮಚಂದ್ರ, ಕೃಷ್ಣೇಗೌಡ, ಪುಟ್ಟಸ್ವಾಮಿ, ಜೆಡಿಎಸ್‌ ಪಕ್ಷದ ಹಲವು ಮುಖಂಡರಿದ್ದರು. 

ಮಂಡ್ಯ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್‌ ಟಿಕೆಟ್‌ ಆಕಾಂಕ್ಷಿತರ ಸಂಖ್ಯೆ ಹೆಚ್ಚಿದ್ದರೂ ನಮ್ಮ ನಡುವೆ ಯಾರಲ್ಲೂ ಗೊಂದಲವಿಲ್ಲ

ಮೂರು ಜನ ಟಿಕೆಟ್‌ ಆಕಾಂಕ್ಷಿಗಳಲ್ಲಿ ವರಿಷ್ಠರು ಯಾರಿಗೇ ಟಿಕೆಟ್‌ ನೀಡಿದರೂ ಅವರ ಗೆಲುವಿಗೆ ಶ್ರಮಿಸುತ್ತೇನೆ

ಜೆಡಿಎಸ್‌ ಪ್ರಬಲ ಟಿಕೆಟ್‌ ಆಕಾಂಕ್ಷಿತರಲ್ಲೊಬ್ಬರಾದ ಮನ್‌ಮುಲ್‌ ಅಧ್ಯಕ್ಷ ಬಿ.ಆರ್‌.ರಾಮಚಂದ್ರು