ಹಾವೇರಿ ಜಿಲ್ಲೆಯ ಆಡೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 7 ವರ್ಷದ ಬಾಲಕನ ಕೆನ್ನೆಯ ಗಾಯಕ್ಕೆ ನರ್ಸ್‌ ಫೆವಿಕ್ವಿಕ್‌ ಹಚ್ಚಿ ಚಿಕಿತ್ಸೆ ನೀಡಿದ್ದಾರೆ. ಸ್ಟಿಚ್ ಹಾಕಿದರೆ ಕಲೆ ಉಳಿಯುತ್ತದೆ ಎಂದು ನರ್ಸ್ ಹೇಳಿದ್ದಾರೆ. ಈ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಪೋಷಕರು ದೂರು ನೀಡಿದ್ದಾರೆ.

ಹಾವೇರಿ (ಫೆ.4): ಬಾಲಕ ಕೆನ್ನೆಯ ಮೇಲೆ ಆದ ಗಾಯಕ್ಕೆ ಸ್ಟಿಚ್ ಹಾಕುವ ಬದಲು ನರ್ಸ್‌ವೊಬ್ಬಾಕೆ ಫೆವಿಕ್ವಿಕ್‌ ಹಾಕಿರುವ ಘಟನೆ ನಡೆದಿದೆ. ಹಾವೇರಿ ಜಿಲ್ಲೆ ಹಾನಗಲ್ ತಾಲೂಕು ಆಡೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಘಟನೆ ನಡೆದಿದೆ. ಕಳೆದ ಜನವರಿ 14ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.7 ವರ್ಷದ ಗುರುಕಿಶನ್ ಅಣ್ಣಪ್ಪ ಹೊಸಮನಿ ಎಂಬ ಬಾಲಕನಿಗೆ ಕೆನ್ನೆ ಮೇಲೆ ಗಾಯ ಆಗಿತ್ತು. ಆಟ ಆಡುವಾಗ ಗುರುಕಿಶನ್‌ ಕೆನ್ನೆಗೆ ಗಾಯ ಮಾಡಿಕೊಂಡಿದ್ದ. ಕೆನ್ನೆಯ ಮೇಲಿನ ಗಾಯ ಬಹಳ ಆಳಕ್ಕೆ ಇಳಿದಿದ್ದರಿಂದ ರಕ್ತ ಕೂಡ ಸುರಿಯುತ್ತಿತ್ತು. ಕೂಡಲೇ ಬಾಲಕ ಗುರುಕಿಶನ್ ನನ್ನು ಆಡೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕುಟುಂಬಸ್ಥರು ಕರೆದೊಯ್ದಿದ್ದರು. ವಿದ್ಯಾರ್ಥಿಗೆ ಗಾಯಕ್ಕೆ ಹೊಲಿಗೆ ಹಾಕೋದು ಬಿಟ್ಟು ಫೆವಿಕ್ವಿಕ್ ಗಮ್ ಅಂಟಿಸಿ ನರ್ಸ್‌ ಜ್ಯೋತಿ ಎನ್ನುವವರು ಚಿಕಿತ್ಸೆ ನೀಡಿದ್ದರು.

ಇತ್ತ ಬಾಲಕನಿಗೆ ಫೆವಿಕ್ವಿಕ್ ಯಾಕೆ ಹಾಕಿದ್ದೀರಿ ಅಂತ ಕೇಳಿದರೆ ಸ್ಟಿಚ್ ಹಾಕಿದರೆ ಬಾಲಕನ ಕೆನ್ನೆ ಮೇಲೆ ಕಲೆ ಆಗ್ತಾ ಇತ್ತು ಎಂದು ಹೇಳಿದ್ದಾರೆ. ಹೀಗಾಗಿ ಚರ್ಮದ ಮೇಲಷ್ಟೇ ಫೆವಿಕ್ವಿಕ್ ಹಾಕಿ ಚಿಕಿತ್ಸೆ ನೀಡಿದ್ದೇನೆ ಎಂದು ನರ್ಸ್‌ ಜ್ಯೋತಿ ಹೇಳಿದ್ದಾರೆ.
ನನಗೆ ತಿಳಿದ ಮಟ್ಟಿಗೆ ನಾನು ಚಿಕಿತ್ಸೆ ಮಾಡಿದ್ದೇನೆ. ನೀವು ಫೆವಿಕ್ವಿಕ್ ಹಚ್ಚಬೇಡಿ ನಾವು ಮುಂದೆ ಹೋಗುತ್ತೇವೆ ಅಂದಿದ್ದರೆ ರೆಫರ್ ಮಾಡುತ್ತಿದ್ದೆವು ಎಂದು ಹೇಳಿದ್ದಾರೆ. ಈ ಬಗ್ಗೆ ಮೊಬೈಲ್ ನಲ್ಲಿ ವಿಡಿಯೋವನ್ನು ಬಾಲಕನ ಪೋಷಕರು ಚಿತ್ರೀಕರಿಸಿದ್ದಾರೆ. ಈ ಬಗ್ಗೆ ಆಡೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ರಕ್ಷಾ ಸಮಿತಿಗೆ ಬಾಲಕನ ಪೋಷಕರು ದೂರು ನೀಡಿದ್ದಾರೆ.

Viral Video: ಟೀಮ್‌ ಇಂಡಿಯಾ ಥ್ರೋಡೌನ್‌ ಸ್ಪೆಷಲಿಸ್ಟ್‌ ಕನ್ನಡಿಗ ರಘುಗೆ ಹೋಟೆಲ್‌ ಎಂಟ್ರಿ ನಿರಾಕರಿಸಿದ ಪೊಲೀಸ್‌!

ಈ ಬಗ್ಗೆ ವರದಿ ಪಡೆದು ಕ್ರಮ ಜರುಗಿಸಲು ಡಿ.ಹೆಚ್ ಒ ರಾಜೇಶ್ ಸುರಗಿಹಳ್ಳಿ ಮುಂದಾಗಿದ್ದಾರ. ಹಾವೇರಿ ತಾಲೂಕು ಗುತ್ತಲ ಆರೋಗ್ಯ ಸಂಸ್ಥೆಗೆ ನಿಯೋಜನೆ ಮಾಡಲು ಡಿ‌ಹೆಚ್.ಒ ಆದೇಶ ಮಾಡಿದ್ದಾರೆ. ಫೆವಿಕ್ವಿಕ್ ಹಾಕಿ ನಿರ್ಲಕ್ಷ್ಯ ತೋರಿದರೂ ನರ್ಸ್ ಜ್ಯೋತಿ ಅಮಾನತು ಮಾಡಲು ಡಿಹೆಚ್ ಒ ಹಿಂದೇಟು ಹಾಕಿದ್ದಾರೆ.

ಅಪ್ಪನ ಶವ 2 ತುಂಡು ಮಾಡಿ ಅಂತ್ಯಸಂಸ್ಕಾರಕ್ಕೆ ಪಾಪಿ ಮಕ್ಕಳ ಸ್ಕೆಚ್‌!