Asianet Suvarna News Asianet Suvarna News

ಕೊರೋನಾ ಭೀತಿ: ಬಸ್‌ ಸಂಚಾರ ತಾತ್ಕಾಲಿಕ ಸ್ಥಗಿತ

ವಾಕರಸಾ ಸಂಸ್ಥೆಯ 60 ಬಸ್‌ಗಳ ಸಂಚಾರ ಸ್ಥಗಿತ| ಎಲ್ಲ ಸಿಬ್ಬಂದಿಗೆ ಮಾಸ್ಕ್‌ ಉಪಯೋಗಿಸಲು ಸೂಚನೆ| ಕೊರೋನಾ ವೈರಸ್‌ ಬಗ್ಗೆ ಅನುಸರಿಸಬೇಕಾದ ಮುಂಜಾಗೃತಾ ಕ್ರಮಗಳ ಬಗ್ಗೆ ಧ್ವನಿ ವರ್ಧಕದ ಮೂಲಕ ಜಾಗೃತಿ| 

NWKRTC Decides 60 Bus Service Temporarily Cancel in Hubballi
Author
Bengaluru, First Published Mar 16, 2020, 8:07 AM IST

ಹುಬ್ಬಳ್ಳಿ(ಮಾ.16): ಕೊರೋನಾ ವೈರಸ್‌ ತಡೆಗಟ್ಟುವ ಹಿನ್ನೆಲೆಯಲ್ಲಿ ವಾಕರಸಾ ಸಂಸ್ಥೆಯ 60 ಬಸ್‌ಗಳ ಅನುಸೂಚಿಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಹುಬ್ಬಳ್ಳಿ ಗ್ರಾಮಾಂತರ ವಿಭಾಗದ ವ್ಯಾಪ್ತಿಯ ಎಲ್ಲ ಬಸ್‌ ಘಟಕಗಳಲ್ಲಿ ಡೆಟಾಲ್ ಫಿನಾಯಿಲ್‌ ಮತ್ತು ಸ್ಯಾನಿಟೈಜರ್‌ ಬಳಸಿ ಬಸ್ಸುಗಳನ್ನು ಸ್ವಚ್ಛಗೊಳಿಸಲಾಗುತ್ತಿದೆ.

ಕಲಬುರಗಿಯಲ್ಲಿ ಮತ್ತೊಬ್ಬರಿಗೆ ಕೊರೋನಾ ವೈರಸ್ ದೃಢ: 133 ಸೆಕ್ಷನ್‌ ಜಾರಿ

ಎಲ್ಲ ಸಿಬ್ಬಂದಿಗೆ ಮಾಸ್ಕ್‌ಗಳನ್ನು ಉಪಯೋಗಿಸಲು ಸೂಚಿಸಲಾಗಿದೆ. ಬಸ್‌ ನಿಲ್ದಾಣಗಳ ಆವರಣಗಳು ಪ್ರಯಾಣಿಕರು ಕುಳಿತುಕೊಳ್ಳುವ ಸ್ಥಳ ಮತ್ತು ಶೌಚಾಲಯಗಳನ್ನು ನಿರಂತರವಾಗಿ ಸ್ಯಾನಿಟೈಜರ್‌ ಉಪಯೋಗಿಸಿ ಸ್ವಚ್ಛಗೊಳಿಸಲು ಕ್ರಮವಹಿಸಲಾಗಿದೆ. ಕೊರೋನಾ ವೈರಸ್‌ ಬಗ್ಗೆ ಅನುಸರಿಸಬೇಕಾದ ಮುಂಜಾಗೃತಾ ಕ್ರಮಗಳ ಬಗ್ಗೆ ಧ್ವನಿ ವರ್ಧಕದ ಮೂಲಕ ಮಾಹಿತಿ ಬಿತ್ತರಿಸಿ ಪ್ರಯಾಣಿಕರಿಗೆ ಜಾಗೃತಿ ಮೂಡಿಸಲಾಗುತ್ತಿದೆ.

ಬರಲಿದೆ ಮೋಸ್ಟ್ ಡೇಂಜರಸ್ ಕೊರೋನಾ ಹಂತ 3, 4

ಪ್ರಯಾಣಿಕರ ಸಂಚಾರ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ 15 ಪ್ರತಿಷ್ಠಿತ, 20 ವೇಗದೂತ ಹಾಗೂ 25 ಸಾಮಾನ್ಯ ಸಾರಿಗೆಗಳು ಸೇರಿದಂತೆ 60 ಅನುಸೂಚಿಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಪ್ರಯಾಣಿಕರ ಸಂಚಾರ ಪ್ರಮಾಣವನ್ನು ಗಮನಿಸಿ ಅಗತ್ಯವಿದ್ದಲ್ಲಿ ಇನ್ನಷ್ಟು ಬಸ್ಸುಗಳ ಸಂಚಾರವನ್ನು ಸ್ಥಗಿತಗೊಳಿಸಲಾಗುವುದು. ಪ್ರತಿ ಬಸ್‌ ಘಟಕ ಮತ್ತು ಬಸ್‌ ನಿಲ್ದಾಣಕ್ಕೆ ಅಧಿಕಾರಿಗಳು ಮತ್ತು ಮೇಲ್ವಿಚಾರಕ ಸಿಬ್ಬಂದಿ ಒಳಗೊಂಡ ವಿಪತ್ತು ನಿರ್ವಹಣಾ ತಂಡಗಳನ್ನು ನಿಯೋಜಿಸಲಾಗಿದ್ದು ನಿರಂತರ ಸ್ವಚ್ಛತೆ ಬಗ್ಗೆ ನಿಗಾ ವಹಿಸಲಾಗಿದೆ ಎಂದು ಗ್ರಾಮಾಂತರ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್‌. ರಾಮನಗೌಡರ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
 

Follow Us:
Download App:
  • android
  • ios