ಚಿಕ್ಕಮಗಳೂರು: ಒಕ್ಕಲಿಗರ ವಿರುದ್ಧ ಅವಹೇಳನಕಾರಿ ಹೇಳಿಕೆ, ಭಗವಾನ್ ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದು ಆಕ್ರೋಶ

ಪ್ರತಿಭಟನೆ ಸಂದರ್ಭದಲ್ಲಿ ಭಗವಾನ್ ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದು ಆಕ್ರೋಶ ಹೊರಹಾಕಿದರು. ಭಗವಾನ್ ವಿರುದ್ಧ ಸೂಕ್ತ ಕ್ರಮಕ್ಕೆ ಪ್ರತಿಭಟನಾನಿತರು ಆಗ್ರಹಿಸಿದರು. ಅಲ್ಲದೆ ಸರ್ಕಲ್ ಇನ್ಸ್ಪೆಕ್ಟರ್ ಸತ್ಯನಾರಾಯಣರವರಿಗೆ ಭಗವಾನ್ ವಿರುದ್ಧ ಕಾನೂನಾತ್ಮಕ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಮನವಿ ಪತ್ರವನ್ನು ನೀಡಿದರು. 

Okkaliga Sangha Held Protest Against Pro KS Bhagawan in Chikkamagaluru grg

ವರದಿ: ಆಲ್ದೂರು ಕಿರಣ್, ಏಷ್ಯಾನೆಟ್ ಸುವರ್ಣ ನ್ಯೂಸ್, ಚಿಕ್ಕಮಗಳೂರು 

ಚಿಕ್ಕಮಗಳೂರು(ಅ.17):  ಪ್ರೊ. ಭಗವಾನ್ ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದು ಆಕ್ರೋಶ ಹೊರಹಾಕಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಆಲ್ದೂರು ಪಟ್ಟಣದಲ್ಲಿ ಇಂದು(ಮಂಗಳವಾರ) ನಡೆದಿದೆ. ಪಟ್ಟಣದ ಕೆಂಪೇಗೌಡ ವೃತ್ತದಲ್ಲಿ ಒಕ್ಕಲಿಗ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಪ್ರೊ. ಭಗವಾನ್ ವಿರುದ್ಧ ಒಕ್ಕಲಿಗ ಸಂಘದಿಂದ ಪ್ರತಿಭಟನೆ ನಡೆಸಲಾಯಿತು. ಒಕ್ಕಲಿಗ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆಯನ್ನು ನೀಡಿದ ಪ್ರೊಫೆಸರ್ ಭಗವಾನ್ ವಿರುದ್ಧ ಪ್ರತಿಭಟನ ಮೆರವಣಿಗೆಯನ್ನು ನಡೆಸಿ ಆಕ್ರೋಶ ಹೊರಹಾಕಲಾಯಿತು. 

ಭಗವಾನ್ ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದು ಆಕ್ರೋಶ : 

ಪ್ರತಿಭಟನೆ ಸಂದರ್ಭದಲ್ಲಿ ಭಗವಾನ್ ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದು ಆಕ್ರೋಶ ಹೊರಹಾಕಿದರು. ಭಗವಾನ್ ವಿರುದ್ದ ಸೂಕ್ತ ಕ್ರಮಕ್ಕೆ ಪ್ರತಿಭಟನಾನಿತರು ಆಗ್ರಹಿಸಿದರು. ಅಲ್ಲದೆ ಸರ್ಕಲ್ ಇನ್ಸ್ಪೆಕ್ಟರ್ ಸತ್ಯನಾರಾಯಣರವರಿಗೆ ಭಗವಾನ್ ವಿರುದ್ಧ ಕಾನೂನಾತ್ಮಕ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಮನವಿ ಪತ್ರವನ್ನು ನೀಡಿದರು. ಇದೇ ಸಮಯದಲ್ಲಿ ಆಲ್ದೂರು ವಲಯ ಒಕ್ಕಲಿಗ ಸಂಘದ ಅಧ್ಯಕ್ಷ ಡಿ.ಬಿ.ಅಶೋಕ್ ಮಾತನಾಡಿ, ರಾಜ್ಯದಲ್ಲಿ ಒಕ್ಕಲಿಗ ಸಮಾಜ ಹತ್ತಾರು ಮುಖ್ಯಂತ್ರಿಗಳನ್ನು ನೀಡಿದೆ. ಹೆಸರಾಂತ ಸಾಹಿತಿಗಳಾದ ಕುವೆಂಪು, ಜವರೇಗೌಡ ನಮ್ಮ ಸಮಾಜದವರಾಗಿದ್ದು, ಅನೇಕ ಕೊಡುಗೆಗಳನ್ನು ಕೊಟ್ಟಿರುವ ಈ ಸಮಾಜದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಭಗವಾನ್ ಸಾಹಿತಿ ಅಲ್ಲ.ಅವರನ್ನು ರಾಜ್ಯದಿಂದ ಗಡಿಪಾರು ಮಾಡಬೇಕು ಎಂದು ಒತ್ತಾಯಿಸಿದರು.

Chikkamagaluru: ನಗರಸಭೆ ಅಧ್ಯಕ್ಷರೇ ನಿಮಗೆ ಮಾನ, ಮರ್ಯಾದೆ ಇದ್ದರೆ ನಿಮ್ಮ ಬೆಂಬಲ ತೋರಿಸಿ!

ಪೊಲೀಸ್ ಭದ್ರತೆ ಕೊಡಬಾರದು : 

ಭಗವಾನ್‌ಗೆ ಬುದ್ದಿ ಭ್ರಮಣೆಯಾಗಿದೆ ಅವರ ಮಾತಿನಲ್ಲಿ ಹಿಡಿತವಿಲ್ಲ . ಇವರಿಗೆ ಪೊಲೀಸ್ ಇಲಾಖೆಯಿಂದ ಭದ್ರತೆ ಕೊಡಬಾರದು. ಸಮಾಜದಲ್ಲಿ ಅಶಾಂತಿ ಉಂಟು ಮಾಡುವವರಿಗೆ ಜನರು ಬುದ್ದಿ ಕಲಿಸ ಬೇಕು. ಪ್ರತಿಭಟನೆ ಮಾಡಿದರೆ ಪ್ರಯೋಜನವಿಲ್ಲ ಅವರು ನೆಡೆಸುವ ಕಾರ್ಯಕ್ರಮಕ್ಕೆ ಘೇರಾವ್ ಹಾಕಬೇಕು. ಮಾನಸಿಕವಾಗಿ ಅಸ್ವಸ್ಥರಾಗಿರುವ ಭಗವಾನ್‌ರನ್ನು ಆಸ್ಪತ್ರೆಗೆ ಸೇರಿಸಬೇಕು. ಅವರ ಚಿಕಿತ್ಸೆ ವೆಚ್ಚವನ್ನು ನಮ್ಮ ಸಮಾಜವೇ ಭರಿಸುತ್ತದೆ ಎಂದು ವ್ಯಂಗ್ಯವಾಡಿದರು.ನಮ್ಮ ಸಮಾಜದ ಆದಿಚುಂಚನಗಿರಿ ಮಠ ಸಾವಿರಾರು ವಿಧ್ಯಾರ್ಥಿಗಳಿಗೆ ಉಚಿತ ವಿಧ್ಯಾಭ್ಯಾಸ ನೀಡುತ್ತಿದೆ. ದೇಶ, ವಿದೇಶಗಳಲ್ಲಿ ಪ್ರಸಿದ್ಧಿಯಾಗಿರುವ ಸಮಾಜದ ಬಗ್ಗೆ ಅವಹೇಳನಕಾರಿಯಾಗಿ ಮಾತಾನಾಡಿರುವುದನ್ನು ಖಂಡಿಸುತ್ತಿದೆ ಎಂದರು. ಒಕ್ಕಲಿಗ ಸಮಾಜದ ಉಪಾಧ್ಯಕ್ಷ ಸಂಪತ್, ಕಾಫಿ ಬೆಳೆಗಾರರ ಸಂಘದ ಅಧ್ಯಕ್ಷ ಸುರೇಶ್ ಇದ್ದರು.

Latest Videos
Follow Us:
Download App:
  • android
  • ios