ಬೆಂಗಳೂರು [ಜ.07]:  ಕೇರಳದ ಕಾಸರಗೋಡು ಜಿಲ್ಲೆಯ ಮೊರ್ಗಾಲ್‌ ಪುತ್ತೂರು ಗ್ರಾಮದ ಹಿಂದೂ ಯುವತಿ ಹಾಗೂ ಕುಟುಂಬವನ್ನು ಇಸ್ಲಾಂ ಧರ್ಮಕ್ಕೆ ಮತಾಂತರ ಹೊಂದುವಂತೆ ಒತ್ತಾಯ ಮಾಡುತ್ತಿದ್ದ ಆರೋಪಿಯನ್ನು ಪರಪ್ಪನ ಅಗ್ರಹಾರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಮುನಿರೆಡ್ಡಿ ಪಾಳ್ಯ ಅನ್ಸರ್‌ (30) ಬಂಧಿತ. ಆರೋಪಿಯನ್ನು ಬಂಧಿಸಿ, ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈಗಾಗಲೇ ಕೇರಳದ ಕಾಸರಗೋಡಿನ ಪೊಲೀಸರಿಂದ ಅತ್ಯಾಚಾರ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಪ್ರಮುಖ ಆರೋಪಿ ಮಸೂಕ್‌ನ ಸ್ನೇಹಿತ ಅನ್ಸರ್‌. ಈತ ಕೂಡಾ ಮತಾಂತರ ಹೊಂದುವಂತೆ ಯುವತಿ ಹಾಗೂ ಆಕೆಯ ಕುಟುಂಬಕ್ಕೆ ಒತ್ತಾಯ ಮಾಡುತ್ತಿದ್ದ. ಈ ಹಿನ್ನೆಲೆಯಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. ಯುವತಿಗೆ ಆರೋಪಿ ಯಾವುದೇ ಲೈಂಗಿಕ ದೌರ್ಜನ್ಯ ಎಸಗಿಲ್ಲ ಎಂಬುದು ಪ್ರಾಥಮಿಕ ತನಿಖೆ ವೇಳೆ ತಿಳಿದು ಬಂದಿದೆ ಎಂದು ಮಾಹಿತಿ ನೀಡಿದರು.

ಬೆಂಗಳೂರು: ಕುಡಿದು ಗಲಾಟೆ ಮಾಡ್ಬೇಡ, ಬುದ್ಧಿ ಹೇಳಿದವರಿಗೆ ಇದೆಂಥಾ ಅವಸ್ಥೆ...

ಯುವತಿಗೆ ಅತ್ಯಾಚಾರ ಎಸಗಿದ ವಿಡಿಯೋ ಚಿತ್ರೀಕರಣ ಮಾಡಿ ಬೆದರಿಕೆವೊಡ್ಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಸರಗೋಡಿನ ಸ್ಥಳೀಯ ಪೊಲೀಸರು ಪ್ರಮುಖ ಆರೋಪಿಯನ್ನು ಬಂಧಿಸಿದ್ದರು. ಕೆಲ ಆರೋಪಿಗಳು ನಗರದಲ್ಲಿ ಇದ್ದ ಹಿನ್ನೆಲೆಯಲ್ಲಿ ಸಂತ್ರಸ್ತೆ ಕುಟುಂಬ ಸಂಸದೆ ಶೋಭಾ ಕರಂದ್ಲಾಜೆ ನೇತೃತ್ವದಲ್ಲಿ ನಗರ ಪೊಲೀಸ್‌ ಆಯುಕ್ತರಿಗೆ ದೂರು ನೀಡಿತ್ತು. ಇದೀಗ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.