Housing Scheme: ವಸತಿ ಯೋಜನೆಯಡಿ ಕೆಲವರಿಗಷ್ಟೇ ಮನೆ; ಬಡವರಿಗೆ ಇಲ್ಲ ವಸತಿ ಭಾಗ್ಯ!

ವಾಜಪೇಯಿ ವಸತಿ ಯೋಜನೆ ಮತ್ತು ಅಂಬೇಡ್ಕರ್‌ ವಸತಿ ಯೋಜನೆಯಡಿ ಶಿರಸಿ ನಗರ ವ್ಯಾಪ್ತಿಯಲ್ಲಿ ಈವರೆಗೆ ಕೇವಲ 217 ಮಂದಿ ಮಾತ್ರ ಸೌಲಭ್ಯ ಪಡೆದುಕೊಂಡಿದ್ದಾರೆ. ಯೋಜನೆಗೆ ಮಂಜೂರಾತಿ ಪಡೆಯಲು ಅರ್ಜಿ ಸಲ್ಲಿಸಿದ ಸಾವಿರಾರು ಜನರು ಮನೆ ಮಂಜೂರಾಗುವ ನಿರೀಕ್ಷೆಯಲ್ಲಿ ವರ್ಷಗಳಿಂದ ಕಾಯುತ್ತಿದ್ದಾರೆ. ಬಡವರಿಗೆ ಸೂರು ಕಲ್ಪಿಸಿಕೊಡಲು ಕೇಂದ್ರ ಮತ್ತು ರಾಜ್ಯ ಸರ್ಕಾರ ಜಂಟಿಯಾಗಿ ಅನುದಾನ ನೀಡುತ್ತಿದ್ದರೂ ನಗರ ವ್ಯಾಪ್ತಿಯ ನೂರಾರು ವಸತಿ ರಹಿತರ ಸ್ವಂತ ಸೂರಿನ ಕನಸು ನಿವೇಶನ ಕೊರತೆಯ ಕಾರಣಕ್ಕೆ ನನಸಾಗಿಲ್ಲ.

Only few peoples houses under the housing scheme; No housing for the poor shirasi uttarakannada rav

ಶಿರಸಿ (ಸೆ.4) : ವಾಜಪೇಯಿ ವಸತಿ ಯೋಜನೆ ಮತ್ತು ಅಂಬೇಡ್ಕರ್‌ ವಸತಿ ಯೋಜನೆಯಡಿ ಶಿರಸಿ ನಗರ ವ್ಯಾಪ್ತಿಯಲ್ಲಿ ಈವರೆಗೆ ಕೇವಲ 217 ಮಂದಿ ಮಾತ್ರ ಸೌಲಭ್ಯ ಪಡೆದುಕೊಂಡಿದ್ದಾರೆ. ಯೋಜನೆಗೆ ಮಂಜೂರಾತಿ ಪಡೆಯಲು ಅರ್ಜಿ ಸಲ್ಲಿಸಿದ ಸಾವಿರಾರು ಜನರು ಮನೆ ಮಂಜೂರಾಗುವ ನಿರೀಕ್ಷೆಯಲ್ಲಿ ವರ್ಷಗಳಿಂದ ಕಾಯುತ್ತಿದ್ದಾರೆ. ಬಡವರಿಗೆ ಸೂರು ಕಲ್ಪಿಸಿಕೊಡಲು ಕೇಂದ್ರ ಮತ್ತು ರಾಜ್ಯ ಸರ್ಕಾರ ಜಂಟಿಯಾಗಿ ಅನುದಾನ ನೀಡುತ್ತಿದ್ದರೂ ನಗರ ವ್ಯಾಪ್ತಿಯ ನೂರಾರು ವಸತಿ ರಹಿತರ ಸ್ವಂತ ಸೂರಿನ ಕನಸು ನಿವೇಶನ ಕೊರತೆಯ ಕಾರಣಕ್ಕೆ ನನಸಾಗಿಲ್ಲ.

ಮಾರ್ಚ್‌ನೊಳಗೆ 16 ಲಕ್ಷ ಮನೆ ಹಸ್ತಾಂತರ: ಸಚಿವ ಸೋಮಣ್ಣ

ನಗರ ವ್ಯಾಪ್ತಿಯ ಬಡವರಿಗೆ ಮನೆ ನಿರ್ಮಿಸಲು 2015-16ರಲ್ಲಿ ವಾಜಪೇಯಿ ವಸತಿ(Vajapeyi housing Scheme) ಮತ್ತು ಅಂಬೇಡ್ಕರ್‌ ವಸತಿ ಯೋಜನೆ(ambedkar housing scheme)ಯನ್ನು ಜಾರಿಗೆ ತರಲಾಗಿತ್ತು. ಪರಿಶಿಷ್ಟವರ್ಗದವರಿಗೆ ಅಂಬೇಡ್ಕರ್‌ ವಸತಿ ಯೋಜನೆ ಅಡಿ ಮತ್ತು ಉಳಿದ ವರ್ಗದ ಜನರಿಗೆ ವಾಜಪೇಯಿ ವಸತಿ ಯೋಜನೆ ಅಡಿ ಮನೆ ನಿರ್ಮಾಣಕ್ಕೆ ಧನ ಸಹಾಯ ಒದಗಿಸುವುದು ಯೋಜನೆಯ ಉದ್ದೇಶವಾಗಿತ್ತು. ನಗರ ವಸತಿ ಯೋಜನೆಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಜಂಟಿಯಾಗಿ ಪಾಲು ನೀಡುತ್ತಿದ್ದು, ವಾಜಪೇಯಿ ವಸತಿ ಮತ್ತು ಅಂಬೇಡ್ಕರ್‌ ವಸತಿ ಯೋಜನೆ ಅಡಿ ತಲಾ . 1.50 ಲಕ್ಷವನ್ನು ಕೇಂದ್ರ ಸರ್ಕಾರ ನೀಡುತ್ತಿದೆ. ರಾಜ್ಯ ಸರ್ಕಾರ ವಾಜಪೇಯಿ ವಸತಿ ಯೋಜನೆಗೆ . 1.20 ಲಕ್ಷ ಮತ್ತು ಅಂಬೇಡ್ಕರ್‌ ವಸತಿ ಯೋಜನೆ ಫಲಾನುಭವಿಗೆ . 2 ಲಕ್ಷ ಆರ್ಥಿಕ ಸಹಾಯ ಒದಗಿಸುತ್ತಿದೆ.

ಸರ್ಕಾರದ ಸೂಚನೆ ಮೇರೆಗೆ ನಗರದ ವಸತಿ ರಹಿತರ ಸಮೀಕ್ಷೆ ನಡೆಸಿದ ವೇಳೆ 1,290 ಕುಟುಂಬಗಳು ಸ್ವಂತ ಮನೆ, ನಿವೇಶನ ಹೊಂದಿಲ್ಲದಿರುವುದು ಪತ್ತೆಯಾಗಿದೆ. ವಸತಿ ಯೋಜನೆ ಸೌಲಭ್ಯ ಕಲ್ಪಿಸುವ ಸಂಬಂಧ ವಸತಿ ಸಂಕೀರ್ಣ ನಿರ್ಮಿಸಿ ಸೂರು ಒದಗಿಸಲು ಜಾಗ ಹುಡುಕಾಟ ನಡೆಸಲಾಗುತ್ತಿದೆ ಎನ್ನುತ್ತಾರೆ ಅಧಿಕಾರಿಗಳು.

ನಗರ ವಸತಿ ಯೋಜನೆ ಅಡಿ ಶಿರಸಿ ನಗರದಲ್ಲಿ ಮನೆಗಳ ಮಂಜೂರಾತಿಗೆ ಸರ್ಕಾರದ ಕಠಿಣ ನಿಯಮಾವಳಿ ಅಡ್ಡಿಯಾಗುತ್ತಿದೆ ಎಂಬ ಆಕ್ಷೇಪಗಳಿವೆ. ಸಂಪೂರ್ಣ ವಸತಿ ರಹಿತರಿಗೆ ‘ಜಿ ಪ್ಲಸ್‌’ ಮಾದರಿಯಲ್ಲಿ ವಸತಿ ಸಂಕೀರ್ಣ ನಿರ್ಮಿಸಿ ಮನೆ ನಿರ್ಮಿಸಿ ಕೊಡಲು ಜಾಗದ ಲಭ್ಯತೆ ಇಲ್ಲ ಎಂಬುದು ಅಧಿಕಾರಿಗಳ ಅಭಿಪ್ರಾಯ. ಈ ಹಿಂದೆಯೂ ನಗರದ ಹೊರವಲಯದಲ್ಲಿ ಗುರುತಿಸಲಾಗಿದ್ದ ನಿವೇಶನಕ್ಕೆ ವಿರೋಧ ವ್ಯಕ್ತವಾಗಿತ್ತು.

PMAY: ಕರ್ನಾಟಕದಲ್ಲಿ ವಸತಿ ಯೋಜನೆ ಶರವೇಗದಲ್ಲಿ ಜಾರಿ: ಸೋಮಣ್ಣ

ವಸತಿ ಯೋಜನೆ ನಿಯಮಾವಳಿ ಪ್ರಕಾರ ಮನೆ ಮಂಜೂರಾತಿಗೆ ಅರ್ಜಿದಾರ ಸ್ವಂತ ಭೂಮಿ ಹೊಂದಿರಬೇಕು ಎಂಬ ನಿಯಮಾವಳಿ ಇದೆ. ನಗರಸಭೆ ನಡೆಸಿದ ಸಮೀಕ್ಷೆ ವೇಳೆ ಸಾವಿರಕ್ಕೂ ಹೆಚ್ಚು ಜನರು ನಿವೇಶನ ಹೊಂದಿಲ್ಲ. ಇದರಿಂದಾಗಿ ಮನೆ ಮಂಜೂರು ಮಾಡಲು ಅಡ್ಡಿಯಾಗಿದೆ.

ಕೇಶವ ಚೌಗುಲೆ, ಪೌರಾಯುಕ್ತ

Latest Videos
Follow Us:
Download App:
  • android
  • ios