Asianet Suvarna News Asianet Suvarna News

ಹಸಿರು ಪಟಾಕಿ ಬಿಟ್ಟು ಮಿಕ್ಕೆಲ್ಲ ಪಟಾಕಿಗೆ ನಿರ್ಬಂಧ, ನಿಯಮ ಮೀರಿದ್ರೆ!

* ಹಸಿರು ಪಟಾಕಿ ಬಿಟ್ಟು ಮಿಕ್ಕೆಲ್ಲ ಪಟಾಕಿಗೆ ನಿರ್ಬಂಧ

* ಪಟಾಕಿ ಮಳಿಗೆ ನ.1ರಿಂದ 10ರವರೆಗೆ ತೆರೆಯಲು ಅನುಮತಿ

* ದೀಪಾವಳಿ ಆಚರಣೆಗೆ ಸರ್ಕಾರದ ಮಾರ್ಗಸೂಚಿ

* ಮೈದಾನ, ಬಯಲಲ್ಲಿ ಮಾತ್ರ ಪಟಾಕಿ ಮಾರಬೇಕು

Only green crackers allowed for sale, Covid protocol mandatory in Karnataka mah
Author
Bengaluru, First Published Oct 31, 2021, 4:34 AM IST
  • Facebook
  • Twitter
  • Whatsapp

ಬೆಂಗಳೂರು(ಅ. 31)  ದೀಪಾವಳಿ (Deepavali) ಹಬ್ಬದ ಆಚರಣೆ ವೇಳೆ ಕೋವಿಡ್‌ (Coronavirus) ಸೋಂಕು ಹರಡುವಿಕೆ ತಡೆಗಟ್ಟುವ ಸಂಬಂಧ ರಾಜ್ಯ (Karnataka Govt) ಸರ್ಕಾರವು ಮಾರ್ಗಸೂಚಿ ಹೊರಡಿಸಿದ್ದು, ಸುಪ್ರೀಂಕೋರ್ಟ್‌ (Supreme Court)  ನಿರ್ದೇಶನದಂತೆ ಅನುಮತಿಸಿರುವ ಹಸಿರು ಪಟಾಕಿಗಳನ್ನು ಬಿಟ್ಟು ಉಳಿದ ಯಾವುದೇ ಇತರೆ ಪಟಾಕಿಗಳನ್ನು ಮಾರಾಟ ಮಾಡುವಂತಿಲ್ಲ ಮತ್ತು ಹಚ್ಚುವಂತಿಲ್ಲ ಎಂದು ಕಟ್ಟಪ್ಪಣೆ ಮಾಡಿದೆ.

ಈ ಸಂಬಂಧ ಶನಿವಾರ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್‌ ಆದೇಶ ಹೊರಡಿಸಿದ್ದಾರೆ. ಸಂಬಂಧಪಟ್ಟಇಲಾಖೆ/ಪ್ರಾಧಿಕಾರಗಳಿಂದ ಅಧಿಕೃತ ಪರವಾನಗಿಯನ್ನು ಪಡೆದ ಮಾರಾಟಗಾರರು ಹಸಿರುಪಟಾಕಿಯನ್ನು ಮಾತ್ರ ಮಾರಾಟ ಮಾಡಬೇಕು. ಹಸಿರು ಪಟಾಕಿ ಮಾರಾಟದ ಮಳಿಗೆಗಳನ್ನು ನ.1ರಿಂದ ನ.10ರವರೆಗೆ ಮಾತ್ರ ತೆಗೆಯಬೇಕು. ಪರವಾನಿಗೆದಾರರು ಸಂಬಂಧಪಟ್ಟಇಲಾಖೆ/ಪ್ರಾಧಿಕಾರದಿಂದ ನೀಡಿರುವ ಪರವಾನಗಿಯಲ್ಲಿ ನಿಗದಿಪಡಿಸಿರುವ ದಿನಾಂಕ ಮತ್ತು ಸ್ಥಳಗಳಲ್ಲಿ ಮಾತ್ರ ತಾತ್ಕಾಲಿಕ ಹಸಿರುಪಟಾಕಿ ಅಂಗಡಿಗಳನ್ನು ಇಡಬೇಕು. ಬೇರೆ ಸ್ಥಳದಲ್ಲಿ ಮತ್ತು ದಿನಾಂಕದಲ್ಲಿ ಅಂಗಡಿಯನ್ನು ತೆಗೆಯಬಾರದು ಎಂದು ಆದೇಶದಲ್ಲಿ ಉಲ್ಲೇಖಿಸಿದ್ದಾರೆ.

ಪಟಾಕಿ ನಿಷೇಧ ಯಾವುದೇ ಸಮದುದಾಯದ ವಿರುದ್ಧ ಅಲ್ಲ

ಸಾರ್ವತ್ರಿಕ ವಸತಿ ಸ್ಥಳಗಳಿಂದ ದೂರವಿರುವ ಮೈದಾನ ಅಥವಾ ಬಯಲು ಪ್ರದೇಶದಲ್ಲಿ ಪಟಾಕಿ ಮಳಿಗೆಗಳನ್ನು ಸ್ಥಾಪಿಸಲು ಸಂಬಂಧಿಸಿದ ಇಲಾಖೆ/ಪ್ರಾಧಿಕಾರಗಳು ಅನುಮತಿ ನೀಡಬೇಕು. ಮಳಿಗೆಗಳಲ್ಲಿ ಎರಡು ಕಡೆಯಿಂದ ಸರಾಗವಾಗಿ ಗಾಳಿಯಾಡುವಂತಿರಬೇಕು. ಒಂದು ಮಾರಾಟ ಮಳಿಗೆಯಿಂದ ಮತ್ತೊಂದು ಮಾರಾಟ ಮಳಿಗೆಗೆ ಆರು ಮೀಟರ್‌ ಅಂತರವಿರಬೇಕು. ಪ್ರತಿಯೊಂದು ಮಳಿಗೆಗಳಲ್ಲಿ ಸಂಬಂಧಪಟ್ಟಇಲಾಖೆ/ಪ್ರಾಧಿಕಾರದಿಂದ ನೀಡಿರುವ ಪರವಾನಗಿ ಪ್ರತಿಯನ್ನು ಸಾರ್ವಜನಿಕರಿಗೆ ಕಾಣುವಂತೆ ಪ್ರದರ್ಶಿಸಬೇಕು. ಪರವಾನಗಿ ಪತ್ರವನ್ನು ಪಡೆದಂತಹವರು ಕಡ್ಡಾಯವಾಗಿ ಮಳಿಗೆಗಳಲ್ಲಿ ಹಾಜರಿರಬೇಕು ಎಂದು ಸೂಚಿಸಿದ್ದಾರೆ.

ಹಸಿರು ಪಟಾಕಿಗಳನ್ನು ಮಾರಾಟ ಮಾಡುವ ಮಳಿಗೆಗಳ ಸುತ್ತಮುತ್ತ ದಿನನಿತ್ಯ ಸ್ಯಾನಿಟೈಸೇಷನ್‌ ಮಾಡುವುದು ಮತ್ತು ಪಟಾಕಿಗಳ ಖರೀದಿಗೆ ಬರುವ ಸಾರ್ವಜನಿಕರಿಗೆ ಸ್ಯಾನಿಟೈಸರ್‌ ಮತ್ತು ಥರ್ಮಲ್‌ ಸ್ಕ್ರೀನಿಂಗ್‌ ವ್ಯವಸ್ಥೆಯನ್ನು ಕಲ್ಪಿಸುವುದರ ಜತೆಗೆ ಕನಿಷ್ಠ ಆರು ಅಡಿ ಸಾಮಾಜಿಕ ಅಂತರವನ್ನು ಗುರುತಿಸುವುದು ಮತ್ತು ಅದನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಪಟಾಕಿ ಮಾರುವ ವ್ಯಾಪಾರಸ್ಥರು ಮತ್ತು ಖರೀದಿಗೆ ಬರುವ ಸಾರ್ವಜನಿಕರು ಕಡ್ಡಾಯವಾಗಿ ಮುಖಗವಸು ಧರಿಸಿರಬೇಕು. ಹಸಿರು ಪಟಾಕಿ ಖರೀದಿಯ ಸಂದರ್ಭದಲ್ಲಿ ಯಾವುದೇ ರೀತಿಯ ಜನದಟ್ಟಣೆಯಾಗದಂತೆ ಕಟ್ಟುನಿಟ್ಟಾಗಿ ನೋಡಿಕೊಳ್ಳಬೇಕು ಎಂದು ತಿಳಿಸಿದ್ದಾರೆ.

ಕೋವಿಡ್‌ ಸೋಂಕು ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಷ್ಟ್ರೀಯ ನಿರ್ದೇಶನಗಳನ್ನು ರಾಜ್ಯ ಸರ್ಕಾರವು ಹೊರಡಿಸಿದ ಮಾರ್ಗಸೂಚಿಗಳನ್ನು ತಪ್ಪದೇ ಕಟ್ಟುನಿಟ್ಟಾಗಿ ಪಾಲಿಸಬೇಕು. ಅಲ್ಲದೇ, ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಆರೋಗ್ಯ ಇಲಾಖೆ, ಪೊಲೀಸ್‌ ಇಲಾಖೆ, ಮಹಾನಗರ ಪಾಲಿಕೆ, ಮಾಲಿನ್ಯ ನಿಯಂತ್ರಣ ಮಂಡಳಿ, ಅಗ್ನಿಶಾಮಕ ಇಲಾಖೆ, ಜಿಲ್ಲಾಡಳಿತ ಮತ್ತು ಇತರೆ ಇಲಾಖೆ/ಕಾರ್ಪೋರೇಷನ್‌/ಪ್ರಾಧಿಕಾರಿಗಳಿಂದ ಹೊರಡಿಸಲಾದ ಸೂಚನೆ ಮತ್ತು ಮಾರ್ಗಸೂಚಿಗಳನ್ನು ಸಹ ಕಡ್ಡಾಯವಾಗಿ ಪಾಲಿಸಬೇಕು ಎಂದು ನಿರ್ದೇಶನ ನೀಡಿದ್ದಾರೆ.

 

 

Follow Us:
Download App:
  • android
  • ios