ಗಾಂಧಿ ಜಯಂತಿ ಸಾಲು ರಜೆ ಹಿನ್ನೆಲೆಯಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು 120 ಹೆಚ್ಚುವರಿ ವಿಶೇಷ ಬಸ್‌ಗಳನ್ನು ಕಾರ್ಯಾಚರಣೆ ಮಾಡುತ್ತಿದೆ. 2026ರಲ್ಲಿ ಬೆಂಗಳೂರಿನಲ್ಲಿ ನಡೆಯಲಿರುವ 'ಉದ್ಯಮಿ ಭಾರತ ಸಮಾವೇಶ'ದಲ್ಲಿ ಸ್ಟಾಲ್ ನಿರ್ಮಿಸಲು ಆಸಕ್ತ ಉದ್ದಿಮೆದಾರರಿಗೆ ಅವಕಾಶ ಕಲ್ಪಿಸಲಾಗಿದೆ.

ಗದಗ: ಗಾಂಧಿ ಜಯಂತಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳುವುದರಿಂದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವ್ಯಾಪ್ತಿಯ ಹುಬ್ಬಳ್ಳಿ, ಧಾರವಾಡ, ಗದಗ, ಬೆಳಗಾವಿ, ಉತ್ತರ ಕನ್ನಡ, ಹಾವೇರಿ, ಚಿಕ್ಕೋಡಿ ಮತ್ತು ಬಾಗಲಕೋಟೆ ವಿಭಾಗಗಳಿಂದ ಸುಮಾರು 120 ಹೆಚ್ಚುವರಿ ವಿಶೇಷ ಸಾರಿಗೆಗಳನ್ನು ಕಾರ್ಯಾಚರಣೆ ಮಾಡಲಾಗುತ್ತಿದೆ.

ಅ. 1ರಂದು ಗುರುವಾರ, ಅ. 2ರಂದು ಶುಕ್ರವಾರ ಗಾಂಧಿ ಜಯಂತಿ ಇರುವುದರಿಂದ ಹಾಗೂ ಅ. 3 ರಂದು ಶನಿವಾರ, ಅ.4ರಂದು ಭಾನುವಾರ ಇರುವುದರಿಂದ ಬೆಂಗಳೂರು ಮತ್ತು ಇತರೆ ಪ್ರಮುಖ ಸ್ಥಳಗಳಿಂದ ಹೆಚ್ಚಿನ ಪ್ರಯಾಣಿಕರು ತಮ್ಮ ಊರುಗಳಿಗೆ ತೆರಳಲು ಹೆಚ್ಚುವರಿ ಸಾರಿಗೆಗಳನ್ನು ಕಾರ್ಯಾಚರಣೆ ಮಾಡಲಾಗುವುದು. ಬೆಂಗಳೂರಿನಿಂದ ರಾಜ್ಯ ಅಂತರಾಜ್ಯ ವಿವಿಧ ಸ್ಥಳಗಳಿಗೆ ತೆರಳಲು ಅ. 1 ಹಾಗೂ 2ರ ವರೆಗೆ ಹೆಚ್ಚುವರಿ ವಿಶೇಷ ಸಾರಿಗೆ ಸೌಲಭ್ಯವನ್ನು ಕಲ್ಪಿಸಲಾಗಿದೆ.

ವಿಶೇಷ ಹೆಚ್ಚುವರಿ ಸಾರಿಗೆಗಳ ಸದುಪಯೋಗ

ಹೆಚ್ಚುವರಿ ಸಾರಿಗೆಗಳ ಸದುಪಯೋಗ ಪಡಿಸಿಕೊಳ್ಳುವುದರೊಂದಿಗೆ, ಸುಖಕರ ಹಾಗೂ ಸುರಕ್ಷಿತ ಪ್ರಯಾಣಕ್ಕಾಗಿ ಸಂಸ್ಥೆಯ ಬಸ್ಸುಗಳಲ್ಲಿ ಪ್ರಯಾಣಿಸುವಂತೆ ಮತ್ತು ವಿಶೇಷ ಹೆಚ್ಚುವರಿ ಸಾರಿಗೆಗಳ ಸದುಪಯೋಗ ಪಡೆದುಕೊಳ್ಳುವಂತೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಪ್ರಕಟಣೆಯಲ್ಲಿ ತಿಳಿಸಿದೆ.

ಉದ್ಯಮಿ ಭಾರತ ಸಮಾವೇಶ, ಪ್ರದರ್ಶನ 2026

2026ರ ಡಿಸೆಂಬರ್‌ 4ರಿಂದ 6ರವರೆಗೆ ಉದ್ಯಮಿ ಭಾರತ ಸಮಾವೇಶ ಮತ್ತು ಪ್ರದರ್ಶನ 2026 ಅನ್ನು ಬೆಂಗಳೂರು ಇಂಟರ್‌ನ್ಯಾಷನಲ್ ಎಕ್ಸೂಬಿಸೆನ್ ಸೆಂಟರ್‌ನಲ್ಲಿ ICOS Global Technoloties Pvt. Ltd ಸಂಸ್ಥೆ ಆಯೋಜಿಸುತ್ತಿದ್ದು, ಕಾರ್ಯಕ್ರಮದಲ್ಲಿ ಸ್ಟಾಲ್ ನಿರ್ಮಿಸುವ ಕುರಿತು ವಿವಿಧ ಬೆಲೆಗಳಲ್ಲಿ ಪ್ಯಾಕೇಜಗಳಿದ್ದು, ಆಸಕ್ತ ಉದ್ದಿಮೆದಾರರು ಪ್ರಸನ್ನ.ವಿ.ಎನ್ ಮೊ.:7899253363, ಮಂಜುನಾಥ ಎ.ಸಿ. ಮೊ.: 9743784166 ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.