ಬಿಜೆಪಿ ಟೀಕಿಸುವುದೇ ವಿಪಕ್ಷದ ಕೆಲಸ: ವಿಜಯೇಂದ್ರ

ಬಿಜೆಪಿಯ ಜನಪ್ರಿಯತೆಯನ್ನು ಸಹಿಸದ ವಿರೋಧ ಪಕ್ಷಗಳು ಬಿಜೆಪಿಯನ್ನು ಟೀಕಿಸುವುದನ್ನೇ ಕೆಲಸ ಮಾಡಿಕೊಂಡಿವೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವæೖ.ವಿಜಯೇಂದ್ರ ಹೇಳಿದರು.

Opposition s job is to criticize BJP Vijayendra snr

  ಗುಬ್ಬಿ :  ಬಿಜೆಪಿಯ ಜನಪ್ರಿಯತೆಯನ್ನು ಸಹಿಸದ ವಿರೋಧ ಪಕ್ಷಗಳು ಬಿಜೆಪಿಯನ್ನು ಟೀಕಿಸುವುದನ್ನೇ ಕೆಲಸ ಮಾಡಿಕೊಂಡಿವೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವæೖ.ವಿಜಯೇಂದ್ರ ಹೇಳಿದರು.

ಮಂಗಳವಾರದಂದು ಪಟ್ಟಣದಲ್ಲಿ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಹಿಂದುಳಿದ ವರ್ಗಗಳ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು ದೇಶದಲ್ಲಿ ಭ್ರಷ್ಟಾಚಾರದ ಪಾಪದ ಕೂಸು ಹುಟ್ಟಲು ಕಾಂಗ್ರೆಸ್‌ ಪಕ್ಷವೇ ಕಾರಣವಾಗಿದೆ. ಇದರಿಂದ ಬೇಸತ್ತಿರುವ ಜನರು ಕಾಂಗ್ರೆಸ್ಸನ್ನು ಬುಡ ಸಮೇತ ಕಿತ್ತು ಹಾಕಲು ಮುಂದಾಗಿದ್ದಾರೆ ಎಂದ ಅವರು ಕರ್ನಾಟಕದಲ್ಲಿಯೂ ಅದೇ ಪರಿಸ್ಥಿತಿ ಬರುವುದು ಎಂದರು.

ಈಗಾಗಲೇ ಪಕ್ಷದ ಪ್ರಚಾರ ಕಾರ್ಯ ನಮ್ಮ ಕಾರ್ಯಕರ್ತರು ಮಾಡಿದ್ದಾರೆ. ಜಿಲ್ಲೆಯಲ್ಲಿ ಬಿಜೆಪಿ ಬಹುತೇಕ ಸ್ಥಾನ ಗಳಿಸಲಿದೆ. ಚುನಾವಣೆಯ ಫಲಿತಾಂಶ ದಿನ ಜಿಲ್ಲೆಯಲ್ಲಿ ಮೊದಲ ಬಿಜೆಪಿ ಗೆಲುವು ಘೋಷಣೆ ಗುಬ್ಬಿ ಕ್ಷೇತ್ರದಿಂದಲೇ ಎಂದು ನೆರೆದಿದ್ದ ಕಾರ್ಯಕರ್ತರನ್ನು ಹುರಿದುಂಬಿಸಿದ ಅವರು ಮತದಾರರು ಬಿಜೆಪಿಗೆ ಮತ ನೀಡಲು ಗುಬ್ಬಿಯಲ್ಲಿ ಮುಂದಾಗಿದ್ದಾರೆ. ಆದರೆ ಮುಖಂಡರಲ್ಲಿ ಒಗ್ಗಟ್ಟು ಪ್ರದರ್ಶನ ಅಗತ್ಯವಿದೆ. ಅದು ಸಹ ಮುಂದಿನ ದಿನದಲ್ಲಿ ಕಾಣಲಿದೆ. ತಮ್ಮ ಜೇಬಿನಿಂದ ಹಣ ವ್ಯಯ ಮಾಡಿರುವ ಪ್ರಾಮಾಣಿಕ ಕಾರ್ಯಕರ್ತರ ಶ್ರಮಕ್ಕೆ ತಕ್ಕ ಫಲ ಖಂಡಿತಾ ಸಿಗಲಿದೆ. ವಿಧಾನಸಭೆಯ ನಂತರದ ಲೋಕಸಭಾ ಚುನಾವಣೆಯಲ್ಲೂ ಸಹ ಮತ್ತೊಮ್ಮೆ ಬಿಜೆಪಿ ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸಂಸದ ಜಿ.ಎಸ್‌.ಬಸವರಾಜು ಮಾತನಾಡಿ, ಸಂಸದೀಯ ವರ್ತನೆ ಗೊತ್ತಿಲ್ಲದ ರಾಹುಲ್‌ ಗಾಂಧಿ ಅಂತಹವರನ್ನು ಕಾಂಗ್ರೆಸ್‌ ಪಕ್ಷ ಬೆಳೆಸುತ್ತಿರುವುದು ವಿಪರ್ಯಾಸ ಎಂದರು.

ಬಿಜೆಪಿ ಹಿಂದುಳಿದ ವರ್ಗಗಳ ರಾಜ್ಯ ಘಟಕದ ಅಧ್ಯಕ್ಷ ನೆ.ಲ.ನರೇಂದ್ರಬಾಬು ಮಾತನಾಡಿ, ಎಲ್ಲರ ಏಳಿಗೆಯಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎನ್ನುವುದನ್ನು ಮನಗಂಡಿರುವ ಬಿಜೆಪಿಯು ಎಲ್ಲಾ ಹಿಂದುಳಿದ ವರ್ಗಗಳ ನಿಗಮಕ್ಕೆ ಸಾಂವಿಧಾನಿಕ ಮಹತ್ವವನ್ನು ನೀಡಿದೆ. ಜೊತೆಗೆ ಒಬಿಸಿ ಸಮುದಾಯದ ಮಕ್ಕಳಿಗೆ ಶಿಕ್ಷಣಕ್ಕೆ ಆದ್ಯತೆ ನೀಡುವ ನಿಟ್ಟಿನಲ್ಲಿ ಅನೇಕ ಸವಲತ್ತುಗಳನ್ನು ಒದಗಿಸಿದೆ. ಮೋದಿಯವರ ನೇತೃತ್ವದಲ್ಲಿ ದೇಶದ ಆರ್ಥಿಕ ಪರಿಸ್ಥಿತಿ ಸುಧಾರಿಸುತ್ತಿದ್ದು ಅಭಿವೃದ್ಧಿಯತ್ತ ಸಾಗುತ್ತಿದೆ ಎಂದು ತಿಳಿಸಿದರು.

ಕಾರ್ಯಕ್ರಮಕ್ಕೆ ಮುಂಚೆ ಚೆನ್ನಬಸವೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ನೂರಾರು ಬೈಕ್‌ ಹಾಗೂ ತೆರೆದ ವಾಹನದಲ್ಲಿ ಮೆರವಣಿಗೆಯೊಂದಿಗೆ ವೇದಿಕೆ ತಲುಪಲಾಯಿತು.

ಕಾರ್ಯಕ್ರಮದಲ್ಲಿ ತುಮಕೂರು ನಗರ ಶಾಸಕ ಜ್ಯೋತಿ ಗಣೇಶ್‌, ರಾಜ್ಯ ಘಟಕದ ಕಾರ್ಯದರ್ಶಿ ವಿನಯ್‌ ಬಿದರೆ, ಜಿಲ್ಲಾ ಘಟಕದ ಅಧ್ಯಕ್ಷ ರವಿಶಂಕರ್‌, ಜಿಲ್ಲಾ ಘಟಕದ ಕಾರ್ಯದರ್ಶಿ ಭೈರಪ್ಪ,

ತಾಲೂಕು ಘಟಕದ ಅಧ್ಯಕ್ಷ ಪಂಚಾಕ್ಷರಿ, ಒಬಿಸಿ ಜಿಲ್ಲಾ ಘಟಕದ ಅಧ್ಯಕ್ಷ ಶಂಕರಪ್ಪ, ಕಾಡುಗೊಲ್ಲ ಅಭಿವೃದ್ಧಿ ನಿಗಮದ ಅಧ್ಯಕ್ಷ ಮಾರಣ್ಣ, ಮುಖಂಡರಾದ ಸೊಗಡು ಶಿವಣ್ಣ, ಎಂ.ಬಿ.ನಂದೀಶ್‌, ಎಂ.ಡಿ. ಲಕ್ಷ್ಮೀನಾರಾಯಣ್‌, ಸುರೇಶ್‌ ಬಾಬು, ಬೆಟ್ಟಸ್ವಾಮಿ, ಎಸ್‌.ಡಿ.ದಿಲೀಪ್‌ಕುಮಾರ್‌, ಚಂದ್ರಶೇಖರ ಬಾಬು, ಪಟ್ಟಣ ಪಂಚಾಯಿತಿ ಅಧ್ಯಕ್ಷ ಅಣ್ಣಪ್ಪ ಸ್ವಾಮಿ ಹಾಗೂ ಅಪಾರ ಕಾರ್ಯಕರ್ತರು ಹಾಜರಿದ್ದರು.

ಸ್ಪಷ್ಟಬಹುಮತದೊಂದಿಗೆ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲದ ಜೆಡಿಎಸ್‌ ಪಕ್ಷವು ಅತಂತ್ರ ವಿಧಾನಸಭೆ ಬಂದರೆ ಲಾಭ ಪಡೆಯಲು ಯೋಚಿಸುತ್ತಿದೆ. ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿಯನ್ನು ಮತ್ತೊಮ್ಮೆ ಅಧಿಕಾರಕ್ಕೆ ತರುವ ಅಗತ್ಯವಿದ್ದು ಕಾರ್ಯಕರ್ತರು ಒಗ್ಗಟ್ಟಿನಿಂದ ಶ್ರಮಿಸಬೇಕು.

ಬಿ.ವæೖ.ವಿಜಯೇಂದ್ರ ಬಿಜೆಪಿ ರಾಜ್ಯ ಉಪಾಧ್ಯಕ್ಷ

ಭಾರತ ಇಬ್ಬಾಗವಾಗಲು ಕಾರಣವಾಗಿರುವ ಕಾಂಗ್ರೆಸ್‌ ಪಕ್ಷವು ಭಾರತ್‌ ಜೋಡೋ ಯಾತ್ರೆ ನಡೆಸಲು ಯಾವುದೇ ನೈತಿಕತೆ ಇಲ್ಲ. ರಾಜ್ಯದಲ್ಲಿ ಬಿಜೆಪಿ ಪರ ಜನರು ಒಲವು ತೋರುತ್ತಿದ್ದಾರೆ. ವಿಜಯ ಸಂಕಲ್ಪ ಯಾತ್ರೆಯ ಮೂಲಕ ಜನರು ಬಿಜೆಪಿಗೆ ಬೆಂಬಲಿಸುತ್ತಿರುವುದು ಮುಂದಿನ ವಿಜಯದ ಸಂಕೇತವಾಗಿದೆ.

ಪಿ.ಸಿ.ಮೋಹನ್‌ ಬೆಂಗಳೂರು ಕೇಂದ್ರ ಸಂಸದ 

Latest Videos
Follow Us:
Download App:
  • android
  • ios