Asianet Suvarna News Asianet Suvarna News

ಕಲಬುರಗಿಯಲ್ಲಿ ಅತಿದೊಡ್ಡ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ ಆಯೋಜನೆ: ಯಶವಂತ ವಿ. ಗುರುಕರ್

ಅಮೃತ ಮಹೋತ್ಸವದ ಅಂಗವಾಗಿ ಕಲಬುರಗಿ ನಗರದ ಎನ್.ವಿ.ಮೈದಾನದಲ್ಲಿ ಸೆ.15 ರಿಂದ 17ರ ವರೆಗೆ ಕಲ್ಯಾಣ ಕರ್ನಾಟಕದ ಅತಿದೊಡ್ಡ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ ಆಯೋಜಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್ ತಿಳಿಸಿದ್ದಾರೆ.

Organizing the biggest product exhibition and sales fair in Kalaburagi gvd
Author
First Published Sep 3, 2022, 9:51 PM IST

ಕಲಬುರಗಿ (ಸೆ.03): ಇದೇ ಸೆಪ್ಟೆಂಬರ್ 17ರಂದು ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವವನ್ನು ಕಲಬುರಗಿ ಸೇರಿ ಪ್ರದೇಶದಾದ್ಯಂತ ವಿಜೃಂಭಣೆಯಿಂದ ಆಚರಿಸಲಾಗುತ್ತಿದ್ದು, ಅಮೃತ ಮಹೋತ್ಸವದ ಅಂಗವಾಗಿ ಕಲಬುರಗಿ ನಗರದ ಎನ್.ವಿ.ಮೈದಾನದಲ್ಲಿ ಸೆ.15 ರಿಂದ 17ರ ವರೆಗೆ ಕಲ್ಯಾಣ ಕರ್ನಾಟಕದ ಅತಿದೊಡ್ಡ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ ಆಯೋಜಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್ ತಿಳಿಸಿದ್ದಾರೆ.

ಈ ಮಾರಾಟ ಮೇಳದಲ್ಲಿ ಪ್ರದೇಶದ ಪ್ರತಿ ಜಿಲ್ಲೆಗಳಿಗೆ ಆದ್ಯತೆ ನೀಡಲಾಗುತ್ತಿದ್ದು, ಸುಮಾರು 300 ರಿಂದ 500 ಮಳಿಗೆ ಸ್ಥಾಪಿಸಲಾಗುತ್ತಿದೆ. ಮಾರಾಟ ಮಳಿಗೆಯನ್ನು ಉಚಿತವಾಗಿ ನೀಡಲಾಗುವುದು. ಸ್ಥಳೀಯರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಆಯಾ ಜಿಲ್ಲೆಗಳ ಭೌಗೋಳಿಕ ಮತ್ತು ಸ್ಥಳೀಯವಾಗಿ ಮಹತ್ವ ಪಡೆದಿರುವ ವಸ್ತುಗಳನ್ನು ಇಲ್ಲಿ ಮಾರಾಟ ಮಾಡಲು ಅಪೂರ್ವ ಅವಕಾಶ ಒದಗಿಸಲಾಗಿದೆ.

ಹಬ್ಬ ಹಬ್ಬ: ದಾಖಲೆ ದರದಲ್ಲಿ ಉಡುಪಿ ಮಲ್ಲಿಗೆ ಮಾರಾಟ

ಮೂರು ದಿನಗಳ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳದಲ್ಲಿ ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ, ಬೀದರ್, ರಾಯಚೂರು, ಯಾದಗಿರಿ, ಬಳ್ಳಾರಿ, ವಿಜಯನಗರ ಹಾಗೂ ಕೊಪ್ಪಳ ಜಿಲ್ಲೆಗಳ ಕೈಗಾರಿಕೆಗಳು, ಸಂಘ-ಸಂಸ್ಥೆಗಳು, ಮಹಿಳಾ ಸ್ವ-ಸಹಾಯ ಗುಂಪುಗಳು, ಗುಡಿ ಕೈಗಾರಿಕೆಗಳು, ಗೃಹ ಉದ್ಯಮಗಳು, ಕುಶಲಕರ್ಮಿಗಳು ಸ್ಥಳೀಯವಾಗಿ ಉತ್ಪಾದಿಸಲಾಗುವ ಗೃಹ ಉತ್ಪನ್ನ, ಗುಡಿ ಕೈಗಾರಿಕೆ ವಸ್ತುಗಳು, ಕರಕುಶಲ ವಸ್ತುಗಳು, ತಿಂಡಿ ತಿನುಸುಗಳು, ವಿವಿಧ ಸಮುದಾಯಗಳು ತಯ್ಯಾರಿಸಿರುವ ಕುಲಕಸುಬಿನ ವಸ್ತುಗಳ ಮಾರಾಟ ಮಾಡುವ ಸುವರ್ಣಾವಕಾಶ ಕಲ್ಪಿಸಲಾಗಿದೆ ಎಂದು ಡಿ.ಸಿ. ಯಶವಂತ ವಿ. ಗುರುಕರ್ ತಿಳಿಸಿದ್ದಾರೆ.

ಮಾರಾಟ ಮೇಳದಲ್ಲಿ ಭಾಗವಹಿಸಲು ಇಚ್ಚಿಸುವವರು ಇದೇ ಸೆಪ್ಟೆಂಬರ್ 9 ರೊಳಗಾಗಿ ಅರ್ಜಿಯನ್ನು ಕಲಬುರಗಿ ಜಿಲ್ಲಾ ಕೈಗಾರಿಕಾ ಕೇಂದ್ರದ ಸಹಾಯಕ ನಿರ್ದೇಶಕಿ ಶಿವಮ್ಮ ಇವರ ವಾಟ್ಸ್ಯಾಪ್ ಸಂಖ್ಯೆ 9663961777ಗೆ ಕಳುಹಿಸಿ ಹೆಸರು ನೊಂದಾಯಿಸಿಕೊಳ್ಳಬೇಕೆಂದು ಡಿ.ಸಿ. ಅವರು ಮನವಿ ಮಾಡಿದ್ದಾರೆ. ಅರ್ಜಿಯಲ್ಲಿ ಘಟಕದ ಹೆಸರು, ಮಾಲೀಕರ ಹೆಸರು, ದೂರವಾಣಿ ಸಂಖ್ಯೆ, ಅಂಚೆ ವಿಳಾಸ, ಉತ್ಪನ್ನದ ವಿವರಗಳು, ಅವಶ್ಯಕವಿರುವ ಮಳಿಗೆಗಳು, ಪ್ರದರ್ಶನಕ್ಕೆ ತರುವಂತಹ ಉತ್ಪನ್ನಗಳ ಒಟ್ಟು ಸಂಖ್ಯೆ ಮತ್ತು ಮೌಲ್ಯವನ್ನು ಅರ್ಜಿಯಲ್ಲಿ ಕಡ್ಡಾಯವಾಗಿ ನಮೂದಿಸಬೇಕು.

ಚನ್ನಪಟ್ಟಣದಲ್ಲೊಬ್ಬ ನಕಲಿ ಸಾಯಿಬಾಬಾ, ಭಕ್ತರನ್ನ ನಂಬಿಸಿ ಹಣ ವಸೂಲಿ!

ಹೆಲ್ಪ್‌ಡೆಸ್ಕ್ ಸ್ಥಾಪನೆ: ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳದ ಕುರಿತು ಹೆಚ್ಚಿನ ಮಾಹಿತಿ ಪಡೆಯಲು ಕಲಬುರಗಿ ಜಿಲ್ಲಾ ಕೈಗಾರಿಕಾ ಕೇಂದ್ರದಲ್ಲಿ ಹೆಲ್ಪ್‌ಡೆಸ್ಕ್ ಸ್ಥಾಪಿಸಲಾಗಿದ್ದು, ಸಹಾಯವಾಣಿ ಸಂಖ್ಯೆ 9986113939ಗೆ ಕರೆ ಮಾಡಬಹುದಾಗಿದೆ.

Follow Us:
Download App:
  • android
  • ios