ನೌಕ್ರಿ ಕೊಡೋದು ಹ್ಯಾಂಗರ ಇರಲಿ, ಬದುಕಿದ್ರ ಸಾಕು: ಭೂ ಸಂತ್ರಸ್ತರ ಅಳಲು
ಕೈಗಾರಿಕೆಗಳ ಸ್ಥಾಪನೆಗೆ ಜಮೀನು ನೀಡಿದರೆ ನಮಗೆಲ್ಲ ಉದ್ಯೋಗದ ಭರವಸೆ ನೀಡಲಾಗಿತ್ತು. ನೀವು ಅಥವಾ ನಿಮ್ಮ ಮಕ್ಕಳಿಗೆ ಗಾರ್ಮೆಂಟ್ಸ್ ಕಂಪನಿಗಳಲ್ಲಿ ಕೆಲಸ, ಒಳ್ಳೆ ಪಗಾರ ಕೊಡಲಾಗುತ್ತದೆ ಎಂದು ನಮ್ಮನ್ನು ನಂಬಿಸಿ, ನಮ್ಮ ಫಲವತ್ತಾದ ಜಮೀನುಗಳನ್ನು ಕೊಟ್ಟು ಮೋಸ ಹೋದ್ವಿ.