ಇಂದು ಸಂಜೆ 4 ಗಂಟೆಯಿಂದ ರಾತ್ರಿ 11 ಗಂಟೆವರೆಗೆ ಕ್ರಿಕೆಟ್ ಮ್ಯಾಚ್ ನಡೆಯಲಿರುವ ಕಾರಣ ಹಲವೆಡೆ ವಾಹನಗಳ ನಿಲುಗಡೆಗೆ ನಿಷೇಧ ಹೇರಲಾಗಿದೆ. ಕ್ರಿಕೆಟ್ ಹಿನ್ನಲೆ ಸುಗಮ ಸಂಚಾರಕ್ಕಾಗಿ ಟ್ರಾಫಿಕ್ ಪೊಲೀಸರಿಂದ ಪರ್ಯಾಯ ವ್ಯವಸ್ಥೆ. 

ಬೆಂಗಳೂರು(ಏ.02):  ಇಂದು(ಭಾನುವಾರ) ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಕ್ರಿಕೆಟ್ ಪಂದ್ಯ ನಡೆಯಲಿದೆ. ಮುಂಬೈ- ಬೆಂಗಳೂರು ನಡುವೆ ಮ್ಯಾಚ್‌ ನಡೆಯಲಿದೆ. ಪಂದ್ಯ ವೀಕ್ಷಿಸಲು ಕ್ರಿಕೆಟ್ ಅಭಿಮಾನಿಗಳು ಕಾದುಕುಳಿತಿದ್ದಾರೆ. 

ಇಂದು ಸಂಜೆ 4 ಗಂಟೆಯಿಂದ ರಾತ್ರಿ 11 ಗಂಟೆವರೆಗೆ ಕ್ರಿಕೆಟ್ ಮ್ಯಾಚ್ ನಡೆಯಲಿರುವ ಕಾರಣ ಹಲವೆಡೆ ವಾಹನಗಳ ನಿಲುಗಡೆಗೆ ನಿಷೇಧ ಹೇರಲಾಗಿದೆ. ಕ್ರಿಕೆಟ್ ಹಿನ್ನಲೆ ಸುಗಮ ಸಂಚಾರಕ್ಕಾಗಿ ಟ್ರಾಫಿಕ್ ಪೊಲೀಸರು ಪರ್ಯಾಯ ವ್ಯವಸ್ಥೆ ಕಲ್ಪಿಸಿದ್ದಾರೆ. 

ಎಣ್ಣೆ ಮತ್ತಲ್ಲಿ ನಡುರಸ್ತೆಯಲ್ಲಿ ಕಾರು ನಿಲ್ಲಿಸಿ ನಿದ್ದೆಗೆ ಜಾರಿದ ಕುಡುಕ...!

ಕ್ವೀನ್ಸ್ ರಸ್ತೆ, ಎಂಜಿ ರೋಡ್, ರಾಜಭವನ ರಸ್ತೆ, ಸೆಂಟ್ರಲ್ ಸ್ಟ್ರೀಟ್ ರೋಡ್, ಕಬ್ಬನ್ ಪಾರ್ಕ್, ಸೆಂಟ್ ಮಾರ್ಕ್ಸ್ ರೋಡ್, ಮ್ಯೂಸಿಯಂ ರೋಡ್, ಕಸ್ತೂರ್ ಬಾ ರಸ್ತೆ, ಅಂಬೇಡ್ಕರ್ ಬೀದಿ, ಟ್ರಿನಿಟಿ ಸರ್ಕಲ್, ಲ್ಯಾವೆಲ್ಲೆ ರೋಡ್, ವಿಠಲ್ ಮಲ್ಯ ಹಾಗೂ ನೃಪತುಂಗ ರಸ್ತೆಯಲ್ಲಿ ವಾಹನ ನಿಲುಗಡೆ ನಿಷೇಧ ವಿಧಿಸಲಾಗಿದೆ. 

ಎಲ್ಲೆಲ್ಲಿ ವಾಹನ ನಿಲುಗಡೆ ಸ್ಥಳ?

ಕಿಂಗ್ಸ್ ರೋಡ್, ಯುಬಿ ಸಿಟಿ ಪಾರ್ಕಿಂಗ್ ಸ್ಥಳ, ಶಿವಾಜಿನಗರ ಬಿಎಂಟಿಸಿ ಬಸ್ ನಿಲ್ದಾಣ, ಹಳೇ KGID ಬಿಲ್ಡಿಂಗ್, ಕಂಠೀರವ ಸ್ಟೇಡಿಯಂ, ಬಿಆರ್ ವಿ ಮೈದಾನದಲ್ಲಿ ವಾಹನಗಳ ನಿಲುಗಡೆಗೆ ಅವಕಾಶ ಕಲ್ಪಿಸಲಾಗಿದೆ.