ವಾರದ ನಾಲ್ಕು ದಿನ ಸಂಜೆ 4ರ ವರೆಗೆ ಲಾಕ್‌ಡೌನ್ ಸಡಿಲ
ಲಾಕ್‌ಡೌನ್ ಹಿನ್ನೆಲೆಯಲ್ಲಿ ಸದ್ಯ ಕೊಡಗು ಜಿಲ್ಲೆ ಹಸಿರು ವಲಯಕ್ಕೆ ಬಂದಿರುವುದರಿಂದ ಭಾನುವಾರ, ಸೋಮವಾರ, ಬುಧವಾರ ಮತ್ತು ಶುಕ್ರವಾರ ಬೆಳಗ್ಗೆ 6 ರಿಂದ ಸಂಜೆ 4 ಗಂಟೆಗೆ ವರೆಗೆ ಎಲ್ಲಾ ಕಿರಾಣಿ ಅಂಗಡಿಗಳನ್ನು ತೆರೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಪ್ರಕಟಿಸಿದ್ದಾರೆ.
ಮಡಿಕೇರಿ(ಏ.29): ಲಾಕ್‌ಡೌನ್ ಹಿನ್ನೆಲೆಯಲ್ಲಿ ಸದ್ಯ ಕೊಡಗು ಜಿಲ್ಲೆ ಹಸಿರು ವಲಯಕ್ಕೆ ಬಂದಿರುವುದರಿಂದ ಭಾನುವಾರ, ಸೋಮವಾರ, ಬುಧವಾರ ಮತ್ತು ಶುಕ್ರವಾರ ಬೆಳಗ್ಗೆ 6 ರಿಂದ ಸಂಜೆ 4 ಗಂಟೆಗೆ ವರೆಗೆ ಎಲ್ಲಾ ಕಿರಾಣಿ ಅಂಗಡಿಗಳನ್ನು ತೆರೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಪ್ರಕಟಿಸಿದ್ದಾರೆ.
ಕೋವಿಡ್- 19 ಸಂಬಂಧ ನಗರದ ಜಿ.ಪಂ. ಸಭಾಂಗಣದಲ್ಲಿ ಮಂಗಳವಾರ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕೋಲಾರದಲ್ಲಿ ಬಿಜೆಪಿಯಿಂದ ಪೌರಕಾರ್ಮಿಕರ ಪಾದಪೂಜೆ..!
ಜಿಲ್ಲೆಯಲ್ಲಿ ಆರಂಭದಲ್ಲಿ ಒಂದು ಪಾಸಿಟಿವ್ ಪ್ರಕರಣ ಕಂಡುಬಂದಿತ್ತು. ನಂತರ ಯಾವುದೇ ಪಾಸಿಟಿವ್ ಪ್ರಕರಣ ಕಂಡು ಬರದಂತೆ ಮುನ್ನೆಚ್ಚರಿಕೆ ವಹಿಸಿದ ಪರಿಣಾಮ ಕೊಡಗು ಜಿಲ್ಲೆ, ಹಸಿರು ವಲಯಕ್ಕೆ ಬರಲು ಕಾರಣವಾಗಿದೆ. ಇದಕ್ಕೆ ಜಿಲ್ಲಾಡಳಿತ, ಜಿಲ್ಲೆಯ ಜನಪ್ರತಿನಿಧಿಗಳು, ಸಂಘ- ಸಂಸ್ಥೆಗಳು ಮತ್ತು ಸಾರ್ವಜನಿಕರ ಸಹಕಾರ ಅತ್ಯಮೂಲ್ಯವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಕೊಂಡಾಡಿದರು.
ವಿರಾಜಪೇಟೆಯ ಮೊರಾರ್ಜಿ ವಸತಿ ಶಾಲೆಯಲ್ಲಿ ಕ್ವಾರಂಟೈನ್‌ನಲ್ಲಿದ್ದ ಕಾರ್ಮಿಕರನ್ನು ಅವರವರ ಜಿಲ್ಲೆಗೆ ಕಳುಹಿಸಿಕೊಡಲಾಗಿದೆ. ಇದರಲ್ಲಿ ಕೆ.ಜಿ. ಬೋಪಯ್ಯ ಅವರ ಪಾತ್ರ ಪ್ರಮುಖವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಶ್ಲಾಘಿಸಿದರು. ಮುಂದಿನ ಜೂನ್ ನಂತರ ಮುಂಗಾರು ಆರಂಭವಾಗುವುದರಿಂದ ಪ್ರಕೃತಿ ವಿಕೋಪ ಎದುರಿಸುವ ನಿಟ್ಟಿನಲ್ಲಿ ಈಗಿನಿಂದಲೇ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕಿದೆ. ಆ ನಿಟ್ಟಿನಲ್ಲಿ ಅಧಿಕಾರಿಗಳ ಸಭೆ ನಡೆಸುವಂತೆ ಜಿಲ್ಲಾ ಉಸ್ತುವಾರಿ ಸಚಿವರು ಸೂಚಿಸಿದರು.
ಬಟ್ಟೆ ವರ್ತಕನಿಂದ 17 ಮಂದಿಗೆ ಕೊರೋನಾ ಸೋಂಕು: ಬೆಚ್ಚಿ ಬಿದ್ದ ಕಲಬುರಗಿ ಜನತೆ..!
ಮಳೆಗಾಲ ಆರಂಭವಾಗುವುದರಿಂದ ವಿವಿಧ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕಿದೆ. ಆದ್ದರಿಂದ ಮರಳು ದೊರೆಯುವಂತಾಗಬೇಕು ಎಂದು ವಿ.ಸೋಮಣ್ಣ ಅವರು ತಿಳಿಸಿದರು. ಪಡಿತರ ವಿತರಣೆಯಲ್ಲಿ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಶೇ.97ರಷ್ಟುಪ್ರಗತಿ ಸಾಧಿಸಿದೆ. ಕಡು ಬಡವರು ಮತ್ತು ಪಡಿತರ ಚೀಟಿ ಇಲ್ಲದವರಿಗೆ ಪಡಿತರ ತಲುಪಿಸುವಂತಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರು ನಿರ್ದೇಶನ ನೀಡಿದರು.
ಶಾಸಕ ಕೆ.ಜಿ. ಬೋಪಯ್ಯ ಮಾತನಾಡಿ, ಕೇಂದ್ರ ಸರ್ಕಾರದ ನಿರ್ದೇಶನಗಳನ್ನು ಚಾಚು ತಪ್ಪದೆ ಪಾಲಿಸಬೇಕಿದ್ದು, ಆ ನಿಟ್ಟಿನಲ್ಲಿ ಜಿಲ್ಲೆಯ ಸಾರ್ವಜನಿಕರು ಸಹಕರಿಸುವಂತೆ ಕೋರಿದರು. ಗಣಿಗಾರಿಕೆ ಮತ್ತು ಖನಿಜ ಉತ್ಪಾದನೆಗೆ ಅವಕಾಶವಿದ್ದು, ಕೇಂದ್ರ ಸರ್ಕಾರದ ಆದೇಶದಂತೆ ಕ್ರಮ ವಹಿಸಬೇಕು ಎಂದು ಅವರು ಸೂಚಿಸಿದರು. ಸಂಪಾಜೆ ಚೆಕ್‌ಪೋಸ್ಟ್‌ನಲ್ಲಿ ಇನ್ನಷ್ಟುಬಿಗಿ ಕ್ರಮ ಕೈಗೊಳ್ಳಬೇಕು. ಹೊರ ರಾಜ್ಯಗಳಿಂದ ಬರುವವರನ್ನು ತಡೆಯಬೇಕು. ಕೊಡಗು ಜಿಲ್ಲೆಯವರು ಹೊರಗಿನಿಂದ ಬಂದಲ್ಲಿ ಆಧಾರ್ ಕಾರ್ಡ್ ಅಥವಾ ಮತದಾರರ ಗುರುತಿನ ಚೀಟಿ ಪ್ರತಿ ಇದ್ದಲ್ಲಿ ಅವಕಾಶ ನೀಡಬಹುದಾಗಿದೆ ಎಂದು ಕೆ.ಜಿ. ಬೋಪಯ್ಯ ಅವರು ತಿಳಿಸಿದರು.
ನಾಲ್ಕು ತಿಂಗಳು ಮಗು ಸೇರಿದಂತೆ ಐವರಿಗೆ ಕೊರೋನಾ ಸೋಂಕು ದೃಢ: ಆತಂಕದಲ್ಲಿ ಕಲಬುರಗಿ ಜನತೆ
ಜಿಲ್ಲೆಗೆ ಹೊರ ರಾಜ್ಯ ಅಥವಾ ಹೊರ ಜಿಲ್ಲೆಯಿಂದ ಮೀನು ಮತ್ತು ಹಂದಿ ಮಾಂಸ ತರುವುದಕ್ಕೆ ಅವಕಾಶವನ್ನು ನೀಡಬಾರದು. ಈ ಬಗ್ಗೆ ಪೊಲೀಸ್ ಇಲಾಖೆ ಎಚ್ಚರಿಕೆ ವಹಿಸುವಂತೆ ಕೆ.ಜಿ.ಬೋಪಯ್ಯಹೇಳಿದರು.
ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಮಾತನಾಡಿ ಕೊಡಗನ್ನು ಹಸಿರು ವಲಯ ಎಂದು ಪ್ರಕಟಿಸಿರುವ ಹಿನ್ನೆಲೆ ಮುಂದಿನ ದಿನಗಳಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಬೇಕಿದೆ. ಆ ನಿಟ್ಟಿನಲ್ಲಿ ಅಭಿವೃದ್ಧಿ ಕಾರ್ಯಗಳು ಚುರುಕು ಪಡೆಯುವಂತಾಗಬೇಕು ಎಂದು ಅವರು ಸೂಚಿಸಿದರು. ಲೋಕೋಪಯೋಗಿ, ಪಂಚಾಯತ್ ರಾಜ್ ಕಾಮಗಾರಿಗಳನ್ನು ಆರಂಭಿಸಬೇಕು. ಇದಕ್ಕಾಗಿ ಯಾವುದೇ ಅಡೆ-ತಡೆ ಇರಬಾರದು. ಮರಳು ತೆಗೆಯಲು ಅವಕಾಶ ನೀಡಬೇಕು ಎಂದು ಅವರು ಮನವಿ ಮಾಡಿದರು. ಮಳೆಗಾಲದ ಅವಧಿಯಲ್ಲಿ ಕುಶಾಲನಗರ- ಮಡಿಕೇರಿ ಹೆದ್ದಾರಿ ಮಾರ್ಗ ತಾವರೆಕೆರೆ ಬಳಿ ಸಾರಿಗೆ ಸಂಪರ್ಕಕ್ಕೆ ತೊಂದರೆಯಯಾಗುತ್ತಿದೆ ಇದನ್ನು ಸರಿಪಡಿಸಬೇಕಿದೆ. ಜಿಲ್ಲೆಯಲ್ಲಿ ಎಲ್ಲ ಅಂಗಡಿಗಳನ್ನು ತೆರೆಯಲು ಅವಕಾಶ ಮಾಡಬೇಕು ಎಂದು ಅವರು ಕೋರಿದರು.
ಕಲಬುರಗಿ: ವರುಣನ ಅಬ್ಬರ, ಸಿಡಿಲು ಬಡಿದು ಮೂವರ ದುರ್ಮರಣ
ವಿಧಾನ ಪರಿಷತ್ ಸದಸ್ಯರಾದ ವೀಣಾ ಅಚ್ಚಯ್ಯ ಮಾತನಾಡಿ, ಸಹಕಾರ ಸಂಘಗಳಲ್ಲಿ ರೈತರ 1 ಲಕ್ಷ ರು. ಸಾಲಮನ್ನಾ ಮಾಡುವ ಯೋಜನೆ ಇದ್ದು, ಈ ಯೋಜನೆ ಜಿಲ್ಲೆಯಲ್ಲಿ ಇನ್ನೂ 1 ಸಾವಿರ ರೈತರಿಗೆ ತಲುಪಿಸಬೇಕಿದೆ ಎಂದು ಅವರು ಮನವಿ ಮಾಡಿದರು.
ಜಂಬೂರಿನಲ್ಲಿ ಸಂತ್ರಸ್ತರಿಗೆ ನಿರ್ಮಾಣವಾಗುತ್ತಿರುವ ಮನೆಗಳನ್ನು ಕೂಡಲೇ ಹಸ್ತಾಂತರಿಸಬೇಕು ಎಂದು ಅವರು ಮನವಿ ಮಾಡಿದರು. ಜಿಲ್ಲೆಯಲ್ಲಿ ಹಲವು ಕಡೆಗಳಲ್ಲಿ ಬಾಳೆ ಬೆಳೆದಿದ್ದು ಬಾಳೆ ಖರೀದಿಸಲು ಅವಕಾಶ ಮಾಡಬೇಕು ಎಂದು ಅವರು ಸಲಹೆ ಮಾಡಿದರು. ಜೊತೆಗೆ ಇತ್ತೀಚೆಗೆ ನಿಧನರಾದ ಉಪ ಅರಣ್ಯ ಸಂರಕ್ಷಾಣಾಧಿಕಾರಿ ಶಿವಯ್ಯ ಅವರಿಗೆ ಸಂತಾಪ ಸೂಚಿಸಲಾಯಿತು.
ಲಾಕ್‌ಡೌನ್ ಸಡಿಲಿಕೆ ಬೆನ್ನಲ್ಲೆ ಕಾಫಿ ನಾಡಲ್ಲಿ ಉದ್ಯಮ ಸ್ಟಾರ್ಟ್
ವಿಧಾನ ಪರಿಷತ್ ಸದಸ್ಯರಾದ ಸುನಿಲ್ ಸುಬ್ರಮಣಿ ಮಾತನಾಡಿ, ಲಾಕ್‌ಡೌನ್ ಪರಿಣಾಮದಿಂದಾಗಿ ಕೆಲವು ಕುಟುಂಬಗಳು ವಿದ್ಯುತ್ ಬಿಲ್ ಪಾವತಿಸಲು ಸಾಧ್ಯವಾಗಿಲ್ಲ, ಆದ್ದರಿಂದ ವಿದ್ಯುತ್ ಬಿಲ್ ಪಾವತಿಸಿಲ್ಲವೆಂದು ಸಂಪರ್ಕ ಕಡಿತಗೊಳಿಸಬಾರದು. ಕೃಷಿ ಚಟುವಟಿಕೆಗೆ ಯಾವುದೇ ರೀತಿಯಲ್ಲಿ ತೊಂದರೆ ನೀಡಬಾರದು ಎಂದು ನಿರ್ದೇಶನ ನೀಡಿದರು.
ಜಿ.ಪಂ. ಅಧ್ಯಕ್ಷ ಬಿ.ಎ. ಹರೀಶ್, ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಎಸ್‌ಪಿ ಸುಮನ್ ಡಿ. ಪನ್ನೇಕರ್, ಜಿ.ಪಂ. ಸಿಇಒ ಕೆ. ಲಕ್ಷ್ಮೇಪ್ರಿಯಾ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಸ್ನೇಹಾ, ಉಪ ವಿಭಾಗಾಧಿಕಾರಿ ಟಿ. ಜವರೇಗೌಡ, ಡಿಎಚ್‌ಒ ಡಾ.ಕೆ. ಮೋಹನ್, ವೈದ್ಯಕೀಯ ಕಾಲೇಜಿನ ನಿರ್ದೇಶಕರಾದ ಡಾ. ಕಾರ್ಯಪ್ಪ, ತಹಸೀಲ್ದಾರರು, ತಾ.ಪಂ. ಇಒಗಳು, ಡಿವೈಎಸ್‌ಪಿಗಳು, ನಾನಾ ಇಲಾಖೆಯ ಅಧಿಕಾರಿಗಳು ಇದ್ದರು.