Asianet Suvarna News Asianet Suvarna News

ಇಂದಿನಿಂದ ಶಿವಮೊಗ್ಗದಲ್ಲಿ ಭಾಗಶಃ ಲಾಕ್‌ಡೌನ್‌

ಪೆಟ್ರೋಲ್‌ ಬಂಕ್‌ಗಳು, ಮದ್ಯದ ಅಂಗಡಿಗಳು, ಕಚೇರಿಗಳು ಸೇರಿದಂತೆ ಎಲ್ಲಾ ವ್ಯಾಪಾರ ವಹಿವಾಟುಗಳನ್ನು ಮಧ್ಯಾಹ್ನ 2 ಗಂಟೆವರೆಗೆ ನಡೆಸಲು ಅವಕಾಶ ಕಲ್ಪಿಸಲಾಗಿದೆ. ಆದರೆ ಕೃಷಿ ಸಂಬಂಧಿತ ಚಟುವಟಿಕೆಗಳಿಗೆ ಯಾವುದೇ ನಿರ್ಬಂಧ ಇರುವುದಿಲ್ಲ. ಕೈಗಾರಿಕಾ ಚಟುವಟಿಕೆಗಳಿಗೆ ಸಮಯ ನಿರ್ಬಂಧ ವಿಧಿಸಿರುವುದಿಲ್ಲ ಎಂದು ಶಿವಮೊಗ್ಗ ಜಿಲ್ಲಾ ಉಸ್ತವಾರಿ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ

partly lockdown in Shivamogga in July 16th On wards due to Corona Fear
Author
Shivamogga, First Published Jul 16, 2020, 8:39 AM IST

ಶಿವಮೊಗ್ಗ(ಜು.16): ಕೊರೋನಾ ನಿಯಂತ್ರಣದ ಕ್ರಮವಾಗಿ ಶಿವಮೊಗ್ಗ ಜಿಲ್ಲೆಯಾದ್ಯಂತ ಜು. 16 ರಿಂದ ಮುಂದಿನ ಆದೇಶದವರೆಗೆ ಮಧ್ಯಾಹ್ನ 2 ಗಂಟೆಯವರೆಗೆ ಮಾತ್ರ ವ್ಯಾಪಾರ ವಹಿವಾಟಿಗೆ ಅವಕಾಶ ಕಲ್ಪಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್‌. ಈಶ್ವರಪ್ಪ ತಿಳಿಸಿದರು.

ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಸಮಾಲೋಚನಾ ಸಭೆ ನಡೆಸಿದ ಬಳಿಕ ಈ ತೀರ್ಮಾನ ಪ್ರಕಟಿಸಿದರು.

ಪೆಟ್ರೋಲ್‌ ಬಂಕ್‌ಗಳು, ಮದ್ಯದ ಅಂಗಡಿಗಳು, ಕಚೇರಿಗಳು ಸೇರಿದಂತೆ ಎಲ್ಲಾ ವ್ಯಾಪಾರ ವಹಿವಾಟುಗಳನ್ನು ಮಧ್ಯಾಹ್ನ 2 ಗಂಟೆವರೆಗೆ ನಡೆಸಲು ಅವಕಾಶ ಕಲ್ಪಿಸಲಾಗಿದೆ. ಆದರೆ ಕೃಷಿ ಸಂಬಂಧಿತ ಚಟುವಟಿಕೆಗಳಿಗೆ ಯಾವುದೇ ನಿರ್ಬಂಧ ಇರುವುದಿಲ್ಲ. ಕೈಗಾರಿಕಾ ಚಟುವಟಿಕೆಗಳಿಗೆ ಸಮಯ ನಿರ್ಬಂಧ ವಿಧಿಸಿರುವುದಿಲ್ಲ. ಆದರೆ ಕೈಗಾರಿಕೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರು ಕಡ್ಡಾಯವಾಗಿ ಗುರುತಿನ ಚೀಟಿಯನ್ನು ಹೊಂದಿರಬೇಕು. ಕಾರ್ಮಿಕರಿಗೆ ಗುರುತಿನ ಚೀಟಿಯನ್ನು ಒದಗಿಸುವುದು ಮಾಲೀಕರ ಜವಾಬ್ದಾರಿಯಾಗಿದೆ ಎಂದು ಹೇಳಿದರು.

ಹಬ್ಬ ಹರಿದಿನಗಳನ್ನು ಸಾಮೂಹಿಕವಾಗಿ ಆಚರಿಸಲು ಅವಕಾಶವಿರುವುದಿಲ್ಲ. ಎಲ್ಲಾ ಹಬ್ಬಗಳನ್ನು ಮನೆಗಳಲ್ಲಿಯೇ ಆಚರಿಸಬಹುದಾಗಿದೆ. ಮದುವೆ, ಅಂತ್ಯಸಂಸ್ಕಾರ ಚಟುವಟಿಕೆಗಳಿಗೆ ಈ ಹಿಂದೆ ನಿಗದಿಪಡಿಸಲಾಗಿದ್ದ ಮಾನದಂಡವನ್ನು ಕಟ್ಟುನಿಟ್ಟಿನಿಂದ ಪಾಲಿಸಲು ಸೂಚಿಸಲಾಗಿದೆ.

ಮಹಾಮಾರಿ ಕೊರೋನಾ ಸೋಂಕಿನಿಂದ ಕರ್ನಾಟಕದ ಸ್ವಾಮೀಜಿ ನಿಧನ

ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳದೇ ಗುಂಪುಗೂಡುವುದು, ಮಾಸ್ಕ್‌ ಧರಿಸದೇ ಇರುವುದು ಸೇರಿದಂತೆ ಮಾರ್ಗಸೂಚಿಗಳನ್ನು ಉಲ್ಲಂಘಿಸುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಪೊಲೀಸ್‌ ಇಲಾಖೆಗೆ ಸೂಚಿಸಲಾಗಿದೆ ಎಂದರು.

ಸಮಾಲೋಚನಾ ಸಭೆ:

ಇದಕ್ಕೂ ಮೊದಲು ನಡೆದ ಸಮಾಲೋಚನಾ ಸಭೆಯಲ್ಲಿ ಚೇಂಬರ್‌ ಆಫ್‌ ಕಾಮರ್ಸ್‌, ಲಾರಿ ಮಾಲಿಕರ ಸಂಘ, ಅಟೋ ಕಾಂಪ್ಲೆಕ್ಸ್‌ ಸಂಘ, ಸಗಟು ತರಕಾರಿ ವ್ಯಾಪಾರಿಗಳ ಸಂಘ, ಮಾಚೇನಹಳ್ಳಿ ಕೈಗಾರಿಕಾ ವಸಾಹತು ಸಂಘ, ವಿಶ್ವೇಶ್ವರಯ್ಯ ಸಣ್ಣ ಕೈಗಾರಿಕೆಗಳ ಸಂಘ, ಬಸ್‌ ಮಾಲಿಕರ ಸಂಘ, ಜವಳಿ ವರ್ತಕರ ಸಂಘ, ರಿಕ್ಷಾ ಚಾಲಕರ ಒಕ್ಕೂಟ ಸೇರಿದಂತೆ ಹಲವು ಸಂಘ ಸಂಸ್ಥೆಗಳ ಪ್ರತಿನಿಧಿಗಳು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.

ಕೈಗಾರಿಕೆಗಳಿಗೆ ವಿನಾಯಿತಿ ನೀಡಬೇಕು, ಅಟೋ ಕಾಂಪ್ಲೆಕ್ಸ್‌ನಲ್ಲಿ ಸಂಜೆ 6 ರವರೆಗೆ ಚಟುವಟಿಕೆಗಳಿಗೆ ಅವಕಾಶ ನೀಡಬೇಕು, ಸೀಲ್‌ಡೌನ್‌ ಪ್ರದೇಶದಲ್ಲಿರುವ ಬಡವರಿಗೆ ಜಿಲ್ಲಾಡಳಿತದ ವತಿಯಿಂದ ಉಚಿತವಾಗಿ ತರಕಾರಿ, ದಿನಸಿ ವಿತರಿಸಬೇಕು, ಮಾರ್ಗಸೂಚಿಗಳನ್ನು ಕಟ್ಟುನಿಟ್ಟಿನಿಂದ ಜಾರಿಗೊಳಿಸಬೇಕು ಇತ್ಯಾದಿ ಸಲಹೆಗಳು ಬಂದವು.

ಲೋಕಸಭಾ ಸದಸ್ಯ ಬಿ. ವೈ.ರಾಘವೇಂದ್ರ, ಶಾಸಕರಾದ ಹರತಾಳು ಹಾಲಪ್ಪ, ಅರಗ ಜ್ಞಾನೇಂದ್ರ, ಆಯನೂರು ಮಂಜುನಾಥ, ಆರ್‌. ಪ್ರಸನ್ನ ಕುಮಾರ್‌, ಮೇಯರ್‌ ಸುವರ್ಣಾ ಶಂಕರ್‌, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಜ್ಯೋತಿ ಎಸ್‌. ಕುಮಾರ್‌, ಮಲೆನಾಡು ಅಭಿವೃದ್ಧಿ ಮಂಡಳಿ ಅಧ್ಯಕ್ಷ ಗುರುಮೂರ್ತಿ, ಆರ್ಯವೈಶ್ಯ ನಿಗಮದ ಅಧ್ಯಕ್ಷ ಡಿ.ಎಸ್‌.ಅರುಣ್‌, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್‌, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್‌.ವೈಶಾಲಿ, ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ ವಟಾರೆ ಮತ್ತಿತರರು ಉಪಸ್ಥಿತರಿದ್ದರು.
 

Follow Us:
Download App:
  • android
  • ios