ಬೆಂಗಳೂರಿನಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಗೊಂಡಿದ್ದರಿಂದ ಇಂದು ತಾಲೂಕಿನ ಕಾಂಗ್ರೆಸ್‌ ಮುಖಂಡರ ಸಮ್ಮುಖದಲ್ಲಿ ಕಾಂಗ್ರೆಸ್‌ ಕಚೇರಿಗೆ ಭೇಟಿ ನೀಡುತ್ತಿದ್ದೇನೆ ಎಂದು ಮಾಜಿ ಶಾಸಕ ಎಸ್‌.ಆರ್‌. ಶ್ರೀನಿವಾಸ್‌ ತಿಳಿಸಿದರು.

 ಗುಬ್ಬಿ : ಬೆಂಗಳೂರಿನಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಗೊಂಡಿದ್ದರಿಂದ ಇಂದು ತಾಲೂಕಿನ ಕಾಂಗ್ರೆಸ್‌ ಮುಖಂಡರ ಸಮ್ಮುಖದಲ್ಲಿ ಕಾಂಗ್ರೆಸ್‌ ಕಚೇರಿಗೆ ಭೇಟಿ ನೀಡುತ್ತಿದ್ದೇನೆ ಎಂದು ಮಾಜಿ ಶಾಸಕ ಎಸ್‌.ಆರ್‌. ಶ್ರೀನಿವಾಸ್‌ ತಿಳಿಸಿದರು.

ಪಟ್ಟಣದಲ್ಲಿ ಶನಿವಾರದಂದು ತಾಲೂಕು ಕಾಂಗ್ರೆಸ್‌ ಕಾರ್ಯಕರ್ತರಿಂದ ಸ್ವಾಗತ ಸ್ವೀಕರಿಸಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು ಕಾಂಗ್ರೆಸ್ಸಿನ ಎಲ್ಲಾ ಮೂಲ ಕಾರ್ಯಕರ್ತರನ್ನು ಗೌರವಿಸಿ ಅವರನ್ನು ಜೊತೆಯಲ್ಲಿ ಇಟ್ಟುಕೊಂಡು ಪಕ್ಷ ಸಂಘಟನೆ ಮಾಡಲಾಗುವುದು. ಪಕ್ಷವು ಯಾರನ್ನೇ ಅಭ್ಯರ್ಥಿಯನ್ನಾಗಿ ಮಾಡಿದರೆ ಅವರ ಗೆಲುವಿಗೆ ಶ್ರಮಿಸುವೆ. ಬಿಜೆಪಿಯ ಜನವಿರೋಧಿ ನೀತಿಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುತ್ತ ಎಲ್ಲರನ್ನೂ ಒಗ್ಗೂಡಿಸಿಕೊಂಡು ಕಾಂಗ್ರೆಸ್ಸನ್ನು ಗೆಲ್ಲಿಸುವ ಗುರಿಯನ್ನು ಹೊಂದಿದ್ದೇವೆ ಎಂದು ತಿಳಿಸಿದರು.

ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ನರಸಿಂಹಯ್ಯ ಮಾತನಾಡಿ, ಹೈಕಮಾಂಡ್‌ ತೀರ್ಮಾನದಂತೆ ಕಾಂಗ್ರೆಸ್ಸನ್ನು ಗೆಲ್ಲಿಸುವುದೇ ಗುರಿಯನ್ನಾಗಿಸಿಕೊಂಡಿದ್ದೇವೆ. ಚುನಾವಣೆ ಕೆಲವೇ ದಿನಗಳು ಬಾಕಿ ಇರುವುದರಿಂದ ಎಲ್ಲರೂ ಒಗ್ಗೂಡಿ ಪಕ್ಷ ತೀರ್ಮಾನಿಸುವ ಅಭ್ಯರ್ಥಿಯನ್ನು ಗೆಲ್ಲಿಸಲು ಪಣ ತೊಡುವೆವು ಎಂದು ಹೇಳಿದರು.

ಕಾಂಗ್ರೆಸ್‌ ಮುಖಂಡ ಮುರಳಿದರ ಹಾಲಪ್ಪ ಮಾತನಾಡಿ, ಎಲ್ಲರೂ ಒಗ್ಗಟ್ಟಿನಿಂದ ಇದ್ದಲ್ಲಿ ಮಾತ್ರ ಯಶಸ್ಸನ್ನು ಪಡೆಯಲು ಸಾಧ್ಯವಾಗುತ್ತದೆ. ಹೈಕಮಾಂಡ್‌ ತೀರ್ಮಾನದಂತೆ ಜಿಲ್ಲಾ ಹಾಗೂ ತಾಲೂಕಿನ ಎಲ್ಲಾ ಮುಖಂಡರನ್ನು ಒಗ್ಗೂಡಿಸಿ ಅಭ್ಯರ್ಥಿಯ ಗೆಲುವಿಗೆ ಶ್ರಮಿಸಬೇಕಾಗಿದೆ ಎಂದು ತಿಳಿಸಿದರು.

ತಾಲೂಕು ಉಸ್ತುವಾರಿ ಚಿಕ್ಕ ರಂಗಣ್ಣ ಮಾತನಾಡಿ, ಶ್ರೀನಿವಾಸ್‌ ಅವರಿಗೆ ತಾಲೂಕಿನ ನಾಡಿಮಿಡಿತ ಗೊತ್ತಿರುವುದರಿಂದ ಈ ಬಾರಿಯ ಚುನಾವಣೆಯಲ್ಲಿ ಗೆಲುವು ಸಾಧಿಸಿ ಹೆಚ್ಚಿನ ಅಭಿವೃದ್ಧಿ ಮಾಡಲು ಸಾಧ್ಯವಾಗುತ್ತದೆ. ಶ್ರೀನಿವಾಸರ ಆಗಮನದಿಂದ ಕಾಂಗ್ರೆಸ್ಸಿಗೆ ಹೆಚ್ಚಿನ ಬಲಬಂದಂತಾಗಿದ್ದು, ಕಾಂಗ್ರೆಸ್ಸಿನ ಶಕ್ತಿಯನ್ನು ಹೆಚ್ಚಿಸುತ್ತೇವೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್‌ನ ಜಿಲ್ಲಾ ಘಟಕದ ಅಧ್ಯಕ್ಷ ಶಶಿಹುಲಿಕುಂಟೆ, ಎಸ್‌ಸಿ, ಎಸ್‌ಟಿ ಘಟಕದ ಅಧ್ಯಕ್ಷ ಲಿಂಗರಾಜು, ನಿಟ್ಟೂರು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಜಯಣ್ಣ, ಮುಖಂಡರಾದ ಭರತ್‌ ಗೌಡ, ರೇವಣ್ಣ ಸಿದ್ದಪ್ಪ, ಶಿವಕುಮಾರ, ರಫೀಕ್‌, ಮಂಜುನಾಥ್‌, ಶಶಿಭೂಷಣ್‌, ಸೌಭಾಗ್ಯಮ್ಮ ಹಾಗೂ ಅಪಾರ ಕಾರ್ಯಕರ್ತರು ಹಾಜರಿದ್ದರು.

ಭವಾನಿ ಮುನಿಸು

ಬೆಂಗಳೂರು (ಏ.03): ತೀವ್ರ ಕುತೂಹಲ ಮೂಡಿಸಿದ್ದ ಹಾಸನ ವಿಧಾನಸಭಾ ಕ್ಷೇತ್ರದ ಟಿಕೆಟ್‌ಗೆ ಸಂಬಂಧಿಸಿದಂತೆ ಪಕ್ಷದ ವರಿಷ್ಠ ನಾಯಕ ಎಚ್‌.ಡಿ.ದೇವೇಗೌಡ ಅವರ ನೇತೃತ್ವದಲ್ಲಿ ನಡೆದ ಸಂಧಾನ ಸಭೆ ವಿಫಲವಾಗಿದ್ದು, ಭವಾನಿ ರೇವಣ್ಣ ಅವರಿಗೆ ಟಿಕೆಟ್‌ ನೀಡುವುದು ಸಾಧ್ಯವಿಲ್ಲ ಎಂಬ ಮಾತನ್ನು ದೇವೇಗೌಡ ನೇರವಾಗಿಯೇ ಹೇಳಿದ್ದಾರೆ ಎನ್ನಲಾಗಿದೆ. ಗೌಡರ ಈ ನಿಲುವಿನಿಂದ ಆಕ್ರೋಶಗೊಂಡ ಭವಾನಿ ಮತ್ತು ಎಚ್‌.ಡಿ.ರೇವಣ್ಣ ಮುನಿಸಿಕೊಂಡು ಸಭೆಯ ಅರ್ಧದಲ್ಲೇ ಪ್ರತ್ಯೇಕವಾಗಿ ನಿರ್ಗಮಿಸಿದ್ದಾರೆ. 

ಕುಟುಂಬದವರಿಗೆ ಟಿಕೆಟ್‌ ಬೇಡ ಎಂಬ ಬಲವಾದ ನಿಲುವು ವ್ಯಕ್ತಪಡಿಸಿದ್ದ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಅವರ ಮಾತಿಗೇ ದೇವೇಗೌಡರು ಸಹಮತ ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ. ಈ ಬೆಳವಣಿಗೆ ಹಿನ್ನೆಲೆಯಲ್ಲಿ ಸೋಮವಾರ ಜೆಡಿಎಸ್‌ನ ಎರಡನೇ ಪಟ್ಟಿಪ್ರಕಟಗೊಳ್ಳುವುದೇ? ಒಂದು ವೇಳೆ ಪ್ರಕಟಗೊಂಡರೂ ಅದರಲ್ಲಿ ಹಾಸನ ಕ್ಷೇತ್ರದ ಅಭ್ಯರ್ಥಿ ಹೆಸರು ಇರಲಿದೆಯೇ ಎಂಬುದು ಕುತೂಹಲಕರವಾಗಿದೆ. ಭಾನುವಾರ ರಾತ್ರಿ ದೇವೇಗೌಡರ ನಿವಾಸದಲ್ಲಿ ಈ ಸಭೆ ನಡೆಯಿತು. ಮೊದಲಿಗೆ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಆಗಮಿಸಿ ಗೌಡರ ಜತೆ ಮಾತುಕತೆ ನಡೆಸಿದರು. ಬಳಿಕ ರೇವಣ್ಣ ಮತ್ತು ಪತ್ನಿ ಭವಾನಿ ಒಟ್ಟಿಗೆ ಆಗಮಿಸಿದರು.

ಶಾಸಕ ಲಮಾಣಿಗೆ ಟಿಕೆಟ್‌ ಕೊಟ್ಟರೆ ಬಂಡಾಯ ಅಭ್ಯರ್ಥಿ ನಿಲ್ಲಿಸುತ್ತೇವೆ: ಗಂಗಣ್ಣ ಮಹಾಂತಶೆಟ್ಟರ್‌

ಟಿಕೆಟ್‌ಗೆ ಭವಾನಿ ರೇವಣ್ಣ ಬಿಗಿಪಟ್ಟು: ಮೂವರನ್ನೂ ಕೂಡಿಸಿಕೊಂಡು ಸಮಾಲೋಚನೆ ನಡೆಸಿದ ದೇವೇಗೌಡ, ಆರಂಭದಲ್ಲಿ ಅವರವರ ಅಭಿಪ್ರಾಯಗಳನ್ನು ಕೇಳಿದ್ದಾರೆ. ಹಾಸನ ಕ್ಷೇತ್ರದ ಪ್ರಸಕ್ತ ಸನ್ನಿವೇಶದಲ್ಲಿ ಹಾಲಿ ಶಾಸಕ ಪ್ರೀತಂಗೌಡ ಅವರನ್ನು ಮಟ್ಟಹಾಕಲು ತಮಗೇ ಟಿಕೆಟ್‌ ನೀಡಬೇಕು. ಪ್ರೀತಂಗೌಡ ತಮಗೆ ಸಾಕಷ್ಟುಅವಮಾನ ಮಾಡಿರುವುದರಿಂದ ಈ ಚುನಾವಣೆಯಲ್ಲಿ ಪಾಠ ಕಲಿಸಬೇಕಾಗಿದೆ. ತಮಗೇ ಟಿಕೆಟ್‌ ನೀಡಬೇಕು ಎಂಬ ಬೇಡಿಕೆಯಿಂದ ಹಿಂದೆ ಸರಿಯುವುದಿಲ್ಲ ಎಂದು ಭವಾನಿ ರೇವಣ್ಣ ಕಡ್ಡಿ ಮುರಿದಂತೆ ಹೇಳಿದರು ಎನ್ನಲಾಗಿದೆ.