Asianet Suvarna News Asianet Suvarna News

ವಿಧಾನಸಭೆ ಚುನಾವಣೆಗೆ ನನ್ನ ಸ್ಪರ್ಧೆ ಪಕ್ಷ ತೀರ್ಮಾನಿಸುತ್ತದೆ : ನಿಖಿಲ್

ಮುಂಬರುವ 2023ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದು ಪಕ್ಷದ ತೀರ್ಮಾನಕ್ಕೆ ಬಿಟ್ಟವಿಷಯ. ಸದ್ಯ ಕುಮಾರಣ್ಣನವರ ಸೂಚನೆಯಂತೆ ಪಕ್ಷ ಸಂಘಟನೆಯೇ ನನ್ನ ಗುರಿ ಎಂದು ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ… ಕುಮಾಸ್ವಾಮಿ ಹೇಳಿದರು.

Party Will Decide About My Next Political Move says Nikhil Kumaraswamy snr
Author
First Published Oct 29, 2022, 5:28 AM IST

 ಶ್ರೀರಂಗಪಟ್ಟಣ (ಅ.29): ಮುಂಬರುವ 2023ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದು ಪಕ್ಷದ ತೀರ್ಮಾನಕ್ಕೆ ಬಿಟ್ಟವಿಷಯ. ಸದ್ಯ ಕುಮಾರಣ್ಣನವರ ಸೂಚನೆಯಂತೆ ಪಕ್ಷ ಸಂಘಟನೆಯೇ ನನ್ನ ಗುರಿ ಎಂದು ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾಸ್ವಾಮಿ ಹೇಳಿದರು.

ತಾಲೂಕಿನ ಟಿ.ಎಂ.ಹೊಸೂರು ಹಾಗೂ ಕಾಳೇನಹಳ್ಳಿಯಲ್ಲಿ ಶಾಸಕ (MLA)  ರವೀಂದ್ರ ಶ್ರೀಕಂಠಯ್ಯರೊಂದಿಗೆ 1 ಕೋಟಿ 70 ಲಕ್ಷ ರು. ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿಪೂಜೆ ಹಾಗೂ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ನನ್ನ ಸ್ಪರ್ಧೆಯ ವಿಷಯದಲ್ಲಿ ಕುಮಾರಣ್ಣ ಹಾಗೂ ಪಕ್ಷದ (Party)  ತೀರ್ಮಾನವೇ ಅಂತಿಮ. ನಾನಿನ್ನು ಪಕ್ಷ ಕಟ್ಟುವ ಸಂಘಟನೆಯಲ್ಲಿ ತೊಡಗಿದ್ದೇನೆ. ಪಕ್ಷದ ವರಿಷ್ಠರ 123 ಗುರಿಯನ್ನು ಮುಟ್ಟಲು ಯುವ ಶಕ್ತಿಯನ್ನು ಒಗ್ಗೂಡಿಸುವ ಕೆಲಸದಲ್ಲಿದ್ದೇನೆ ಎಂದರು.

ರಾಜ್ಯದ ಜನರು ಅನುಭವಿಸುತ್ತಿರುವ ಕಷ್ಣಗಳನ್ನು ಮನಗಂಡು ಮಾಜಿ ಸಿಎಂ ಕುಮಾರಣ್ಣ ರವರ ನೇತೃತ್ವದಲ್ಲಿ ಶಿಕ್ಷಣ, ಉದ್ಯೋಗ, ಆರೋಗ್ಯ, ಕೃಷಿ ಸೇರಿದಂತೆ ಪಂಚರತ್ನ ಯೋಜನೆ ಮೂಲಕ ರಾಜ್ಯಾದ್ಯಂತ ಜೆಡಿಎಸ್‌ ಪಕ್ಷವನ್ನು ಸಂಘಟಿಸಲಾಗುತ್ತಿದೆ ಎಂದರು.

ಕನ್ನಡ ರಾಜ್ಯೋತ್ಸವವನ್ನು ರಾಜ್ಯದ ಜನತೆ ಸಡಗರ ಸಂಭ್ರಮದಿಂದ ಆಚರಿಸುವ ಹಾಗೇ ಪ್ರಾದೇಶಿಕ ಪಕ್ಷವಾದ ಜೆಡಿಎಸ್‌ ರಾಜ್ಯದ ನೆಲ, ಜಲ, ಭಾಷೆ ವಿಚಾರವಾಗಿ ಮಾಜಿ ಪ್ರಧಾನಿ ಎಚ್‌.ಡಿ ದೇವೇಗೌಡರು ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ ಸದಾ ದ್ವನಿ ಎತ್ತುತ್ತಾ ಬಂದಿದ್ದಾರೆ. ಹಾಗೆಯೇ ರಾಜ್ಯದ ಪ್ರತಿಯೊಬ್ಬ ಜನರು ಮನೆಗಳ ಮೇಲೆ ಕನ್ನಡ ಭಾವುಟ ಹಾರಿಸುವ ಮೂಲಕ ಕನ್ನಡವನ್ನ ಎತ್ತಿ ಹಿಡಿಯುವಂತೆ ಪಕ್ಷವು ಮನವಿ ಮಾಡಿದೆ ಎಂದರು.

ಶಾಸಕ ರವೀಂದ್ರ ಶ್ರೀಕಂಠಯ್ಯ ಮಾತನಾಡಿ, ಜೆಡಿಎಸ್‌ ಯುವ ಘಟಕದ ರಾಜ್ಯಾಧÜ್ಯಕ್ಷ ನಿಖಿಲ… ಕುಮಾಸ್ವಾಮಿ ಆಗಮಿಸಿರುವುದು ಸಂತಸ ತಂದಿದೆ. ಜನರು ಸಹ ಅವರನ್ನು ಆತ್ಮೀಯವಾಗಿ ಸ್ವಾಗತಿಸಿ ಸಂಭ್ರಮಿಸಿದ್ದಾರೆ. ಈ ಭಾಗದ ರಸ್ತೆ ಅಭಿವೃದ್ಧಿ ಕಾಮಗಾರಿಗಳು ಅತ್ಯವಶ್ಯಕವಾಗಿತ್ತು. ಸದ್ಯ ಈಗ ಕ್ಷೇತ್ರದಲ್ಲಿ ಯಾವುದೇ ರಾಜಕೀಯ ಬೆಳವಣಿಗೆಗಳು ನಡೆಯುತ್ತಿಲ್ಲ. ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದೇವೆ ಎಂದರು.

ಇದಕ್ಕೂ ಮುನ್ನ ತಾಲೂಕಿನ ಕೆ.ಶೆಟ್ಟಹಳ್ಳಿಯಲ್ಲಿ 67.65 ಲಕ್ಷ ರು.ಗಳ ರಸ್ತೆ ಅಭಿವೃದ್ಧಿಗೆ ಕಾಮಗಾರಿಗಳಿಗೆ ಶಾಸಕರು ಗುದ್ದಲಿ ಪೂಜೆ ನೆರವೇರಿಸಿದರು.

ಈ ವೇಳೆ ಗ್ರಾಪಂ ಸದಸ್ಯ ಚಂದ್ರಶೇಖರ್‌, ಮುಖಂಡರಾದ ಅರಕೆಗೌಡ, ಸಿದ್ದೇಗೌಡ, ಲಕ್ಷ್ಮೀಪ್ರಸನ್ನ, ನವೀನ್‌, ಕುಮಾರ್‌, ಸೋಮಶೇಖರ್‌ ಸೇರಿದಂತೆ ಇತರರು ಜೊತೆಯಲ್ಲಿದ್ದರು.

ನಿಖಿಲ್ ಸ್ಪರ್ಧೆ ಖಚಿತ 

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್‌ ಕುಮಾರಸ್ವಾಮಿ ಅಖಾಡಕ್ಕಿಳಿಯುವುದು ಬಹುತೇಕ ಖಚಿತವಾಗಿದೆ. ಸ್ವತಃ ಕುಮಾರಸ್ವಾಮಿ ಅವರೇ ನಿಖಿಲ್‌ ಸ್ಪರ್ಧೆಯನ್ನು ಖಚಿತಪಡಿಸಿದ್ದಾರೆ. ನಿಖಿಲ್‌ ರಾಮನಗರ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆಂಬ ಪುಕಾರುಗಳಿದ್ದರೂ, ಎಲ್ಲಿಂದ ಕಣಕ್ಕಿಳಿಸಬೇಕೆಂಬುದನ್ನು ಪಕ್ಷವೇ ತೀರ್ಮಾನಿಸುತ್ತದೆಂದು ಕುಮಾರಸ್ವಾಮಿ ತಿಳಿಸಿದ್ದಾರೆ. ನಿಖಿಲ್‌ ಕುಮಾರಸ್ವಾಮಿ ಅವರನ್ನು ಹಲವು ಕ್ಷೇತ್ರಗಳಲ್ಲಿ ಸ್ಪರ್ಧಿಸುವಂತೆ ಕಾರ್ಯಕರ್ತರು ಕರೆಯುತ್ತಿದ್ದಾರೆ. ಅಂತಿಮವಾಗಿ ನಿಖಿಲ್‌ ಎಲ್ಲಿಂದ ಸ್ಪರ್ಧಿಸಬೇಕೆಂಬುದನ್ನು ಪಕ್ಷ ನಿರ್ಧರಿಸುತ್ತದೆ. 

ನಾನಂತು ಎಲ್ಲಾ ಕ್ಷೇತ್ರಗಳಲ್ಲೂ ಜೆಡಿಎಸ್‌ ಗೆಲ್ಲಿಸಿಕೊಂಡು ಬರುವಂತೆ ನಿಖಿಲ್‌ಗೆ ಸೂಚಿಸಿದ್ದೇನೆ ಎಂದು ರಾಮನಗರ ಕ್ಷೇತ್ರದಿಂದ ನಿಖಿಲ್‌ ಕುಮಾರಸ್ವಾಮಿ ಸ್ಪರ್ಧಿಸ್ತಾರಾ ಎಂಬ ಪತ್ರಕರ್ತರ ಪ್ರಶ್ನೆಗೆ ಕುಮಾರಸ್ವಾಮಿ ಶುಕ್ರವಾರ ಪ್ರತಿಕ್ರಿಯಿಸಿದರು. ಕಳೆದ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸಿ ಸೋಲುಂಡಿದ್ದ ನಿಖಿಲ್‌, ಆ ಬಳಿಕ ಜೆಡಿಎಸ್‌ ಯುವ ಘಟಕದ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದರು. ಕಳೆದ ಕೆಲ ಸಮಯದಿಂದ ರಾಮನಗರ ಕ್ಷೇತ್ರದಲ್ಲಿ ಹೆಚ್ಚೆಚ್ಚು ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಅವರು ಈ ಕ್ಷೇತ್ರದಿಂದಲೇ ಸ್ಪರ್ಧಿಸಲಿದ್ದಾರೆಂಬ ಊಹಾಪೋಹಗಳು ಎದ್ದಿದ್ದವು.

8 ಸಾವಿರ ಕೋಟಿ ಕೊಟ್ಟರೂ ಕೃತಜ್ಞರಾಗಲಿಲ್ಲ : ನಿಖಿಲ್‌ ಕುಮಾರಸ್ವಾಮಿ ಸೋಲಿಗೆ ಬೇಸರ

ರೈತರಿಗೆ ಅನ್ಯಾಯವಾದರೆ ಹೋರಾಟಕ್ಕೆ ಜೆಡಿಎಸ್‌ ಸಿದ್ಧ: ರಾಜ್ಯದ ಯಾವುದೇ ಭಾಗದಲ್ಲಿ ರೈತರಿಗೆ ಅನ್ಯಾಯವಾದರೆ ಅವರ ಪರ ಹೋರಾಟಕ್ಕೆ ದೇವೇಗೌಡರ ನೇತೃತ್ವದಲ್ಲಿ ಜೆಡಿಎಸ್‌ ಸದಾ ಸಿದ್ಧವಿದೆ ಎಂದು ಜೆಡಿಎಸ್‌ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಹೇಳಿದರು. ತಾಲೂಕಿನ ಕಗ್ಗುಂಡಿ ತಂಬಾಕು ಹರಾಜು ಮಾರುಕಟ್ಟೆಯಲ್ಲಿ ದರ ಕುಸಿತದಿಂದ ರೈತರು ರಸ್ತೆ ತಡೆ ನಡೆಸಿ ಪ್ರತಿಭಟಿಸಿದ ಹಿನ್ನೆಲೆ ಮಾರುಕಟ್ಟೆಆವರಣದಲ್ಲಿ ನಡೆದ ರೈತರ ಸಭೆ ಉದ್ದೇಶಿಸಿ ಅವರು ಮಾತನಾಡಿದರು.

Follow Us:
Download App:
  • android
  • ios