Asianet Suvarna News Asianet Suvarna News

ಕೇಂದ್ರ ಗೃಹ ಕಾರ್ಯದರ್ಶಿಗೆ ಕರೆ ಮಾಡಿ ಬೈದ ಪಾವಗಡ ಯುವಕ

ಪಾವಗಡ ತಾಲೂಕು ವೆಂಕಟಾಪುರ ಗ್ರಾಮದ ನಿರಂಜನ್ ಎಂಬಾತ ಕೆಲ ದಿನಗಳ ಹಿಂದೆ ಕೇಂದ್ರ ಗೃಹ ಇಲಾಖೆ ಕಾರ್ಯದರ್ಶಿಗೆ ಫೋನ್ ಮಾಡಿ ನಿಂದಿಸಿದ್ದ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಆತನನ್ನು ಹುಡುಕಿಕೊಂಡು ಬಂದ ದೆಹಲಿ ಪೊಲೀಸರು ನಿರಂಜನ್ ಮನೆ, ಸ್ನೇಹಿತರು ಹಾಗೂ ಗ್ರಾಮಸ್ಥರ ಬಳಿ ಆತನ ಬಗ್ಗೆ ಮಾಹಿತಿ ಕಲೆ ಹಾಕಿದ್ದಾರೆ. ಮನೆಯನ್ನೂ ಪರಿಶೀಲನೆ ನಡೆಸಿದ್ದಾರೆ.

Pavagada Origin Young Man Called to Union Home Secretary grg
Author
First Published Feb 13, 2024, 11:44 AM IST

ಪಾವಗಡ(ಫೆ.13):  ಕೇಂದ್ರ ಗೃಹ ಇಲಾಖೆ ಕಾರ್ಯದರ್ಶಿಗೆ ಕರೆ ಮಾಡಿ ನಿಂದಿಸಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಹುಡುಕಿಕೊಂಡು ದೆಹಲಿ ಪೊಲೀಸರು ಸೋಮವಾರ ಪಾವಗಡಕ್ಕೆ ಬಂದಿದ್ದು, ಆರೋಪಿಯ ಮನೆಯಲ್ಲಿ ಪರಿಶೀಲನೆ ನಡೆಸಿದ್ದಾರೆ.

ಪಾವಗಡ ತಾಲೂಕು ವೆಂಕಟಾಪುರ ಗ್ರಾಮದ ನಿರಂಜನ್ (40) ಎಂಬಾತ ಕೆಲ ದಿನಗಳ ಹಿಂದೆ ಕೇಂದ್ರ ಗೃಹ ಇಲಾಖೆ ಕಾರ್ಯದರ್ಶಿಗೆ ಫೋನ್ ಮಾಡಿ ನಿಂದಿಸಿದ್ದ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಆತನನ್ನು ಹುಡುಕಿಕೊಂಡು ಬಂದ ದೆಹಲಿ ಪೊಲೀಸರು ನಿರಂಜನ್ ಮನೆ, ಸ್ನೇಹಿತರು ಹಾಗೂ ಗ್ರಾಮಸ್ಥರ ಬಳಿ ಆತನ ಬಗ್ಗೆ ಮಾಹಿತಿ ಕಲೆ ಹಾಕಿದ್ದಾರೆ. ಮನೆಯನ್ನೂ ಪರಿಶೀಲನೆ ನಡೆಸಿದ್ದಾರೆ.

ಸುತ್ತೂರು ಜಾತ್ರಾ ಮಹೋತ್ಸವಕ್ಕೆ ವರ್ಣರಂಜಿತ ತೆರೆ

ಎಂಜಿನಿಯರ್‌ ಪದವೀಧರನಾಗಿರುವ ನಿರಂಜನ್ ಕೆಲಸವಿಲ್ಲದೆ ನಿರುದ್ಯೋಗಿಯಾ ಗಿದ್ದು ಸದಾ ಮನೆಯಲ್ಲೇ ಇರುತ್ತಿದ್ದ ಎಂಬ ಮಾಹಿತಿ ದೊರಕಿದೆ. ಕೆಲಸ ಸಿಗದ ಹಿನ್ನೆಲೆಯಲ್ಲಿ ಮನನೊಂದು ಕೇಂದ್ರ ಗೃಹ ಇಲಾಖೆ ಕಾರ್ಯದರ್ಶಿಗೆ ಕರೆ ಮಾಡಿ ನಿಂದಿಸಿದ್ದಾನೆ ಎಂದು ಹೇಳಲಾಗಿದೆ. ಸ್ಥಳೀಯ ಪೊಲೀಸರ ಸಹಾಯದಿಂದ ಆರೋಪಿ ಮನೆಯಲ್ಲಿ ಪರಿಶೀಲನೆ ನಡೆದಿದೆ.

Follow Us:
Download App:
  • android
  • ios