Vijayapura: ಅನ್ನಭಾಗ್ಯ ಯೋಜನೆಯಡಿ ಜಿಲ್ಲೆಯ 11.94 ಲಕ್ಷ ಪಡಿತರ ಸದಸ್ಯರಿಗೆ ಹಣ ಸಂದಾಯ!

ಅನ್ನಭಾಗ್ಯ ಯೋಜನೆಯಡಿ 2023ನೇ ಜೂನ್ ತಿಂಗಳಲ್ಲಿ ಪಡಿತರ ವಸ್ತುಗಳನ್ನು ಪಡೆದಿರುವ ಪಡಿತರ ಚೀಟಿದಾರರಿಗೆ ಈ ತಿಂಗಳಲ್ಲಿ 5 ಕೆಜಿ ಅಕ್ಕಿಯ ಹಣವನ್ನು ಆಯಾ ಪಡಿತರ ಚೀಟಿದಾರರ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ಡಿಬಿಟಿ ಮೂಲಕ ಹಣ ವರ್ಗಾವಣೆ ಮಾಡಲಾಗುತ್ತಿದೆ.

Payment of money to 11 94 lakh ration members of vijayapura district under Annabhagya Yojana gvd

ಷಡಕ್ಷರಿ‌ ಕಂಪೂನವರ್, ಏಷ್ಯಾನೆಟ್ ಸುವರ್ಣ ನ್ಯೂಸ್, ವಿಜಯಪುರ

ವಿಜಯಪುರ (ಜು.31): ಅನ್ನಭಾಗ್ಯ ಯೋಜನೆಯಡಿ 2023ನೇ ಜೂನ್ ತಿಂಗಳಲ್ಲಿ ಪಡಿತರ ವಸ್ತುಗಳನ್ನು ಪಡೆದಿರುವ ಪಡಿತರ ಚೀಟಿದಾರರಿಗೆ ಈ ತಿಂಗಳಲ್ಲಿ 5 ಕೆಜಿ ಅಕ್ಕಿಯ ಹಣವನ್ನು ಆಯಾ ಪಡಿತರ ಚೀಟಿದಾರರ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ಡಿಬಿಟಿ ಮೂಲಕ ಹಣ ವರ್ಗಾವಣೆ ಮಾಡಲಾಗುತ್ತಿದ್ದು, ಜಿಲ್ಲೆಯ ಅರ್ಹ 345146 ಪಡಿತರ ಚೀಟಿಗಳ ಪೈಕಿ 11,94,067 ಸದಸ್ಯರಿಗೆ 170 ರೂ. ಒಟ್ಟು ಹಣ 20.29 ಕೋಟಿ ರೂ.ಗಳನ್ನು ಆಯಾ ಬ್ಯಾಂಕ್ ಖಾತೆಗೆ ಡಿಬಿಟಿ ಮೂಲಕ ವರ್ಗಾವಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. 

ಪ್ರತಿ ಹೆಚ್ಚುವರಿ ಸದಸ್ಯರಿಗೆ 170 ರೂಪಾಯಿ: ನಾಲ್ಕು ಮತ್ತು ನಾಲ್ಕಕ್ಕಿಂತ ಹೆಚ್ಚಿನ ಸದಸ್ಯರು ಇರುವ ಅಂತ್ಯೋದಯ  ಪಡಿತರ ಚೀಟಿಗೆ ಪ್ರತಿ ಹೆಚ್ಚುವರಿ ಸದಸ್ಯರಿಗೆ 170 ರೂ.ಗಳಂತೆ ಹಣ ವರ್ಗಾವಣೆ ಮಾಡಲಾಗುವುದು. ಆದ್ಯತಾ ಕುಟುಂಬ ಪಡಿತರ ಚೀಟಿ (ಬಿಪಿಎಲ್) ಪಡಿತರ ಚೀಟಿಯಲ್ಲಿನ ಪ್ರತಿ ಸದಸ್ಯರಿಗೆ 170 ರೂ. ರಂತೆ ಹಣ ವರ್ಗಾವಣೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. 

ನಗರಸಭೆಯ ಭ್ರಷ್ಟಾಚಾರ ಕ್ಲೀನ್‌ ಮಾಡುವೆ: ಶಾಸಕ ಪ್ರದೀಪ್‌ ಈಶ್ವರ್‌

ಹಣ ಪಡೆಯಲು ಆದಷ್ಟೂ ಬೇಗನೆ ಇ-ಕೆವೈಸಿ ಮಾಡಿಸಿ: ಎಲ್ಲ ಅಂತ್ಯೋದಯ ಅನ್ನ ಯೋಜನೆ ಹಾಗೂ ಆದ್ಯತಾ (ಬಿಪಿಎಲ್) ಪಡಿತರ ಚೀಟಿಯಲ್ಲಿನ ಮುಖ್ಯಸ್ಥರು ರಾಷ್ಟ್ರೀಕೃತ ಬ್ಯಾಂಕ್ ಖಾತೆ ಹೊಂದಿರಬೇಕು ಹಾಗೂ ಖಾತೆಯ ಇ-ಕೆವೈಸಿ ಆಗಿರತಕ್ಕದ್ದು. ಇ-ಕೆವೈಸಿ ಆಗದೇ ಇದ್ದಲ್ಲಿ ಕೂಡಲೇ ಆಯಾ ಬ್ಯಾಂಕಿನ್ ಶಾಖೆಯನ್ನು ಸಂಪರ್ಕಿಸಿ ಇ-ಕೆವೈಸಿಯನ್ನು ಮಾಡಿಸಿ ಖಾತೆ ಚಾಲ್ತಿಯಲ್ಲಿಟ್ಟುಕೊಳ್ಳುವಂತೆ ಹಾಗೂ ಬ್ಯಾಂಕ್ ಖಾತೆ ಹೊಂದದೇ ಇದ್ದಲ್ಲಿ ಅಂಚೆ ಕಚೇರಿಯಲ್ಲಿ ಐಪಿಪಿಬಿ ಬ್ಯಾಂಕ್ ಖಾತೆಯನ್ನು ಹೊಂದಬಹುದಾಗಿದ್ದು, ಪಡಿತರ ಚೀಟಿದಾರರು ಹೆಚ್ಚಿನ ಮಾಹಿತಿಗಾಗಿ ಆಯಾ ನ್ಯಾಯಬೆಲೆ ಅಂಗಡಿಕಾರರನ್ನು ಸಂಪರ್ಕಿಸುವಂತೆ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ಮೂಲಕ ತಿಳಿಸಿದೆ.

Latest Videos
Follow Us:
Download App:
  • android
  • ios