ಉಡುಪಿ [ಡಿ.29]: ಹಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪೇಜಾವರ ಶ್ರೀಗಳನ್ನು ಆಸ್ಪತ್ರೆಯಿಂದ ಮಠಕ್ಕೆ ಶಿಫ್ಟ್ ಮಾಡಲಾಗಿದೆ. 

"

ಪೇಜಾವರ ಶ್ರೀಗಳ ಆರೋಗ್ಯದಲ್ಲಿ ಯಾವುದೇ ಸುಧಾರಣೆ ಕಂಡು ಬಾರದ ಹಿನ್ನೆಲೆಯಲ್ಲಿ ವೈದ್ಯರ ನೇತೃತ್ವದಲ್ಲಿಯೇ ಆಸ್ಪತ್ರೆಯಿಂದ ಮಠಕ್ಕೆ ಕರೆದೊಯ್ಯಲಾಗಿದೆ. 

ವೆಂಟಿಲೇಟರ್ ವ್ಯವಸ್ಥೆಯನ್ನು ಅಳವಡಿಸಿಯೇ ಆ್ಯಂಬುಲೆನ್ಸ್ ಮೂಲಕ ಮಠಕ್ಕೆ ಕರೆದೊಯ್ಯಲಾಗಿದೆ. 

ಪೇಜಾವರ ಶ್ರೀಗಳ ಬಗ್ಗೆ ಮತ್ತಷ್ಟು ಮಾಹಿತಿ ಇಲ್ಲಿದೆ

ಈ ನಿಟ್ಟಿನಲ್ಲಿ ಮಠದ ಸುತ್ತಮುತ್ತಲಿನ ಪ್ರದೇಶದಲ್ಲಿ ಬಿಗಿ ಭದ್ರತೆ ವ್ಯವಸ್ಥೆ ಮಾಡಲಾಗಿದೆ. ಅಲ್ಲದೇ ಸ್ವಾಮೀಜಿಗಳನ್ನು ಮಠಕ್ಕೆ ಸ್ಥಳಾಂತರ ಮಾಡಿದ ಹಿನ್ನೆಲೆ ಯಾವುದೇ ಭಕ್ತರಿಗೆ ಮಠದ ಭೇಟಿಗೆ ಅವಕಾಶ ಇರುವುದಿಲ್ಲ. 

ಪೇಜಾವರ ಶ್ರೀ ಸ್ಥಿತಿ ಮತ್ತಷ್ಟು ಗಂಭೀರ!..

ಎಂಟು ದಿನಗಳ ಹಿಂದೆ ಆಸ್ಪತ್ರೆಗೆ: ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಪೇಜಾವರ ಶ್ರೀಗಳು ಡಿ.20ರಂದು ಮುಂಜಾನೆ 5ಕ್ಕೆ ಮಣಿಪಾಲ ಆಸ್ಪತ್ರೆಗೆ ಪ್ರಜ್ಞಾಹೀನ ಸ್ಥಿತಿಯಲ್ಲಿ ದಾಖಲಾಗಿದ್ದರು. ಅಂದಿನಿಂದ ಈವರೆಗೆ ಅವರಿಗೆ ಪ್ರಜ್ಞೆ ಮರಳಿ ಬಂದಿಲ್ಲ. ನ್ಯುಮೋನಿಯಾ ನಿಯಂತ್ರಣಕ್ಕೆ ಬಂದರೂ, ದಿನದಿಂದ ದಿನಕ್ಕೆ ಅವರು ಆರೋಗ್ಯ ಸ್ಥಿತಿ ಹದಗೆಟ್ಟು, ಅವರನ್ನು ಪ್ರಜ್ಞೆ ಮರಳಿಸುವ ಪ್ರಯತ್ನಗಳೆಲ್ಲವೂ ವಿಫಲಗೊಂಡಿವೆ.

 ಕ್ಷಣ ಕ್ಷಣದ ಪೇಜಾವರ ಶ್ರೀಗಳ ಆರೋಗ್ಯ ಸಂಬಂಧಿಸಿದ ಅಪ್ಡೇಟ್‌ಗಾಗಿ ಇಲ್ಲಿ ಕ್ಲಿಕ್ಕಿಸಿ

ಶುಕ್ರವಾರ ಆರೋಗ್ಯ ತೀವ್ರ ಕುಸಿದಿದ್ದು, ಈಗ ಅವರ ಮೆದುಳು ಕಾರ್ಯ ಕುಂಠಿತಗೊಂಡಿದೆ. ಅವರಿನ್ನೂ ಕೃತಕ ಉಸಿರಾಟದ ವ್ಯವಸ್ಥೆಯಲ್ಲಿದ್ದು, ಉಸಿರಾಟದ ಗತಿ ಕೂಡ ಕುಸಿದಿದೆ ಎಂದು ವೈದ್ಯರು ತಿಳಿಸಿದ್ದಾರೆ.