ಪೆನ್‌ಡ್ರೈವ್ ಸಂತ್ರಸ್ತೆ ಅಪಹರಣ ಪ್ರಕರಣ: ಎಚ್‌.ಡಿ.ರೇವಣ್ಣಗೆ ಹೈಕೋರ್ಟ್‌ ನೋಟಿಸ್‌

ಲೈಂಗಿಕ ಸಂತ್ರಸ್ತ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿ ಇದೀಗ ಜಾಮೀನಿನ ಮೇಲೆ ಹೊರಬಂದಿರುವ ಮಾಜಿ ಸಚಿವ ಎಚ್‌.ಡಿ.ರೇವಣ್ಣ ಅವರ ಜಾಮೀನು ರದ್ದುಪಡಿಸುವಂತೆ ಕೋರಿ ಎಸ್‌ಐಟಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿರುವ ಹಿನ್ನೆಲೆ ಹೈಕೋರ್ಟ್‌ ರೇವಣ್ಣ ಅವರಿಗೆ ನೋಟಿಸ್‌ ಜಾರಿ ಮಾಡಿದೆ. 

Pen drive victim abduction case High Court notice to HD Revanna gvd

ಹಾಸನ (ಜೂ.03): ಲೈಂಗಿಕ ಸಂತ್ರಸ್ತ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿ ಇದೀಗ ಜಾಮೀನಿನ ಮೇಲೆ ಹೊರಬಂದಿರುವ ಮಾಜಿ ಸಚಿವ ಎಚ್‌.ಡಿ.ರೇವಣ್ಣ ಅವರ ಜಾಮೀನು ರದ್ದುಪಡಿಸುವಂತೆ ಕೋರಿ ಎಸ್‌ಐಟಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿರುವ ಹಿನ್ನೆಲೆ ಹೈಕೋರ್ಟ್‌ ರೇವಣ್ಣ ಅವರಿಗೆ ನೋಟಿಸ್‌ ಜಾರಿ ಮಾಡಿದೆ. ಜಾಮೀನು ಪಡೆದು ಹೊರಬಂದ ನಂತರದಲ್ಲಿ ಹೆಚ್ಚಾಗಿ ದೇವಾಲಯಗಳನ್ನು ಸುತ್ತುತ್ತಿರುವ ಎಚ್‌.ಡಿ.ರೇವಣ್ಣ ಅವರು ಕೂಡ ಹೊಳೆನರಸೀಪುರದ ಲಕ್ಷ್ಮಿನರಸಿಂಹಸ್ವಾಮಿ, ಹರದನಹಳ್ಳಿಯ ದೇವೇಶ್ವರ ಹಾಗೂ ಮಾವಿನಕೆರೆ ಬೆಟ್ಟದ ರಂಗನಾಥಸ್ವಾಮಿ ದೇವಾಲಯಗಳಿಗೆ ಭೇಟಿ ನೀಡಿದ್ದರು. 

ಇದಾದ ನಂತರ ಹರದನಹಳ್ಳಿಯ ತಮ್ಮ ಮನೆಯಲ್ಲಿ ಜಿಲ್ಲೆಯ ಜೆಡಿಎಸ್‌ ಶಾಸಕರೊಂದಿಗೆ ಸಭೆ ನಡೆಸುವ ಸಂದರ್ಭದಲ್ಲಿ ಹೊಳೇನರಸೀಪುರ ಪೊಲೀಸ್‌ ಠಾಣೆ ಸಬ್‌ ಇನ್ಸ್‌ಪೆಕ್ಟರ್‌ ಅಜಯ್‌ ಅವರು ಈ ನೋಟಿಸ್‌ ಅನ್ನು ರೇವಣ್ಣ ಅವರಿಗೆ ತಲುಪಿಸಿದರು. ನೋಟಿಸ್‌ ಪ್ರಕಾರ ರೇವಣ್ಣ ಅವರು ಇನ್ನು ಐದು ದಿನಗಳ ಒಳಗಾಗಿ ವಕೀಲರ ಮೂಲಕ ಕೋರ್ಟ್‌ಗೆ ಹಾಜರಾಗುವಂತೆ ಅದರಲ್ಲಿ ತಿಳಿಸಲಾಗಿದೆ. ಒಂದು ವೇಳೆ ಎಸ್‌ಐಟಿ ಮೇಲ್ಮನವಿಯನ್ನು ಹೈಕೋರ್ಟ್‌ನಲ್ಲಿ ಪರಿಗಣಿಸಿದ್ದೇ ಆದಲ್ಲಿ ರೇವಣ್ಣ ಅವರು ಮತ್ತೆ ಜೈಲು ಸೇರಬೇಕಾಗುತ್ತದೆ ಎನ್ನಲಾಗಿದೆ.

ದೇಶ ಉಳಿಯಲು ಮೋದಿ ಪ್ರಧಾನಿ ಆಗಬೇಕು: ನಮ್ಮ ದೇಶ ಉಳಿಯಬೇಕಾದರೆ ಮೋದಿಯವರು ಪ್ರಧಾನ ಮಂತ್ರಿ ಆಗಬೇಕು. ಶ್ರೀ ಲಕ್ಷ್ಮೀನರಸಿಂಹ ಇರುವವರೆಗೂ ನಮಗೇನು ತೊಂದರೆಯಿಲ್ಲ, ಮೂರು ಕ್ಷೇತ್ರ ಗೆಲ್ಲುತ್ತೇವೆ ಎಂದು ಶಾಸಕ ಎಚ್.ಡಿ.ರೇವಣ್ಣ ವಿಶ್ವಾಸ ವ್ಯಕ್ತಪಡಿಸಿದರು. ಪಟ್ಟಣದ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ನಂತರ ಮಾತನಾಡಿದ ಅವರು, ‘ಶಿಕ್ಷಕರ ಕ್ಷೇತ್ರದ ಚುನಾವಣೆಗಾಗಿ ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ನಮ್ಮ ಶಾಸಕರ ಜತೆಗೂಡಿ ಖುದ್ದಾಗಿ ಎಲ್ಲಾ ಕ್ಷೇತ್ರಗಳಲ್ಲೂ ಪ್ರಚಾರ ಮಾಡಿದ್ದೇವೆ. ಸ್ವಾತಂತ್ರ್ಯ ಬಂದ 75 ವರ್ಷಗಳಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಕುಮಾರಸ್ವಾಮಿ ಅವರು ಹೆಚ್ಚು ಒತ್ತು ಕೊಟ್ಟಿದ್ದಾರೆ.

ಕೇಂದ್ರದಲ್ಲಿ ಮತ್ತೆ ಬಿಜೆಪಿ ಸರ್ಕಾರ: ಕಾಂಗ್ರೆಸ್‌ ಶಾಸಕ ಕೊತ್ತೂರು ಮಂಜುನಾಥ್

1600  ಪ್ರೌಢಶಾಲೆ, 600 ಪಿಯು ಕಾಲೇಜು, 250 ಪ್ರಥಮ ದರ್ಜೆ ಕಾಲೇಜು ಸ್ಥಾಪಿಸಿದ್ದಾರೆ. ಜತೆಗೆ ಏಳೆಂಟು ಸಾವಿರ ಕೋಟಿ ರು. ಶಾಲಾ ಕಾಲೇಜುಗಳ ಕಟ್ಟಡ ನಿರ್ಮಾಣಕ್ಕೆ ಕೊಟ್ಟಿದ್ದಾರೆ. 4800 ಶಿಕ್ಷಕರು, 1600 ಪಿಯು ಕಾಲೇಜಿನ ಉಪನ್ಯಾಸಕರನ್ನು ಕುಮಾರಸ್ವಾಮಿ, ಯಡಿಯೂರಪ್ಪ ಇದ್ದಾಗ ನೇಮಕ ಮಾಡಿದ್ದಾರೆ. ಈಗ ಜೆಡಿಎಸ್-ಬಿಜೆಪಿ ಸೇರಿ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆ ಎದುರಿಸುತ್ತಿದ್ದೇವೆ, ನಮ್ಮ ಪಕ್ಷದ ಅಭ್ಯರ್ಥಿ ವಿವೇಕಾನಂದ ಗೆದ್ದೇ ಗೆಲ್ಲುತ್ತಾರೆ’ ಎಂದು ನುಡಿದರು. ಲೋಕಸಭೆ ಚುನಾವಣೋತ್ತರ ಸಮೀಕ್ಷೆ ವಿಚಾರದ ಕುರಿತ ಪ್ರಶ್ನೆಗೆ ಉತ್ತರಿಸಲು ನಿರಾಕರಿಸಿದರು. ಬಳಿಕ ಜೆಡಿಎಸ್ ಎರಡರಿಂದ ಮೂರು ಗೆಲವು ಸಾಧಿಸುತ್ತದೆ ಎಂದು ಸಮೀಕ್ಷೆ ಕುರಿತ ಪ್ರಶ್ನೆಗೆ ಉತ್ತರಿಸಿ, ‘ದೇವರಿದ್ದಾರೆ’ ಎಂದು ಪ್ರತಿಕ್ರಿಯಿಸಿದರು. ಬೇರೆ ಯಾವುದೇ ಪ್ರಶ್ನೆಗಳಿಗೆ ಅವಕಾಶವಾಗದಂತೆ ಕಾರಿನಲ್ಲಿ ತೆರಳಿದರು.

Latest Videos
Follow Us:
Download App:
  • android
  • ios