ಮುಂಬರುವ ಲೋಕಸಭಾ ಚುನಾವಣೆಯಲ್ಲಿ ತುಮಕೂರು ಕ್ಷೇತ್ರದಿಂದ ಮಾಜಿ ಪ್ರಧಾನಿ ದೇವೇಗೌಡರು ಸ್ಪರ್ಧಿಸಿದರೆ ಜನ ಮತ ಹಾಕುವುದಿಲ್ಲ ಎಂದು ಸಂಸದ ಜಿ.ಎಸ್‌. ಬಸವರಾಜು ತಿಳಿಸಿದ್ದಾರೆ.

ತುಮಕೂರು : ಮುಂಬರುವ ಲೋಕಸಭಾ ಚುನಾವಣೆಯಲ್ಲಿ ತುಮಕೂರು ಕ್ಷೇತ್ರದಿಂದ ಮಾಜಿ ಪ್ರಧಾನಿ ದೇವೇಗೌಡರು ಸ್ಪರ್ಧಿಸಿದರೆ ಜನ ಮತ ಹಾಕುವುದಿಲ್ಲ ಎಂದು ಸಂಸದ ಜಿ.ಎಸ್‌. ಬಸವರಾಜು ತಿಳಿಸಿದ್ದಾರೆ.

ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ರಕ್ತ ಕೊಟ್ಟರೂ ಕೊಟ್ಟೆನೂ ತುಮಕೂರಿಗೆ ಹೇಮಾವತಿ ನೀರು ಕೊಡುವುದಿಲ್ಲ ಎಂದಿದ್ದ ದೇವೇಗೌಡರನ್ನು ಒಮ್ಮೆ ಜನ ಸೋಲಿಸಿದ್ದಾರೆ ಅವರ ಸ್ವಂತ ನೆಂಟರೂ ಹಾಗೆಯೇ ಒಬ್ಬ ಗೌಡರೂ ಕೂಡ ವೋಟ್ ಹಾಕುವುದಿಲ್ಲ ಎಂದರು.

ಹೇಮಾವತಿ ನೀರಿನ ವಿಚಾರದಲ್ಲಿ ದೇವೇಗೌಡರು ತುಮಕೂರಿಗೆ ಎಂದೂ ಕಂಡರಿಯದ ಮೋಸ ಮಾಡಿದ್ದಾರೆ. ಯಾರಿಗಾದರೂ ವೋಟ್ ಹಾಕಲಿ. ದೇವೇಗೌಡರಿಗೆ ವೋಟ್ ಹಾಕಬಾರದು. ದೇವೇಗೌಡರಿಗೆ ವೋಟ್ ಹಾಕಿದರೆ ಜಿಲ್ಲೆಯ ಜನತೆ ಪಾಪ ಮಾಡಿದ ಹಾಗೆ ಎಂದರು.

ಕಾಂಗ್ರೆಸ್‌ನವರ ನಿರ್ಲಕ್ಷ್ಯದಿಂದಲೇ ತಮಿಳುನಾಡಿಗೆ ಕಾವೇರಿ ನೀರು ಹರಿದಿದೆ. ತಜ್ಞರನ್ನು ಕಳುಹಿಸಿ ನೀರಿನ ಲೆಕ್ಕಾಚಾರ ಮಾಡಬೇಕಿತ್ತು ಎಂದರು.

ಕಾಂಗ್ರೆಸ್‌ನವರು ತಮಿಳುನಾಡಿನವರನ್ನು ಎದುರು ಹಾಕಿಕೊಳ್ಳಲು ಆಗುತ್ತಿಲ್ಲ, ಅವರ ನೆಂಟಸ್ತನ ಬೇಕಾಗಿದೆ ಎಂದು ವ್ಯಂಗ್ಯವಾಡಿದರು. ಕಾಂಗ್ರೆಸ್‌ನವರು ಪ್ರತಿಯೊಂದಕ್ಕೂ ದೆಹಲಿಯವರನ್ನು ಕೇಳಬೇಕು. ಹೀಗಾಗಿ ನೀರು ಬಿಡಲಾಗಿದೆ. ರಾಜ್ಯದ ಜಲಾಶಯಗಳ ಲೆಕ್ಕ ಕೊಟ್ಟು ಮಳೆ ಅಭಾವದ ಬಗ್ಗೆ ಹೇಳಬೇಕಿತ್ತು. ಅದನ್ನು ಸಹ ಕಾಂಗ್ರೆಸ್‌ನವರು ಮಾಡಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಳೆದ ಲೋಕಸಭಾ ಚುನಾವಣೆಯಲ್ಲಿ ನನ್ನ ಗೆಲುವಿಗೆ ವಿ. ಸೋಮಣ್ಣ ದುಡ್ಡು ಕೊಟ್ಟಿದ್ದರು ನನ್ನ ಬಳಿ ದುಡ್ಡೇ ಇರಲಿಲ್ಲ ಎಂದರು.

ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ : ಸ್ವಾಗತ

ಬೆಂಗಳೂರು (ಸೆ.19): ವಿಧಾನಸಭೆ ಮತ್ತು ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ನೀಡುವ ಮಸೂದೆ ಲೋಕಸಭೆಯಲ್ಲಿ ಮಂಡನೆ ಆಗುತ್ತಿರುವ ಹಿನ್ನೆಲೆ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಮುಕ್ತಕಂಠದಿಂದ ಸ್ವಾಗತಿಸಿದ್ದಾರೆ.

ಮಹಿಳಾ ಮೀಸಲಾತಿ ನೀಡುವ ವಿಚಾರ ಸಂಬಂಧ ##ಮಹಿಳಾಮೀಸಲಾತಿ #WomenReservationBill ಹ್ಯಾಷ್‌ಟ್ಯಾಗ ಬಳಸಿ ಸುದೀರ್ಘವಾಗಿ ಟ್ವೀಟ್ ಮಾಡಿರುವ ಅವರು, ಹೆಚ್‌ಡಿ ದೇವೇಗೌಡ ಅವರು ಪ್ರಧಾನಮಂತ್ರಿಗಳಾಗಿದ್ದ ಸಂದರ್ಭದಲ್ಲಿಯೇ 1996 ಸೆಪ್ಟೆಂಬರ್ 12ರಂದು ರಾಜ್ಯಸಭೆಯಲ್ಲಿ ಈ ಐತಿಹಾಸಿಕ ಬಿಲ್ ಅನ್ನು ಮಂಡಿಸಲಾಗಿತ್ತು. ಆದರೆ, ಅವರ ಸಂಯುಕ್ತರಂಗ ಸರಕಾರದ ಮೈತ್ರಿಕೂಟದ ಕೆಲ ಮಿತ್ರಪಕ್ಷಗಳೇ ತೀವ್ರ ವಿರೋಧ ವ್ಯಕ್ತಪಡಿಸಿದ ಕಾರಣಕ್ಕೆ ಆ ಮಸೂದೆ ಅಂಗೀಕಾರ ಆಗಲಿಲ್ಲ. ಇವತ್ತು ಕಾಂಗ್ರೆಸ್ಸಿನ I.N.D.I.A. ಮೈತ್ರಿಕೂಟವನ್ನು ಸೇರಿಕೊಂಡಿರುವ ನಾಯಕರೇ ಅಂದು ಈ ಮಸೂದೆಗೆ ತಡೆ ಒಡ್ಡಿದ್ದರು ಎಂದು ಬಹಿರಂಗಪಡಿಸಿದ್ದಾರೆ.

ಕೇಂದ್ರ ಸಚಿವ ಸಂಪುಟ ಸಭೆ ಅಂತ್ಯ, ಮಹಿಳಾ ಮೀಸಲಾತಿ ಮಸೂದೆಗೆ ಗ್ರೀನ್ ಸಿಗ್ನಲ್?

27 ವರ್ಷಗಳ ನಂತರ ಮಾನ್ಯ ದೇವೇಗೌಡರ ಕನಸಿಗೆ ಮರುಜೀವ ಬಂದಿರುವುದು ನನಗೆ ಸಂತೋಷ ಉಂಟು ಮಾಡಿದೆ ಎಂದಿರುವ ಅವರು, 1995ರಲ್ಲಿ ಮಾನ್ಯ ದೇವೇಗೌಡರು ಕರ್ನಾಟಕದ ಮುಖ್ಯಮಂತ್ರಿಗಳಾಗಿದ್ದಾಗ ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಮೀಸಲು ನೀಡಿ, ಅಧಿಕಾರ ನಡೆಸುವ ಹಕ್ಕು ಕಲ್ಪಿಸಿ ಮಹಿಳಾ ಸಬಲೀಕರಣದ ಸುವರ್ಣ ಅಧ್ಯಾಯಕ್ಕೆ ನಾಂದಿ ಹಾಡಿದ್ದರು. ಅಂದು ನಮ್ಮ ರಾಜ್ಯದಲ್ಲಿ ಘಟಿಸಿದ ಈ ಕ್ರಾಂತಿಕಾರಿ ವಿದ್ಯಮಾನವನ್ನು ಇಡೀ ದೇಶವೇ ಬೆರಗು ಕಂಗಳಿಂದ ನೋಡಿತ್ತು. ಇಂದು ಮಹಿಳಾ ಮೀಸಲು ಮಸೂದೆ ಲೋಕಸಭೆಯಲ್ಲಿ ಅಂಗೀಕಾರ ಆಗುವುದು ಖಚಿತವಾಗಿದ್ದು, ಈ ಮೂಲಕ ಮಾಜಿ ಪ್ರಧಾನಿಗಳ ಕನಸು ನನಸಾಗುತ್ತಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಮಹಿಳೆಯರಿಗೆ ಸಮಾನ ಹಕ್ಕು, ಅವಕಾಶಗಳನ್ನು ಕಲ್ಪಿಸುವುದು ಇಂದಿನ ತುರ್ತು. ಮಾನ್ಯ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ, ಮತ್ತವರ ಸಂಪುಟ ಕೈಗೊಂಡ ನಿರ್ಧಾರ ಶ್ಲಾಘನೀಯವಾಗಿದೆ.. ರಾಜಕೀಯಕ್ಕೆ ಅತೀತವಾಗಿ ಈ ಮಸೂದೆಯನ್ನು ಎಲ್ಲಾ ಪಕ್ಷಗಳು ಬೆಂಬಲಿಸಬೇಕು ಎಂದು ಮನವಿ ಮಾಡಿದ್ದಾರೆ. 

ಇಂದಿನಿಂದ ಸಂಸತ್ ವಿಶೇಷ ಅಧಿವೇಶನ: ಹಲವು ಅಚ್ಚರಿಯ ನಿರ್ಧಾರಗಳ ಸಾಧ್ಯತೆ