ಸರ್ಕಾರದ ಗ್ಯಾರಂಟಿ ಕಾರ್ಡ್‌ ಯೋಜನೆಗಾಗಿ ಜನರು ಆಧಾರ್‌ ಕಾರ್ಡ್‌ನಲ್ಲಿನ ತಿದ್ದುಪಡಿ ಮಾಡಿಸಲು ಮುಂದಾಗಿದ್ದಾರೆ. ಆದರೆ, ತಾಲೂಕಿನಲ್ಲಿ ಮುಖ್ಯ ಅಂಚೆ ಕಚೇರಿ ಮತ್ತು ನೆಮ್ಮದಿ ಕೇಂದ್ರದಲ್ಲಿ ಮಾತ್ರ ಆಧಾರ್‌ ನೋಂದಣಿ, ತಿದ್ದುಪಡಿ ಮಾಡುತ್ತಿದ್ದಾರೆ. ಇದಕ್ಕೆ ಟೋಕನ್‌ ನೀಡುವ ವ್ಯವಸ್ಥೆ ಇದ್ದು ಶನಿವಾರ ನೂರಾರು ಜನರು ಟೋಕನ್‌ ಪಡೆಯಲು ಸರದಿ ಸಾಲಿನಲ್ಲಿ ನಿಂತಿದ್ದರು. ಎಲ್ಲರಿಗೂ ಟೋಕನ್‌ ನೀಡಲಾಗಿದೆ. 

ಭಟ್ಕಳ(ಆ.13): ಪಟ್ಟಣದ ಮುಖ್ಯ ಅಂಚೆ ಕಚೇರಿಯಲ್ಲಿ ಆಧಾರ್‌ ಕಾರ್ಡ್‌ ನೋಂದಣಿ ಮತ್ತು ತಿದ್ದುಪಡಿಗಾಗಿ ಶನಿವಾರ ಟೋಕನ್‌ ಪಡೆಯಲು ನೂರಾರು ಜನರು ಸರದಿ ಸಾಲಿನಲ್ಲಿ ನಿಂತಿದ್ದು, ತಾಲೂಕಿನಲ್ಲಿ ಆಧಾರ್‌ ಕಾರ್ಡ್‌ ಸಮಸ್ಯೆ ಮುಂದುವರಿದಿದೆ.

ಸರ್ಕಾರದ ಗ್ಯಾರಂಟಿ ಕಾರ್ಡ್‌ ಯೋಜನೆಗಾಗಿ ಜನರು ಆಧಾರ್‌ ಕಾರ್ಡ್‌ನಲ್ಲಿನ ತಿದ್ದುಪಡಿ ಮಾಡಿಸಲು ಮುಂದಾಗಿದ್ದಾರೆ. ಆದರೆ, ತಾಲೂಕಿನಲ್ಲಿ ಮುಖ್ಯ ಅಂಚೆ ಕಚೇರಿ ಮತ್ತು ನೆಮ್ಮದಿ ಕೇಂದ್ರದಲ್ಲಿ ಮಾತ್ರ ಆಧಾರ್‌ ನೋಂದಣಿ, ತಿದ್ದುಪಡಿ ಮಾಡುತ್ತಿದ್ದಾರೆ. ಇದಕ್ಕೆ ಟೋಕನ್‌ ನೀಡುವ ವ್ಯವಸ್ಥೆ ಇದ್ದು ಶನಿವಾರ ನೂರಾರು ಜನರು ಟೋಕನ್‌ ಪಡೆಯಲು ಸರದಿ ಸಾಲಿನಲ್ಲಿ ನಿಂತಿದ್ದರು. ಎಲ್ಲರಿಗೂ ಟೋಕನ್‌ ನೀಡಲಾಗಿದೆ ಎಂದು ತಿಳಿದು ಬಂದಿದೆ.

ಉತ್ತರ ಕನ್ನಡ: ಮೀನುಗಾರಿಕೆಗೆ ಕಾರ್ಮಿಕರ ಸಮಸ್ಯೆ, ಪರಿಹಾರ ನೀಡಲು ಸರ್ಕಾರಕ್ಕೆ ಮನವಿ

ಭಟ್ಕಳದಲ್ಲಿ ಆಧಾರ್‌ ಹೊಸ ನೋಂದಣಿ, ತಿದ್ದುಪಡಿಗೆ ಜನರು ಕಳೆದ ಐದಾರು ವರ್ಷಗಳಿಂದ ಪರದಾಡುತ್ತಿದ್ದಾರೆ. ನೆಮ್ಮದಿ ಕೇಂದ್ರ ಮತ್ತು ಮುಖ್ಯ ಅಂಚೆ ಕಚೇರಿ ಹೊರತುಪಡಿಸಿ ಬೇರೆ ಎಲ್ಲೂ ಆಧಾರ್‌ ನೋಂದಣಿ, ತಿದ್ದುಪಡಿ ಮಾಡುತ್ತಿಲ್ಲ. ಹಿಂದೊಮ್ಮೆ ಈ ಕುರಿತು ಜಿಲ್ಲಾಧಿಕಾರಿ ಅವರಿಗೆ ಭಟ್ಕಳದಲ್ಲಿ ಆಧಾರ್‌ ನೋಂದಣಿ ಮತ್ತು ತಿದ್ದುಪಡಿಗಾಗಿ ಹೆಚ್ಚುವರಿ ಕೇಂದ್ರ ತೆರೆಯಬೇಕೆಂದು ಮನವಿ ಮಾಡಿದ್ದರೂ ಪ್ರಯೋಜನವಾಗಿಲ್ಲ. ಪಟ್ಟಣದ ಪುರಸಭೆ, ಜಾಲಿ ಪಟ್ಟಣ ಪಂಚಾಯಿತಿ ಮತ್ತು ಆಯಾ ಗ್ರಾಮ ಪಂಚಾಯಿತಿಗಳಲ್ಲಿ ಆಧಾರ್‌ ತಿದ್ದುಪಡಿ ಮತ್ತು ಹೊಸ ನೋಂದಣಿಗೆ ಅವಕಾಶ ನೀಡಿದರೆ ಜನರು ಅಂಚೆ ಕಚೇರಿಗೆ ಬಂದು ಸರದಿ ಸಾಲಿನಲ್ಲಿ ನಿಲ್ಲುವುದು ತಪ್ಪುತ್ತದೆ. ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯರು ಶೀಘ್ರದಲ್ಲಿ ಭಟ್ಕಳದಲ್ಲಿ ಹೆಚ್ಚುವರಿ ಆಧಾರ್‌ ಕೇಂದ್ರ ತೆರೆಯಲು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹ ವ್ಯಕ್ತವಾಗಿದೆ.

ಭಟ್ಕಳದಲ್ಲಿ ಆಧಾರ್‌ ಕಾರ್ಡ್‌ ಹೊಸ ನೋಂದಣಿ ಮತ್ತು ತಿದ್ದುಪಡಿಗಾಗಿ ಜನರು ಪರದಾಡುತ್ತಿದ್ದು ಆದಷ್ಟುಬೇಗ ಹೆಚ್ಚುವರಿ ಆಧಾರ್‌ ಕೇಂದ್ರ ತೆರೆಯಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಾಮಾಜಿಕ ಕಾರ್ಯಕರ್ತ ಕುಮಾರ ಹೆಬಳೆ ತಿಳಿಸಿದ್ದಾರೆ.