ರಾಜ್ಯದಲ್ಲಿ ಸೋಂಕು ಹರಡಲು ಮಹಾರಾಷ್ಟ್ರದಿಂದ ಬಂದವರೇ ಕಾರಣ: ಬೊಮ್ಮಾಯಿ
ರಾಜ್ಯದಲ್ಲಿ ಅತೀ ಹೆಚ್ಚು ಕೊರೋನಾ ಪ್ರಕರಣಗಳಿರುವ ಉಡುಪಿ ಜಿಲ್ಲೆ ಸೇರಿದಂತೆ 6 ಪ್ರಮುಖ ಜಿಲ್ಲೆಗಳಲ್ಲಿ ಸೋಂಕು ಹರಡುವುದಕ್ಕೆ ಮಹಾರಾಷ್ಟ್ರದಿಂದ ಬಂದವರೇ ಪ್ರಮುಖ ಕಾರಣ ಎಂದು ರಾಜ್ಯ ಗೃಹ ಸಚಿವ, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಉಡುಪಿ(ಜೂ.09): ರಾಜ್ಯದಲ್ಲಿ ಅತೀ ಹೆಚ್ಚು ಕೊರೋನಾ ಪ್ರಕರಣಗಳಿರುವ ಉಡುಪಿ ಜಿಲ್ಲೆ ಸೇರಿದಂತೆ 6 ಪ್ರಮುಖ ಜಿಲ್ಲೆಗಳಲ್ಲಿ ಸೋಂಕು ಹರಡುವುದಕ್ಕೆ ಮಹಾರಾಷ್ಟ್ರದಿಂದ ಬಂದವರೇ ಪ್ರಮುಖ ಕಾರಣ ಎಂದು ರಾಜ್ಯ ಗೃಹ ಸಚಿವ, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಸೋಮವಾರ ಉಡುಪಿ ಜಿಲ್ಲೆಯಲ್ಲಿ ಕೊರೋನಾ ಸೋಂಕು ಪರಿಸ್ಥಿತಿ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ, ನಂತರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದ್ದಾರೆ. ಮುಂಬೈಯಿಂದ ಬಂದವರಲ್ಲಿ ಕೆಲವು ಜಿಲ್ಲೆಗಳಲ್ಲಿ ಶೇ. 10ರಿಂದ ಇನ್ನು ಕೆಲವು ಜಿಲ್ಲೆಗಳಲ್ಲಿ ಶೇ. 20ರಷ್ಟುಮಂದಿಗೆ ಕೊರೋನಾ ಸೋಂಕು ಪತ್ತೆಯಾಗಿದೆ ಎಂದು ಅವರು ಹೇಳಿದರು.
ದೇಗುಲ ಓಪನ್ ಆಗುತ್ತಿದ್ದಂತೆಯೇ ಧರ್ಮಸ್ಥಳಕ್ಕೆ ಕುಮಾರ್ ಬಂಗಾರಪ್ಪ: ಕಾರಿಗೂ ವಿಶೇಷ ಪೂಜೆ
ತಾವು ಮುಂಬೈ ಕಮಿಷನರ್ ಅವರೊಂದಿಗೆ ಮಾತನಾಡಿದ್ದು, ಅವರು ಮುಂಬೈಯಲ್ಲಿ ಕೊರೋನಾ ಪರಿಸ್ಥಿತಿ ಬಗ್ಗೆ ಬಹಳ ಆತಂಕ ವ್ಯಕ್ತಪಡಿಸಿದ್ದಾರೆ. ಅಲ್ಲಿ ಈಗಾಗಲೇ ಅನಿಯಂತ್ರಿತವಾಗಿ ಕೊರೋನಾ ಹರಡಿ ಬಿಟ್ಟಿದೆ. ಖಾಸಗಿ ಆಸ್ಪತ್ರೆಗಳು ಇನ್ನೂ ತೆರೆದಿಲ್ಲ. ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದಕ್ಕೆ ಸಾಧ್ಯವಾಗದಷ್ಟುಪ್ರಕರಣಗಳು ಹೆಚ್ಚುತ್ತಿವೆ ಎಂದು ಹೇಳಿದ್ದಾರೆ. ಆದ್ದರಿಂದ ಸಹಜವಾಗಿಯೇ ಮುಂಬೈಯಿಂದ ರಾಜ್ಯಕ್ಕೆ ಬಂದವರಿಂದ ರಾಜ್ಯದಲ್ಲಿ ಸೋಂಕು ಹರಡುತ್ತಿದೆ ಎಂದು ಗೃಹ ಸಚಿವರು ಹೇಳಿದರು.
ಆದರೆ ಅವರೂ ನಮ್ಮವರೇ:
ಹಾಗಂತ ಮುಂಬೈಯಿಂದ ಬರುವವರನ್ನು ನಾವು ತಡೆಯುವುದಕ್ಕಾಗುವುದಿಲ್ಲ. ಅವರೂ ನಮ್ಮವರೇ. ಈಗಾಗಲೇ ಸಾಕಷ್ಟುಮಂದಿ ನೇರವಾಗಿ ರೈಲುಗಳಲ್ಲಿ ನಮ್ಮ ರಾಜ್ಯಕ್ಕೆ ಬರಲಾರಂಭಿಸಿದ್ದಾರೆ. ಇನ್ನೂ ಸಾಕಷ್ಟುಮಂದಿ ಸೇವಾಸಿಂಧು ಪೋರ್ಟಲ್‌ಗೆ ಅನುಮತಿಗಾಗಿ ಹೆಸರು ನೋಂದಾಯಿಸಿಕೊಂಡಿದ್ದಾರೆ. ಅವರೆಲ್ಲರಿಗೂ ಅನುಮತಿ ನೀಡಲಾಗುತ್ತದೆ. ಈ ಬಗ್ಗೆ ಆತಂಕ ಬೇಡ ಎಂದು ಉಸ್ತುವಾರಿ ಸಚಿವರು ಹೇಳಿದರು.
ಗಡಿ ತೆರವಿಗೆ ಆಗಮಿಸಿ ಬಿಜೆಪಿ ವಿರುದ್ಧವೇ ಬಿಜೆಪಿಗರ ಪ್ರತಿಭಟನೆ!
ಕಾರ್ಕಳ ಶಾಸಕ ಸುನಿಲ್ ಕುಮಾರ್, ಜಿ.ಪಂ. ಅಧ್ಯಕ್ಷ ದಿನಕರ ಬಾಬು, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಜಿಲ್ಲಾಧಿಕಾರಿ ಜಿ. ಜಗದೀಶ್, ಜಿ. ಪಂ. ಸಿಓಇ ಪ್ರೀತಿ ಗೆಹಲೋತ್ ಉಪಸ್ಥಿತರಿದ್ದರು.
ಪೊಲೀಸರಿಗೆ ಸೋಂಕು ಚಿಂತೆಯ ವಿಷಯ: ಬೊಮ್ಮಾಯಿ
ಕೊರೋನಾ ಸೋಂಕು ತಡೆಯುವಲ್ಲಿ ಮುಂಚೂಣಿಯಲ್ಲಿ ನಿಂತು ಹೋರಾಟ ನಡೆಸಿದ ಪೊಲೀಸ್ ಸಿಬ್ಬಂದಿಗೆ ಸೋಂಕು ತಗಲಿದ್ದು ಬಹಳ ಚಿಂತೆಯ ವಿಷಯವಾಗಿದೆ ಎಂದು ಗೃಹಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ರಾಜ್ಯದಲ್ಲಿ ಸುಮಾರು 65 ಮಂದಿ ಪೊಲೀಸ್ ಸಿಬ್ಬಂದಿಗೆ ಕೊರೋನಾ ಸೋಂಕು ತಗಲಿದ್ದು, ಅವರಲ್ಲಿ 30 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಉಡುಪಿ ಜಿಲ್ಲೆಯಲ್ಲಿ 11 ಮಂದಿ ಪೊಲೀಸ್ ಸಿಬ್ಬಂದಿಗೆ ಸೋಂಕು ತಗಲಿದ್ದು, ಅವರೆಲ್ಲರೂ ಬಿಡುಗಡೆಯಾಗಿದ್ದಾರೆ ಎಂದು ಸಮಾಧಾನ ವ್ಯಕ್ತಪಡಿಸಿದರು.
ಉಡುಪಿ ಜಿಲ್ಲಾಡಳಿತ ದಕ್ಷತೆಯ ನಿರ್ವಹಣೆ
ಕೊರೋನಾ ಸೋಂಕು ಪತ್ತೆ ಮಾಡುವಲ್ಲಿ ಉಡುಪಿ ಜಿಲ್ಲಾಡಳಿತ ಅತ್ಯಂತ ದಕ್ಷತೆಯಿಂದ ಕೆಲಸ ಮಾಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಶ್ಲಾಘಿಸಿದ್ದಾರೆ. ಜಿಲ್ಲೆಯಲ್ಲಿ 350ಕ್ಕೂ ಹೆಚ್ಚು ಸರ್ಕಾರಿ ಕ್ವಾರಂಟೈನ್ ಕೇಂದ್ರಗಳನ್ನು ತೆರೆಯಲಾಗಿದೆ. ಅವುಗಳಲ್ಲಿದ್ದವರೆಲ್ಲರನ್ನೂ ಸೇರಿ, ರಾಜ್ಯದಲ್ಲಿಯೇ ಅತೀ ಹೆಚ್ಚು 12, 540 ಮಂದಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಲಾಗಿದೆ ಎಂದು ಸಚಿವರು ಹೇಳಿದರು. ಆದರೆ ಜಿಲ್ಲೆಯಲ್ಲಿ ಕೊರೋನಾದಿಂದ ಸಾವು ಸಂಭವಿಸದಂತೆ ಎಚ್ಚರಿಕೆ ವಹಿಸಿ ಎಂದು ಜಿಲ್ಲಾಡಳಿತಕ್ಕೆ ಸೂಚನೆ ನೀಡಿದರು