Asianet Suvarna News Asianet Suvarna News

ದಾವಣಗೆರೆ: ಹೊನ್ನಾಳಿಯಲ್ಲಿ ಚಿರತೆ ಪ್ರತ್ಯಕ್ಷ, ಆತಂಕದಲ್ಲಿ ಜನತೆ

*  ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಅರಬಗಟ್ಟ- ಮಾದನಬಾವಿ ಬಳಿ ಚಿರತೆ ಪ್ರತ್ಯಕ್ಷ 
*  ರಕ್ಷಣಾ ಕ್ರಮ ಕೈಗೊಳ್ಳುವಂತೆ ಸೂಚಿಸಿದ ಶಾಸಕ ರೇಣುಕಾಚಾರ್ಯ 
*  ಚಿರತೆ ಸೆರೆ ಹಿಡಿಯಲು ಗ್ರಾಮಸ್ಥರ ಆಗ್ರಹ  

People in anxiety for Leopard Found at Honnali in Davanagere grg
Author
Bengaluru, First Published Sep 11, 2021, 9:08 AM IST
  • Facebook
  • Twitter
  • Whatsapp

ದಾವಣಗೆರೆ(ಸೆ.11): ಜಿಲ್ಲೆಯ ಹೊನ್ನಾಳಿ ತಾಲೂಕಿನ ಅರಬಗಟ್ಟ- ಮಾದನಬಾವಿ ಬಳಿ ಚಿರತೆ ಪ್ರತ್ಯಕ್ಷವಾಗಿದೆ. ಇಲ್ಲಿನ ವಸತಿ ಶಾಲೆಯ ಬಳಿಯೇ ಚಿರತೆ ಕಂಡಿದ್ದರಿಂದ ಜನರು ಭಯಭೀತರಾಗಿದ್ದಾರೆ. 

ಈ ಕುರಿತು ಮಾಹಿತಿ ತಿಳಿದ ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರು ವಸತಿ ಶಾಲೆ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.  ಅರಣ್ಯ ಇಲಾಖೆ ಸಿಬ್ಬಂದಿಯನ್ನು ಸ್ಥಳಕ್ಕೆ ಕರೆಸಿ ಚಿರತೆ ಚಲನವಲನದ ಬಗ್ಗೆ ಮಾಹಿತಿ ಸಂಗ್ರಹಿಸಿ ರಕ್ಷಣಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ. ಈ ಕೂಡಲೇ ಬೋನ್ ಇಟ್ಟು ಚಿರತೆ ಸೆರೆಹಿಡಿಯುವಂತೆ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.

ದಾಳಿ ಮಾಡಿದ ಚಿರತೆ ಕೊಂದು ಪ್ರಾಣ ರಕ್ಷಿಸಿಕೊಂಡ ತಂದೆ, ಮಗ

ಇತ್ತೀಚೆಗಷ್ಟೆ ಹರಿಹರ ಹಾಗೂ ಚನ್ನಗಿರಿ ತಾಲೂಕಿನ ಬಳಿ ಕಾಣಿಸಿಕೊಂಡಿದ್ದ ಚಿರತೆಯನ್ನ ಸೆರೆ ಹಿಡಿಯಲಾಗಿತ್ತು. ಇದೀಗ ಹೊನ್ನಾಳಿಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷವಾಗಿರುವುದು ಜನರಲ್ಲಿ ಆತಂಕ ಮನೆ ಮಾಡಿದ್ದು ಚಿರತೆ ಸೆರೆ ಹಿಡಿಯಬೇಕೆಂದು ಆಗ್ರಹಿಸಿದ್ದಾರೆ. 
 

Follow Us:
Download App:
  • android
  • ios