ಮೈಸೂರು (ಜೂ.09):  ಮೈಸೂರು ನಗರ ಮತ್ತು ಜಿಲ್ಲೆಯಲ್ಲಿ ಕೊರೋನಾ ಪಾಸಿಟಿವಿಟಿ ಪ್ರಮಾಣ ಕಡಿಮೆ ಆಗುತ್ತಿದೆ. ಹಾಗೆಂದು ಮೈಮರೆಯುವಂತಿಲ್ಲ ಎಂದು ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್‌ ತಿಳಿಸಿದರು.

ಜಿಲ್ಲಾಡಳಿತ, ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮೈಸೂರು ಜಿಲ್ಲಾ ಪತ್ರಕರ್ತರ ಮತ್ತು ಪತ್ರಿಕಾ ವಿತರಕರ ಸಂಘದ ಸಹಯೋಗದಲ್ಲಿ ಮಂಗಳವಾರ ವಾರ್ತಾ ಭವನದಲ್ಲಿ ಆಯೋಜಿಸಿದ್ದ 18 ರಿಂದ 44 ವಯೋಮಾನದ ಪತ್ರಕರ್ತರಿಗೆ ಹಾಗೂ ಪತ್ರಿಕಾ ವಿತರಕರಿಗೆ ಕೋವಿಡ್‌ ಲಸಿಕೆ ಹಾಕುವ ಕಾರ್ಯಕ್ರಮಕ್ಕೆ ಅವರು ಚಾಲನೆ ನೀಡಿದರು.

ಮತ್ತೊಮ್ಮೆ ಮೈಸೂರು-ಮಂಡ್ಯದಲ್ಲಿ ದಂಪತಿ ಡಿಸಿಗಳು! ...

ಸಾಂಕ್ರಾಮಿಕ ರೋಗಗಳು ಸಾಮಾನ್ಯವಾಗಿ ಒಂದೆರಡು ತಿಂಗಳಲ್ಲಿ ನಿವಾರಣೆ ಆಗುವುದಿಲ್ಲ. ಹಾಗಾಗಿ ಎಲ್ಲರೂ ತಮ್ಮ ಎಚ್ಚರಿಕೆಯಲ್ಲಿ ಇರಬೇಕು ಎಂದು ಅವರು ಹೇಳಿದರು.

ರೋಹಿಣಿ ಸಿಂಧೂರಿ ಆದೇಶ ಬದಲಾಯಿಸಿದ ಮೈಸೂರು ನೂತನ ಡಿಸಿ ...

ಜಿಲ್ಲಾ ಆರ್‌ಸಿಎಚ್‌ ಅಧಿಕಾರಿ ಡಾ.ಎಲ್‌. ರವಿ, ಡಬ್ಲ್ಯೂಎಚ್‌ಒ ಪ್ರತಿನಿಧಿ ಡಾ. ಸುಧೀರ್‌ ನಾಯಕ್‌, ಆರೋಗ್ಯ ಇಲಾಖೆಯ ವ್ಯವಸ್ಥಾಪಕ ಎನ್‌. ದಿವಾಕರ್‌, ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಆರ್‌. ರಾಜು, ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಎಸ್‌.ಟಿ. ರವಿಕುಮಾರ್‌, ಪ್ರಧಾನ ಕಾರ್ಯದರ್ಶಿ ಎಂ. ಸುಬ್ರಮಣ್ಯ, ಉಪಾಧ್ಯಕ್ಷ ಅನುರಾಗ್‌ ಬಸವರಾಜು, ಕಾರ್ಯದರ್ಶಿ ರಂಗಸ್ವಾಮಿ, ನಿರ್ದೇಶಕರಾದ ಶಿವಮೂರ್ತಿ ಜಪ್ತಿಮಠ, ಕೃಷ್ಣೋಜಿರಾವ್‌, ಜಿಲ್ಲಾ ಪತ್ರಿಕಾ ಪ್ರತಿನಿಧಿಗಳ ಸಂಘದ ಪ್ರಧಾನ ಕಾರ್ಯದರ್ಶಿ ಎ. ರವಿ, ಸಹ ಕಾರ್ಯದರ್ಶಿ ಚಂದ್ರು, ಪತ್ರಿಕಾ ವಿತರಕರ ಸಂಘದ ಅಧ್ಯಕ್ಷ ಬಿ. ಸುರೇಶ್‌ ಮೊದಲಾದವರು ಇದ್ದರು.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona