ದಾವಣಗೆರೆ [ಜ.04]: ದೇಶದಲ್ಲಿ ಜಾರಿಗೆ ತಂದಿರುವ ಪೌರತ್ವ ಕಾಯ್ದೆಯ  ಬಗ್ಗೆ ಜನ ಜಾಗೃತಿ ಮೂಡಿಸಲು ಆಗಮಿಸಿದ್ದ ಬಿಜೆಪಿ ಮುಖಂಡರನ್ನು ತರಾಟೆಗೆ ತೆಗೆದುಕೊಂಡಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ. 

ದಾವಣಗೆರೆ ನಗರದ ಎಸ್ ಒ ಜಿ ಕಾಲೋನಿಗೆ ಬಿಜೆಪಿ ಮುಖಂಡರು ಭೇಟಿ ನೀಡಿದ್ದ ವೇಳೆ ತರಾಟೆಗೆ ತೆಗೆದುಕೊಂಡಿದ್ದಾರೆ. ಬಿಜೆಪಿಗರು ಪ್ರತೀ ವಾರ್ಡಿಗೆ ತೆರಳಿ ಪೌರತ್ವ ಕಾಯ್ದೆ ಬಗ್ಗೆ ಜಾಗೃತಿ ಮೂಡಿಸುತ್ತಿದ್ದ ಬಿಜೆಪಿ ಮುಖ್ಯ ಸಚೇತಕ ಶಿವಯೋಗಿ ಸ್ವಾಮಿ ಅವರನ್ನು ತರಾಟೆಗೆ ತೆಗೆದುಕೊಂಡರು. 

ಎರೆಡೆರಡು ಬಾರಿ ಮದುವೆ ಆದ್ರೂ ಮನೆಯವ್ರು ಸಂಸಾರ ಮಾಡೋಕೆ ಬಿಡ್ತಿಲ್ಲ'...

ನಾವೆಲ್ಲರೂ ಈ ಕಾಲೋನಿಯಲ್ಲಿ ಒಗ್ಗಟ್ಟಾಗಿ ಇದ್ದೇವೆ. ಜನರನ್ನು ದಿಕ್ಕು ತಪ್ಪಿಸುವ ಕೆಲಸ ಮಾಡಬೇಡಿ ಎಂದು ಮುಖಂಡರಿಗೆ ವಾಪಸ್ ತೆರಳುವಂತೆ ಹೇಳಿದ್ದಾರೆ. ಏರು ಧ್ವನಿಯಲ್ಲಿ ತರಾಟೆ ತಗೆದುಕೊಂಡ ಜನರು ಪ್ರಧಾನಿ 

ನರೇಂದ್ರ ಮೋದಿ ಅವರಿಗೆ ಧಿಕ್ಕಾರ ಕೂಗಿದ್ದಾರೆ. ಇದರಿಂದ ಜಾಗೃತಿ ಮೂಡಿಸಲು ಆಗಮಿಸಿದ್ದ  ಮುಖಂಡರು ಬಂದ ದಾರಿಗೆ ಸುಂಕವಿಲ್ಲ ಎಂಬಂತೆ ತೆರಳಿದರು.