Chikkamagaluru: ಆರು ಸಾವಿರ ಪೌರ ಕಾರ್ಮಿಕರ ಕಾಯಂಗೆ ಕ್ರಮ

ರಾಜ್ಯದಲ್ಲಿ ದಿನಗೂಲಿ ನೌಕರರಾಗಿ ಕೆಲಸ ಮಾಡುತ್ತಿರುವ ಪೌರ ಕಾರ್ಮಿಕರ ಸೇವೆಯನ್ನು ಖಾಯಂಗೊಳಿಸಲು ಸರ್ಕಾರ ಕ್ರಮ ಕೈಗೊಂಡಿದೆ ಎಂದು ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಕುರುವಂಗಿ ವೆಂಕಟೇಶ್‌ ಹೇಳಿದರು. 

Permanent action of six thousand civic workers at chikkamagaluru gvd

ಚಿಕ್ಕಮಗಳೂರು (ಸೆ.03): ರಾಜ್ಯದಲ್ಲಿ ದಿನಗೂಲಿ ನೌಕರರಾಗಿ ಕೆಲಸ ಮಾಡುತ್ತಿರುವ ಪೌರ ಕಾರ್ಮಿಕರ ಸೇವೆಯನ್ನು ಖಾಯಂಗೊಳಿಸಲು ಸರ್ಕಾರ ಕ್ರಮ ಕೈಗೊಂಡಿದೆ ಎಂದು ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಕುರುವಂಗಿ ವೆಂಕಟೇಶ್‌ ಹೇಳಿದರು. ನಗರದ ಶಂಕರಪುರ ಪೌರ ಸೇವಾ ನೌಕರರ ಬಡಾವಣೆಗೆ ಭೇಟಿ ನೀಡಿ, ಅಭಿವೃದ್ಧಿ ನಿಗಮದಲ್ಲಿ ಪೌರಸೇವಾ ಕುಟುಂಬಗಳಿಗೆ ಸಿಗುವ ಸವಲತ್ತುಗಳ ಕುರಿತು ಕರಪತ್ರಗಳನ್ನು ಮನೆ ಮನೆಗಳಿಗೆ ತೆರಳಿ ವಿತರಿಸಿ ಮಾತನಾಡಿದ ಅವರು, ಸರ್ಕಾರದ ಈ ಸೌಲಭ್ಯವನ್ನು ಪೌರಸೇವಾ ನೌಕರರು ಹಾಗೂ ಅವರನ್ನು ಅವಲಂಭಿತ ಕುಟುಂಬದ ಸದಸ್ಯರು ಪಡೆದುಕೊಳ್ಳುವಂತೆ ಮನವಿ ಮಾಡಿದರು.

ಪೌರಸೇವಾ ನೌಕರರು ಮತ್ತು ಕುಟುಂಬಗಳಿಗೆ ನಿಗಮದಲ್ಲಿ ಹತ್ತು ಹಲವು ಕಾರ್ಯಕ್ರಮಗಳನ್ನು ರೂಪಿಸಿದ್ದು, ಅವುಗಳ ಪೂರ್ಣ ಪ್ರಯೋಜನ ಪಡೆಯುವಂತೆ ಮನವಿ ಮಾಡಿದ ವೆಂಕಟೇಶ್‌, ನಿಮ್ಮ ಕುಟುಂಬದ ಒಬ್ಬ ಸದಸ್ಯನಾಗಿ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಮಗದ ಅಧ್ಯಕ್ಷನಾಗಿ ನೇಮಕಗೊಂಡಿದ್ದೇನೆ. ಈ ನಿಗಮದಲ್ಲಿ ಪೌರ ಸೇವಾ ನೌಕರರಿಗೆ ಇರುವ ಎಲ್ಲಾ ಸೌಲಭ್ಯಗಳನ್ನು ಪಡೆಯುವಂತೆ ಹೇಳಿದರು.

Chikkamagaluru: ತೋಟದಲ್ಲಿ ಕೆಲಸ ಮಾಡುವಾಗ ಕಾರ್ಮಿಕನ ಮೇಲೆ ಕರಡಿ ದಾಳಿ: ಗಂಭೀರ ಗಾಯ

ರಾಜ್ಯದಲ್ಲಿ ದಿನಗೂಲಿ ಆಧಾರದಲ್ಲಿ ಕೆಲಸ ಮಾಡುತ್ತಿರುವ ಪೌರಸೇವಾ ನೌಕರರ ಪೈಕಿ 6 ಸಾವಿರ ನೌಕರರನ್ನು ಖಾಯಂಗೊಳಿಸುವ ಬಗ್ಗೆ ಮುಖ್ಯಮಂತ್ರಿ ನೇತೃತ್ವದಲ್ಲಿ ಸಭೆ ನಡೆಸಲಾಗಿದ್ದು, ಸದ್ಯದಲ್ಲೇ ಸಂಬಂಧಪಟ್ಟಇಲಾಖೆಯ ಅಧಿಕಾರಿಗಳ ನೇತೃತ್ವದ ಮುಂದಿನ ಸಭೆಯಲ್ಲಿ ಈ ಸಂಬಂಧ ಶಾಸಕ ಸಿ.ಟಿ.ರವಿ ಅವರೊಂದಿಗೆ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮದಿಂದ ಪೌರಸೇವಾ ಕುಟುಂಬಗಳಿಗೆ ಇರುವ ಕಾರ್ಯಕ್ರಮಗಳ ಜಾಗೃತಿ ಕುರಿತು ರಾಜ್ಯಾದ್ಯಂತ ಪ್ರವಾಸ ಕೈಗೊಂಡಿದ್ದು, ಮೊದಲ ಹಂತದ ಪ್ರವಾಸ ಮೈಸೂರಿನಿಂದ ಆರಂಭಗೊಂಡಿದ್ದು, ಚಿಕ್ಕಮಗಳೂರು ಜಿಲ್ಲೆಯಲ್ಲೂ ಪ್ರವಾಸ ಕೈಗೊಂಡಿದ್ದು, ಸಖರಾಯಪಟ್ಟಣ ಹೋಬಳಿ, ಸಖರಾಯಪಟ್ಟಣ ಜಾಗರ ಹಾಗೂ ಕಸಬಾ ಹೋಬಳಿಗಳಲ್ಲಿ ಮೊದಲ ಹಂತದ ಪ್ರವಾಸ ಮುಗಿಸಿರುವುದಾಗಿ ಹೇಳಿದರು. ಕಳೆದ ಎರಡು ದಶಕಗಳಿಂದ ಬಿಜೆಪಿ ಪಕ್ಷದಲ್ಲಿ ಪ್ರಾಮಾಣಿಕ ಕಾರ್ಯಕರ್ತನಾಗಿ ನಿಷ್ಠೆಯಿಂದ ಕೆಲಸ ಮಾಡಿದ್ದು, ಪಕ್ಷದ ವಿವಿಧ ಹುದ್ದೆಗಳಲ್ಲಿ ಕೆಲಸ ಮಾಡಿದ್ದೇನೆ ಎಂದರು.

Heavy Rain: ಎರಡೇ ಎರಡು ತಾಸು ಸುರಿದ ಮಳೆಗೆ ಕಾಫಿನಾಡು ತತ್ತರ

ಸೆ.6 ಜಾಗೃತಿ ಸಭೆ: ನಗರದ ಕುವೆಂಪು ಕಲಾಮಂದಿರದಲ್ಲಿ ಸೆ.6 ರಂದು ರಾಜ್ಯ ಸಫಾಯಿ ಕರ್ಮಚಾರಿ ಅಭಿವೃಧ್ಧಿ ನಿಗಮದಿಂದ ಪೌರಸೇವಾ ನೌಕರರು ಹಾಗೂ ಅವರನ್ನು ಅವಲಂಬಿತ ಕುಟುಂಬಗಳಿಗೆ ಸಿಗುವ ಸೌಲಭ್ಯ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು. ಈ ಸಂದರ್ಭದಲ್ಲಿ ನಗರಸಭೆ ಮಾಜಿ ಅಧ್ಯಕ್ಷ ಮುತ್ತಯ್ಯ, ಮಾಜಿ ಸದಸ್ಯ ನರಸಿಂಹ, ಚಿಕ್ಕಮಗಳೂರು ವಿಧಾನಸಭಾ ಬಿಜೆಪಿ ಕ್ಷೇತ್ರ ಸಂಘಟಕ ಸೀತಾರಾಂ ಭರಣ್ಯ ಹಾಗೂ ಬಿಜೆಪಿ ಎಸ್ಸಿ ಮೋರ್ಚಾ ನಗರಾಧ್ಯಕ್ಷ ನರಸಿಂಹಮೂರ್ತಿ ಹಾಜರಿದ್ದರು.

Latest Videos
Follow Us:
Download App:
  • android
  • ios