ಕಡಲ್ಕೊರೆತಕ್ಕೆ ಶಾಶ್ವತ ಪರಿಹಾರ ಯೋಜನೆ: ಸಿಎಂ ಸಿದ್ದರಾಮಯ್ಯ
ಜುಲೈನಲ್ಲಿ ಸುರಿದ ಮಳೆಗೆ ಕಡಲ್ಕೊರೆತ ತೀವ್ರಗೊಂಡಿದ್ದು, ಸುಮಾರು 20ಕ್ಕೂ ಅಧಿಕ ಮನೆಗಳು ಸಮುದ್ರ ಪಾಲಾಗಿವೆ. ಕಡಲ ತೀರಗಳಿಗೆ ಬಂಡೆ, ಕಲ್ಲುಗಳನ್ನು ಹಾಕಿದರೂ ಕೊರೆತ ಕಡಿಮೆಯಾಗುತ್ತಿಲ್ಲ. ಇದಕ್ಕೆ ಶಾಶ್ವತ ಪರಿಹಾರದ ಅಗತ್ಯವಿದೆ ಎಂದು ಸ್ಪೀಕರ್ ಯು.ಟಿ.ಖಾದರ್ ಅವರು ಮುಖ್ಯಮಂತ್ರಿಯವರ ಗಮನಕ್ಕೆ ತಂದರು.
ಉಳ್ಳಾಲ(ಆ.02): ಸೋಮೇಶ್ವರದ ಕಡಲ್ಕೊರೆತ ಪ್ರದೇಶ ಬಟಪಾಡಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಭೇಟಿ ನೀಡಿ ಹಾನಿಯ ವೀಕ್ಷಣೆ ನಡೆಸಿದರು. ಬಳಿಕ, ಕರಾವಳಿಯ ಮೂರು ಜಿಲ್ಲೆಗಳಲ್ಲಿ ಕಂಡು ಬಂದಿರುವ ಕಡಲ್ಕೊರೆತ ತಡೆಗೆ ಶಾಶ್ವತ ಯೋಜನೆ ರೂಪಿಸುವ ಇಂಗಿತ ವ್ಯಕ್ತಪಡಿಸಿದರು.
ಜುಲೈನಲ್ಲಿ ಸುರಿದ ಮಳೆಗೆ ಕಡಲ್ಕೊರೆತ ತೀವ್ರಗೊಂಡಿದ್ದು, ಸುಮಾರು 20ಕ್ಕೂ ಅಧಿಕ ಮನೆಗಳು ಸಮುದ್ರ ಪಾಲಾಗಿವೆ. ಕಡಲ ತೀರಗಳಿಗೆ ಬಂಡೆ, ಕಲ್ಲುಗಳನ್ನು ಹಾಕಿದರೂ ಕೊರೆತ ಕಡಿಮೆಯಾಗುತ್ತಿಲ್ಲ. ಇದಕ್ಕೆ ಶಾಶ್ವತ ಪರಿಹಾರದ ಅಗತ್ಯವಿದೆ ಎಂದು ಸ್ಪೀಕರ್ ಯು.ಟಿ.ಖಾದರ್ ಅವರು ಮುಖ್ಯಮಂತ್ರಿಯವರ ಗಮನಕ್ಕೆ ತಂದರು. ಇದಕ್ಕೆ ಪ್ರತಿಕ್ರಿಯಿಸಿ, ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡು ಹಿಡಿಯುವ ಪ್ರಯತ್ನ ಮಾಡುತ್ತೇವೆ. ಕಡಲ್ಕೊರೆತದಿಂದ ಸಂಕಷ್ಟಕ್ಕೆ ಒಳಗಾದ ಮೀನುಗಾರರಿಗೆ ಪುನರ್ವಸತಿ ವ್ಯವಸ್ಥೆ ಕಲ್ಪಿಸಲು ಸರ್ಕಾರ ಬದ್ಧವಾಗಿದೆ ಎಂದರು.
ಮಂಗಳೂರು: ನೈತಿಕ ಪೊಲೀಸ್ ಗಿರಿ ವಿರುದ್ಧ ಗುಡುಗಿದ ಸಿಎಂ ಸಿದ್ದರಾಮಯ್ಯ
ಇದೇ ವೇಳೆ, ಕಡಲ್ಕೊರೆತ ವೀಕ್ಷಣೆಗೆ ಬಟಪಾಡಿಗೆ ಆಗಮಿಸಿದ ಸಿಎಂ, ಇಲ್ಲಿನ ಜನರ ಸಮಸ್ಯೆ ಆಲಿಸಿಲ್ಲ ಎಂದು ಆರೋಪಿಸಿ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ ವಿದ್ಯಮಾನ ಕೂಡ ನಡೆಯಿತು.