ಮಾಧ್ಯಮ ಹಾಗೂ ಜಾಲತಾಣಗಳಲ್ಲಿ ಪ್ರಚುರಪಡಿಸಲು ಅನುಮತಿ ಕಡ್ಡಾಯ: ಡಿಸಿ ಕೂರ್ಮಾರಾವ್

ಜಿಲ್ಲೆಯಲ್ಲಿ ಮಾದರಿ ಚುನಾವಣಾ ನೀತಿ ಸಂಹಿತೆಯು ಜಾರಿಯಲಿದ್ದು, ಈ ಅವಧಿಯಲ್ಲಿ ಪತ್ರಿಕೆಗಳು, ದೃಶ್ಯ ಮಾಧ್ಯಮ, ಪತ್ರಿಕೆ, ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರಪಡಿಸುವ ಮುನ್ನ ಅನುಮತಿ ಕಡ್ಡಾಯವಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್ ಎಂ ತಿಳಿಸಿದರು.

Permission is mandatory to advertise in media and social networks says dc koormarao at udupi rav

ಉಡುಪಿ (ಏ.2) : ಜಿಲ್ಲೆಯಲ್ಲಿ ಮಾದರಿ ಚುನಾವಣಾ ನೀತಿ ಸಂಹಿತೆಯು ಜಾರಿಯಲಿದ್ದು, ಈ ಅವಧಿಯಲ್ಲಿ ಪತ್ರಿಕೆಗಳು, ದೃಶ್ಯ ಮಾಧ್ಯಮಗಳು, ಕೇಬಲ್ ಟಿವಿ, ಪೇಸ್‌ಬುಕ್ ವಾಟ್ಸಾಪ್ ಸೇರಿದಂತೆ ಎಲ್ಲಾ ರೀತಿಯ ಸೋಷಿಯಲ್ ಮೀಡಿಯಾಗಳಲ್ಲಿ, ಯಾವುದೇ ರಾಜಕೀಯ ಪಕ್ಷ ಅಥವಾ ಚುನಾವಣಾ ಅಭ್ಯರ್ಥಿಯ ಪರವಾಗಿ ಜಾಹೀರಾತುಗಳನ್ನು ಪ್ರಕಟಿಸಲು ಜಿಲ್ಲಾ ಎಂಸಿಎಸಿ ಸಮಿತಿಯ ಅನುಮತಿ ಕಡ್ಡಾಯವಾಗಿದ್ದು, ಸಮಿತಿಯ ಅನುಮತಿ ಪಡೆಯದೇ ಜಾಹೀರಾತು ಪ್ರಕಟಿಸಿದಲ್ಲಿ ಸಂಬಂದಪಟ್ಟವರ ವಿರುದ್ದ ಪ್ರಜಾಪ್ರತಿನಿಧಿ ಕಾಯ್ದೆಯನ್ವಯ ಪ್ರಕರಣ ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಎಚ್ಚರಿಕೆ ನೀಡಿದ್ದಾರೆ.

ಅವರು ಇಂದು ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿನ ಎಂಸಿಎಸಿ ಕಚೇರಿಗೆ ಭೇಟಿ ನೀಡಿ ಮಾತನಾಡುತ್ತಾ, ಜಾಹೀರಾತುಗಳ ಪ್ರಕಟಣೆ ಬಗ್ಗೆ ಅನುಮತಿ ಪಡೆಯುವ ಕುರಿತಂತೆ, ಜಿಲ್ಲಾ ಎಂಸಿಎಸಿ ಸಮಿತಿಗೆ ಜಾಹೀರಾತು ಪ್ರಕಟಣೆ ಕೋರಿ ಲಿಖಿತ ಅರ್ಜಿಯನ್ನು ಸಲ್ಲಿಸಿ, ಅಗತ್ಯ ಅನುಮತಿ ಪಡೆದ ನಂತರವೇ ಜಾಹೀರಾತು ಪ್ರಕಟಿಸಬೇಕು ಎಂದು ಅವರು ಹೇಳಿದರು.

Udupi: ಚುನಾವಣೆ ನೀತಿ ಸಂಹಿತೆ ಹಿನ್ನೆಲೆ, ಶಸ್ತಾಸ್ತ್ರಗಳ ಠೇವಣಿಗೆ ಜಿಲ್ಲಾಧಿಕಾರಿ ಸೂಚನೆ

ಚುನಾವಣಾ ಪ್ರಚಾರಕ್ಕಾಗಿ ಮುದ್ರಣಗೊಂಡ ಕರಪತ್ರಗಳ ಮೇಲೆ ಅದನ್ನು ಮುದ್ರಣ ಮಾಡಿದ ಮುದ್ರಕರ ಹೆಸರು, ಹಾಗೂ ವಿಳಾಸ,ಪ್ರತಿಗಳ ಸಂಖ್ಯೆ ಸೇರಿದಂತೆ ಮತ್ತಿತರ ವಿಷಯಗಳನ್ನು ಕಡ್ಡಾಯವಾಗಿ ಮುದ್ರಿಸಬೇಕು ಎಂದರು. 

ಮುದ್ರಣ ಕುರಿತ ಮಾಹಿತಿಯನ್ನು ನಿಗಧಿತ ನಮೂನೆಯಲ್ಲಿ 3 ದಿನಗಳ ಒಳಗಾಗಿ ಹಾಗೂ ಸಾಮಗ್ರಿಯ ಪ್ರತಿಯನ್ನು ಕಡ್ಡಾಯವಾಗಿ ಜಿಲ್ಲಾಧಿಕಾರಿ ಕಚೇರಿಗೆ ಒದಗಿಸಬೇಕು. ಇದರ ಉಲ್ಲಂಘನೆಯು ಪ್ರಜಾಪ್ರತಿನಿಧಿ ಕಾಯ್ದೆಯ ಉಲ್ಲಂಘನೆಯಾಗಲಿದೆ ಎಂದರು.

ಜಿಲ್ಲಾ ಎಂಸಿಎಸಿ ಕಚೇರಿಯನ್ನು ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಮೊದಲನೇ ಮಹಡಿಯಲ್ಲಿ ತೆರೆಯಲಾಗಿದ್ದು, ಜಾಹೀರಾತು ಪ್ರಕಟಣೆ ಕುರಿತಂತೆ ಅನುಮತಿ ಪಡೆಯಲು ಈ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದರು.

ಮೀಸಲಾತಿ ವಿಚಾರದಲ್ಲಿ ಅಲ್ಪಸಂಖ್ಯಾತರಿಗೆ ಅನ್ಯಾಯವಾಗಿಲ್ಲ: ಸಚಿವ ಕೋಟ ಶ್ರೀನಿವಾಸ ಪೂಜಾರಿ

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್., ಜಿಲ್ಲಾ ಎಂಸಿಎಸಿ ಸಮಿತಿಯ ನೋಡೆಲ್ ಅಧಿಕಾರಿ ಮತ್ತು ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ., ಮೇಲ್ವಿಚಾರಕರು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಉಪಸ್ಥಿತರಿದ್ದರು.

ಸೆಮಿ ಫೈನಲ್‌ ಹಂತ ತಲುಪಿದ ಹಾಸನ ಟಿಕೆಟ್‌ ದಂಗಲ್, ನಾಳೆ 2ನೇ ಪಟ್ಟಿ ಬಿಡುಗಡೆ

Latest Videos
Follow Us:
Download App:
  • android
  • ios