ಕಾರವಾರ(ಸೆ.23):ದನದ ಕೊಟ್ಟಿಗೆಗೆ ಸೊಪ್ಪು ತರಲು ಕಾಡಿಗೆ ಹೋಗಿದ್ದಾಗ ವ್ಯಕ್ತಿಯೊಬ್ಬರಿಗೆ ಹಾವಿನ ಮರಿ ಕಡಿದಿದ್ದು, ಆ ಹಾವಿನ ಮರಿಯನ್ನೇ ಹಿಡಿದುಕೊಂಡು ಆಸ್ಪತ್ರೆಗೆ ಬಂದಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯಿಂದ ವರದಿಯಾಗಿದೆ.

ಜಿಲ್ಲೆಯ ಅಂಕೋಲಾ ತಾಲೂಕಿನ ಅಂಬಾರಕೊಡ್ಲು ನಿವಾಸಿ ಬಲೀಂದ್ರ ಗೌಡ ಅವರಿಗೆ ಮಂಗಳವಾರ ಬೆಳಗ್ಗೆ ಕಾಡಿಗೆ ಹೋದಾಗ ವಿಷಪೂರಿತ ಹಾವಿನ ಮರಿ ಕಾಲಿಗೆ ಕಡಿದಿದೆ. ನೋವಾಗಿದ್ದರಿಂದ ಕೆಳಗೆ ನೋಡಿದ್ದಾರೆ. ಹಾವಿನ ಮರಿ ಕಂಡಿದ್ದು, ಮರಿಯನ್ನು ಪ್ಲಾಸ್ಟಿಕ್‌ ಚೀಲದಲ್ಲಿ ಹಾಕಿಕೊಂಡು ಅಂಕೋಲಾ ತಾಲೂಕಾಸ್ಪತ್ರೆಗೆ ಆಗಮಿಸಿದ್ದಾರೆ. 

ಕಾರವಾರ; ಸಿನಿಮೀಯ ಕಾರ್ಯಾಚರಣೆ, ಜನರಿಂದಲೇ ಮೀನುಗಾರರ ರಕ್ಷಣೆ

ಅಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಕಾರವಾರ ಜಿಲ್ಲಾ ಆಸ್ಪತ್ರೆಗೆ ತೆರಳುವಂತೆ ಅಂಕೋಲಾ ವೈದ್ಯರು ತಿಳಿಸಿದರು. ಬಳಿಕ ಜಿಲ್ಲಾ ಆಸ್ಪತ್ರೆಗೆ ಬಂದು ದಾಖಲಾಗಿದ್ದಾರೆ.